ಕೊಚ್ಚಿ (ಕೇರಳ):ಇಬ್ಬರು ವಯಸ್ಕರು ಪರಸ್ಪರ ಒಪ್ಪಿ ಲೈಂಗಿಕ ಕ್ರಿಯೆ ನಡೆಸಿ ಕೊನೆಗೆ ಮದುವೆಯಾಗಲು ನಿರಾಕರಿಸಿದರು ಎನ್ನುವ ಮಾತ್ರಕ್ಕೆ ಅದು ಅತ್ಯಾಚಾರ ಆಗುವುದಿಲ್ಲ ಎಂದು ಕೇರಳ ಹೈಕೋರ್ಟ್​ ಮಹತ್ವದ ತೀರ್ಪು ನೀಡಿದೆ.
ಈ ಮೂಲಕ ದೈಹಿಕ ಸಂಪರ್ಕಕ್ಕೆ ಒಪ್ಪಿಗೆ ನೀಡುವ ಪೂರ್ವದಲ್ಲಿ ಹತ್ತಾರು ಬಾರಿ ಯೋಚಿಸುವ ಅಗತ್ಯತೆಯ ಕುರಿತು ಕೋರ್ಟ್​ ಪರೋಕ್ಷವಾಗಿ ಬುದ್ಧಿ ಹೇಳಿದೆ. ಇಬ್ಬರು ಪ್ರಾಪ್ತ ವಯಸ್ಕರ ನಡುವಿನ ಲೈಂಗಿಕ ಸಂಬಂಧವನ್ನ ಸೆಕ್ಷನ್​​ 376ರ ಅಡಿ ಅತ್ಯಾಚಾರ ಎಂದು ಪರಿಗಣಿಸಲು ಸಾಧ್ಯವಿಲ್ಲ. ಜೋಡಿಗಳು ತಮ್ಮ ನಡುವಿನ ಸಂಬಂಧ ಮುರಿದುಕೊಂಡ ಬಳಿಕ, ಅತ್ಯಾಚಾರದ ಕೇಸ್​ ಹಾಕುತ್ತಿರುವ ಪ್ರಕರಣಗಳು ಹೆಚ್ಚುತ್ತಿವೆ ಎಂದು ಕೋರ್ಟ್​ ಅಭಿಪ್ರಾಯ ಪಟ್ಟಿದೆ.
ಆದರೆ ಮದುವೆಯಾಗುವ ಭರವಸೆ ನೀಡಿ ಒತ್ತಾಯಪೂರ್ವಕವಾಗಿ ಲೈಂಗಿಕ ಕ್ರಿಯೆ ನಡೆಸಿದರೆ ಅದು ಅಪರಾಧವಾಗುತ್ತದೆ, ಅದು ಅತ್ಯಾಚಾರ ಎಂದು ಎನಿಸಿಕೊಳ್ಳುತ್ತದೆ ಎಂದೂ ನ್ಯಾಯಮೂರ್ತಿ ಬೆಚ್ಚು ಕುರಿಯನ್​ ಥಾಮಸ್ ನೇತೃತ್ವದ ಪೀಠ ಇದೇ ವೇಳೆ ಸ್ಪಷ್ಟಪಡಿಸಿದೆ.
ಅತ್ಯಾಚಾರದ ಆರೋಪದಲ್ಲಿ ಸಿಲುಕಿರುವ ಕೇಂದ್ರ ಸರ್ಕಾರಿ ವಕೀಲರೊಬ್ಬರಿಗೆ ಜಾಮೀನು ನೀಡಿರುವ ಕೋರ್ಟ್​ ಈ ಆದೇಶ ಹೊರಡಿಸಿದೆ. ಈ ವಕೀಲರು ತಮ್ಮ ಸಹೊದ್ಯೋಗಿ ಜತೆಗೆ ನಾಲ್ಕು ವರ್ಷ ಒಪ್ಪಿಗೆಯ ಮೇಲೆ ಲೈಂಗಿಕ ಸಂಬಂಧ ಹೊಂದಿದ್ದರು. ನಂತರ ಬೇರೊಬ್ಬಳ ಜತೆ ಮದುವೆ ಮಾಡಿಕೊಳ್ಳಲು ನಿರ್ಧರಿಸಿದ್ದರು. ಇದರ ಬಗ್ಗೆ ಮಾಹಿತಿ ಗೊತ್ತಾಗುತ್ತಿದ್ದಂತೆ ಯುವತಿ ಆತ್ಮಹತ್ಯೆ ಮಾಡಿಕೊಳ್ಳಲು ಯತ್ನಿಸಿದ್ದಳು.
ಈ ಹಿನ್ನೆಲೆಯಲ್ಲಿ ವಕೀಲರನ್ನು ಪೊಲೀಸರಿಗೆ ಬಂಧಿಸಿದ್ದರು. ಇವರ ವಿರುದ್ಧ ಅತ್ಯಾಚಾರದ ಕೇಸ್​ ದಾಖಲಾಗಿತ್ತು. ಜಾಮೀನು ಕೋರಿ ಅವರು ಅರ್ಜಿ ಸಲ್ಲಿಸಿದ್ದರು. ಮಹಿಳೆ ಜತೆ ನಡೆದ ಲೈಂಗಿಕ ಸಂಬಂಧ ಒಮ್ಮತದಿಂದ ಕೂಡಿತ್ತು. ಇದು ಸಂಪೂರ್ಣವಾಗಿ ಒಪ್ಪಿಗೆ ಮತ್ತು ಪ್ರೀತಿಯಿಂದ ನಡೆದಿದೆ ಎಂದು ವಕೀಲರು ವಾದಿಸಿದ್ದರು. ವಾದ – ಪ್ರತಿವಾದ ಆಲಿಸಿರುವ ಕೋರ್ಟ್​​ ಪ್ರಕರಣ ಗಂಭೀರ ಸ್ವರೂಪದಾಗಿದೆ. ಹೀಗಾಗಿ, ಆರೋಪಿ ಬೇರೆ ಕಡೆ ಪಲಾಯನ ಮಾಡುವಂತಿಲ್ಲ. ಆದರೆ, ಇದನ್ನು ಅತ್ಯಾಚಾರ ಎನ್ನಲಾಗದು ಎಂದಿದೆ.
ಇಂಜಿನಿಯರ್​ ತಯಾರಿಸ್ತಿರೋ ಸಕತ್​ ಟೇಸ್ಟಿ ಚಾಕೊಲೇಟ್​ ಇವಂತೆ: ನೀವೂ ತಿಂದಿರಬಹುದು…ಹಾಗಿದ್ದರೆ…

ತಾಳಿ ಕಟ್ಟಲು ವರ ಮುಂದಾದಾಗ, ಹಣೆಗೆ ಬೇರೊಬ್ಬ ಹಚ್ಚಿದ ಸಿಂಧೂರ! ಆಮೇಲಾದದ್ದು ದುರಂತ

ಪ್ರಿಯಕರನ ಒಲಿಸಿಕೊಳ್ಳಲು ಆತನ ಪತ್ನಿ, ತಾಯಿಯನ್ನು ಜೀವಂತ ಸುಟ್ಟು ಹಾಕಿದ ಎರಡು ಮಕ್ಕಳ ತಾಯಿ!

ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:20 − 11 =
Remember me
