ಮೊಗಾ (ಪಂಜಾಬ್​):ಪಂಜಾಬ್​​ ಪ್ರದೇಶ ಕಾಂಗ್ರೆಸ್​ ಕಮಿಟಿ ಅಧ್ಯಕ್ಷರನ್ನಾಗಿ ಆಯ್ಕೆಗೊಂಡ ಕಾಂಗ್ರೆಸ್​ ಮುಖಂಡ ನವಜೋತ್​ ಸಿಂಗ್​ ಸಿಧು ಅವರ ಅಧಿಕಾರ ಸ್ವೀಕಾರ ಸಮಾರಂಭಕ್ಕೆ ತೆರಳುತ್ತಿದ್ದ ಗಾಡಿಯೊಂದು ಅಪಘಾತಕ್ಕೀಡಾಗಿದ್ದು, ಮೂರು ಮಂದಿ ಮೃತಪಟ್ಟಿರುವ ಘಟನೆ ಪಂಜಾಬ್​ನಲ್ಲಿ ನಡೆದಿದೆ.
ಪಂಜಾಬ್‌ನ ಮೊಗಾ ಜಿಲ್ಲೆಯಲ್ಲಿ ಎರಡು ಬಸ್ಸುಗಳು ಡಿಕ್ಕಿ ಹೊಡೆದ ಪರಿಣಾಮ ಈ ಅವಘಡ ಸಂಭವಿಸಿದೆ. ಮೂವರು ಕಾಂಗ್ರೆಸ್​ ಕಾರ್ಯಕರ್ತರು ಮೃತಪಟ್ಟಿದ್ದು, ಅನೇಕ ಮಂದಿ ಗಾಯಗೊಂಡಿದ್ದಾರೆ. ಅಪಘಾತದಲ್ಲಿ ಗಾಯಗೊಂಡವರನ್ನು ಆಸ್ಪತ್ರೆಗೆ ಸಾಗಿಸಲಾಗಿದೆ ಎಂದು ಮೊಗಾ ಹಿರಿಯ ಪೊಲೀಸ್ ವರಿಷ್ಠಾಧಿಕಾರಿ ಹರ್ಮನ್‌ಬೀರ್ ಸಿಂಗ್ ಗಿಲ್ ತಿಳಿಸಿದ್ದಾರೆ.
ಗಾಯಗೊಂಡವರನ್ನು, ಮೋಗಾದ ಜಿಲ್ಲಾ ಆಸ್ಪತ್ರೆಗೆ ಸಾಗಿಸಲಾಗಿದ್ದು, ಕೆಲವರು ಸ್ಥಿತಿ ಚಿಂತಾಜನಕವಾಗಿದೆ ಎನ್ನಲಾಗಿದೆ. ಭೀಕರವಾಗಿ ಗಾಯಗೊಂಡ ಮೂವರನ್ನು ಫರೀದ್ ಕೋಟ್ ನ ಗುರು ಗೋವಿಂದಸಿಂಗ್ ವೈದ್ಯಕೀಯ ಕಾಲೇಜು ಮತ್ತು ಆಸ್ಪತ್ರೆಗೆ ದಾಖಲು ಮಾಡಲಾಗಿದೆ. ಅಪಘಾತ ಹೇಗೆ ಸಂಭವಿಸಿದೆ ಎಂಬ ಬಗ್ಗೆ ತನಿಖೆ ಮುಂದುವರೆದಿದೆ.
ಕೊಲೆಯಾದ ಅಮ್ಮನ ಬಳಿ ಕುಳಿತು ಆಡುತ್ತಿದ್ದ ಮಕ್ಕಳು: ತಿನ್ನಲು ಬರ್ಗರ್‌ ಕೊಟ್ಟಾಗ ಹೇಳಿದರು ಭಯಾನಕ ಸತ್ಯ

ಮದುವೆಗೆ ಜಾತಿ ಅಡ್ಡಬರ್ತಿದೆ- ಆಕೆಯನ್ನು ನಡುನೀರಲ್ಲಿ ಕೈಬಿಡದೆ ಒದ್ದಾಡುತ್ತಿರುವೆ, ಪ್ಲೀಸ್ ದಾರಿ ತೋರಿ..

ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:five + two =
Remember me
