ಬೆಂಗಳೂರು: ಕರೊನಾ ಎರಡನೆಯ ಅಲೆ ಹಾಗೂ ಹೊಸ ರೂಪಾಂತರಿ ವೈರಸ್ ತನ್ನ ವೇಗವನ್ನು ಪಡೆದುಕೊಳ್ಳುತ್ತಿದೆ. ಇನ್ನೆರಡು ತಿಂಗಳು ಇದು ತೀರಾ ಅಪಾಯಕಾರಿ ಎನ್ನುವ ಮಟ್ಟದಲ್ಲಿ ಇರುವ ಹಿನ್ನೆಲೆಯಲ್ಲಿ ಇನ್ನು 2 ತಿಂಗಳ ಕಾಲ ಜನ ಎಚ್ಚರಿಕೆಯಿಂದ ಇರಬೇಕು ಎಂದು ಆರೋಗ್ಯ ಸಚಿವ ಡಾ.ಕೆ. ಸುಧಾಕರ್ ತಿಳಿಸಿದ್ದಾರೆ.
ದೇಶದಲ್ಲಿ ಹೊಸ ರೂಪಾಂತರಿ ವೈರಸ್ ಪತ್ತೆಯಾಗಿದ್ದು, ಇದರಿಂದ ಜನರು ಎಚ್ಚರಿಕೆ ವಹಿಸಬೇಕು. ಜತೆಗೆ,ಕರೊನಾ ಎರಡನೆಯ ಅಲೆ ಹೆಚ್ಚಾಗುತ್ತಿದ್ದು, ಇದಾಗಲೇ ರಾಜ್ಯ ಸರ್ಕಾರ ಇದಾಗಲೇ ಕಠಿಣ ನಿಯಮಗಳನ್ನು ಜಾರಿಗೊಳಿಸಿದೆ. ಕೆಮ್ಮು, ನೆಗಡಿ ಕಾಣಿಸಿಕೊಂಡರೆ ನಿರ್ಲಕ್ಷ್ಯ ತೋರದೆ ಪರೀಕ್ಷೆ ಮಾಡಿಸಿಕೊಳ್ಳಬೇಕು ಎಂದು ಸುಧಾಕರ್‌ ಹೇಳಿದ್ದಾರೆ.
ಹೊಸ ರೂಪಾಂತರಿ ವೈರಸ್‌ ಕುರಿತು ಮಾತನಾಡಿದ ಅವರು, ದೇಶದಲ್ಲಿ 700ಕ್ಕೂ ಹೆಚ್ಚು ಪ್ರಕರಣಗಳು ಪತ್ತೆಯಾಗಿವೆ. ರಾಜ್ಯದಲ್ಲಿ ಇಂತಹ ಪ್ರಕರಣ ಸದ್ಯ ಪತ್ತೆಯಾಗಿಲ್ಲ. ಆದ್ದರಿಂದ ಎಲ್ಲ ರೀತಿಯ ಮುನ್ನೆಚ್ಚರಿಕೆ ತೆಗೆದುಕೊಳ್ಳಬೇಕಿದೆ ಎಂದರು.
ಸಭೆ-ಸಮಾರಂಭಗಳಲ್ಲಿ, ಅಂಗಡಿ ಮುಂಗಟ್ಟುಗಳಲ್ಲಿ, ಮಾಲ್, ಹೋಟೆಲುಗಳಲ್ಲಿ ನಿಯಮಿತ ಜನಸಂದಣಿ, ಸಾಮಾಜಿಕ ಅಂತರ ನಿಯಮಗಳು ಉಲ್ಲಂಘನೆಯಾದಲ್ಲಿ ಹವಾ ನಿಯಂತ್ರಿತವಲ್ಲದ ಸಭಾಂಗಣ/ಸ್ಥಳಗಳ ಮಾಲೀಕರಿಗೆ ₹5,000 ಮತ್ತು ಹವಾನಿಯಂತ್ರಿತ ಸಭಾಂಗಣ, ಸ್ಟಾರ್ ಹೋಟೆಲ್ ಹಾಗೂ ಸಾರ್ವಜನಿಕ ಸಭೆಗಳ ಆಯೋಜಕರಿಗೆ ₹10,000 ದಂಡ ವಿಧಿಸಲಾಗುವುದು.
2/2@DHFWKApic.twitter.com/ySXIAGNVDX
— Dr Sudhakar K (@mla_sudhakar)March 25, 2021

ಈ ಕುರಿತು ಟ್ವೀಟ್‌ ಮಾಡಿರುವ ಡಾ.ಸುಧಾಕರ್‌, ಸಭೆ-ಸಮಾರಂಭಗಳಲ್ಲಿ, ಅಂಗಡಿ ಮುಂಗಟ್ಟುಗಳಲ್ಲಿ, ಮಾಲ್, ಹೋಟೆಲುಗಳಲ್ಲಿ ನಿಯಮಿತ ಜನಸಂದಣಿ, ಸಾಮಾಜಿಕ ಅಂತರ ನಿಯಮಗಳು ಉಲ್ಲಂಘನೆಯಾದಲ್ಲಿ ಹವಾ ನಿಯಂತ್ರಿತವಲ್ಲದ ಸಭಾಂಗಣ/ಸ್ಥಳಗಳ ಮಾಲೀಕರಿಗೆ 5 ಸಾವಿರ ರೂಪಾಯಿ ಮತ್ತು ಹವಾನಿಯಂತ್ರಿತ ಸಭಾಂಗಣ, ಸ್ಟಾರ್ ಹೋಟೆಲ್ ಹಾಗೂ ಸಾರ್ವಜನಿಕ ಸಭೆಗಳ ಆಯೋಜಕರಿಗೆ 10 ಸಾವಿರ ರೂಪಾಯಿ ದಂಡ ವಿಧಿಸಲಾಗುವುದು ಎಂದು ಎಚ್ಚರಿಕೆ ನೀಡಿದ್ದಾರೆ.
ಸಹೋದರರ ಗಲಾಟೆ ಬಗೆಹರಿಸಲು ಹೋಗಿ ಹೆಣವಾದ ಸಬ್‌ ಇನ್ಸ್‌ಪೆಕ್ಟರ್‌! ಗುಂಡುಹೊಡೆದು ಸಾಯಿಸಿದ ಅಣ್ಣ

ಕೂದಲು ನೇರಮಾಡಲು ಯೂಟ್ಯೂಬ್‌ ಮೊರೆ ಹೋಗಿ ಬೆಂಕಿಯಲ್ಲಿ ಬೆಂದು ಹೋದ ಬಾಲಕ!

ಸ್ವಯಾರ್ಜಿತ ಆಸ್ತಿಯನ್ನು ಹೆಣ್ಣುಮಕ್ಕಳಿಗೆ ಕೊಡಲು ತಂದೆಗೆ ಇಷ್ಟವಿಲ್ಲ, ಇದಕ್ಕೆ ಅವಕಾಶವಿದೆಯಾ?

ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
ಭಾರತದಲ್ಲಿ ಬೇಳೆಕಾಳುಗಳು ಜನರು ಬಹುಮುಖ್ಯ ಭಕ್ಷ್ಯವಾಗಿದೆ. ಬೇಳೆಕಾಳುಗಳನ್ನು ವಾರಕ್ಕೊಮ್ಮೆಯಾದರೂ ತಿನ್ನಲಾಗುತ್ತದೆ. ಈ ಬೇಳೆಕಾಳುಗಳು ಪೋಷಕಾಂಶಗಳ ಆಗರವಾಗಿದ್ದು,…
ಬೆಂಗಳೂರು:  ಪಾಲಕರು ಪ್ರತಿ ಮಗುವಿನ ಮೊದಲ ಶಿಕ್ಷಕರು, ಅವರ ರೋಲ್ ಮಾಡೆಲ್. ಮಕ್ಕಳ ನಡವಳಿಕೆಯ ಮೇಲೆ…
Sign in to your account
Please enter an answer in digits:7 − 3 =
Remember me
