ಮುಂಬೈ:ಕ್ಷಣ ಕ್ಷಣಕ್ಕೂ ಕುತೂಹಲ ಕೆರಳಿಸುತ್ತಿದೆ ಮಹಾರಾಷ್ಟ್ರ ಸರ್ಕಾರದ ರಾಜಕೀಯ ಬೆಳವಣಿಗೆ. ಶಿವಸೇನಾ ಮುಖಂಡ ಏಕನಾಥ್ ಶಿಂಧೆ ಕೊಟ್ಟ ಶಾಕ್​ಗೆ ಮಹಾರಾಷ್ಟ್ರ ಸರ್ಕಾರ ಪತನದ ಅಂಚಿನಲ್ಲಿದೆ. ಇನ್ನೇನು ಸರ್ಕಾರ ಪತನವಾಗಲು ಕ್ಷಣಗಣನೆ ಎದುರಾಗುತ್ತಿದೆ ಎಂದೇ ಹೇಳಲಾಗುತ್ತಿದೆ.
ಇದರ ನಡುವೆಯೇ ಮುಖ್ಯಮಂತ್ರಿ ಉದ್ಧವ್​ ಠಾಕ್ರೆ ಮಹತ್ವದ ಸಭೆ ನಡೆಸಲು ತೀರ್ಮಾನಿಸಿದ್ದರು. ಆದರೆ ಅವರಿಗೆ ಕರೊನಾ ಲಕ್ಷಣಗಳು ಕಾಣಿಸಿಕೊಂಡಿದ್ದರಿಂದ ಪರೀಕ್ಷೆ ಮಾಡಿಸಿಕೊಂಡಿದ್ದರು. ಅದರಲ್ಲಿ ಅವರಿಗೆ ಕರೊನಾ ಪಾಸಿಟಿವ್​ ಕಾಣಿಸಿಕೊಂಡಿತ್ತು. ಈ ಹಿನ್ನೆಲೆಯಲ್ಲಿ ಅವರು ವರ್ಚುವಲ್​ ಸಭೆಯಲ್ಲಿ ಪಾಲ್ಗೊಂಡಿದ್ದರು. ಇದಕ್ಕೂ ಮುನ್ನ ಮಹಾರಾಷ್ಟ್ರ ರಾಜ್ಯಪಾಲರಿಗೂ ಕರೊನಾ ಕಾಣಿಸಿಕೊಂಡಿತ್ತು.
ಸಿಎಂ ಠಾಕ್ರೆಯವರಿಗೆ ಕರೊನಾ ಕಾಣಿಸಿಕೊಂಡಿರುವುದು ಈ ಹೊತ್ತಿನಲ್ಲಿ ಭಾರಿ ಗೊಂದಲ ಸೃಷ್ಟಿಸಿತ್ತು. ಇಂಥ ಮಹತ್ವದ ಸಮಯದಲ್ಲಿ ಕರೊನಾ ಕಾಣಿಸಿಕೊಂಡಿರುವ ಹಿನ್ನೆಲೆಯಲ್ಲಿ ಅನೇಕ ಮಹತ್ವದ ನಿರ್ಧಾರಗಳನ್ನು ತೆಗೆದುಕೊಳ್ಳುವುದು ಕಷ್ಟ ಎಂದೇ ಎಣಿಸಲಾಗಿತ್ತು.
ಆದರೆ ಇದೀಗ ಮಹಾರಾಷ್ಟ್ರ ಸರ್ಕಾರದ ಬಿಕ್ಕಟ್ಟಿನಂತೆಯೇ ಕರೊನಾ ಪರೀಕ್ಷೆ ಕೂಡ ಕುತೂಹಲ ಮೂಡಿಸಿದೆ. ಉದ್ಧವ್​ ಠಾಕ್ರೆ ಅವರಿಗೆ ಇದೀಗ ಆರ್​ಟಿಪಿಸಿಆರ್​ ಪರೀಕ್ಷೆ ಮಾಡಿಸಲಾಗಿದ್ದು, ಅದರಲ್ಲಿ ಕರೊನಾ ನೆಗೆಟಿವ್​ ತೋರಿಸಿದೆ. ಇದರಿಂದ ಮುಖ್ಯಮಂತ್ರಿಗಳು ಸ್ವಲ್ಪ ನೆಮ್ಮದಿಯ ಉಸಿರು ಬಿಟ್ಟಿದ್ದಾರೆ.
ಶಿವಸೇನೆ ಸಂಸದ ಸಂಜಯ್​ ರಾವತ್​ ರಾಜ್ಯ ವಿಧಾನಸಭೆ ವಿಸರ್ಜನೆಯ ಸುಳಿವು ನೀಡಿದ್ದಾರೆ. ಮಹಾರಾಷ್ಟ್ರದಲ್ಲಿ ನಡೆಯುತ್ತಿರುವ ರಾಜಕೀಯ ಬಿಕ್ಕಟ್ಟು ವಿಧಾನಸಭೆ ವಿಸರ್ಜನೆಯತ್ತ ಸಾಗುತ್ತಿದೆ ಎಂದು ಟ್ವೀಟ್ ಮಾಡಿದ್ದಾರೆ. ಇದರಿಂದ ಮಹಾರಾಷ್ಟ್ರ ಸರ್ಕಾರದ ರಾಜಕೀಯದ ಬಗ್ಗೆ ಇನ್ನಷ್ಟು ಕುತೂಹಲ ಮೂಡಿದೆ.
‘ಮಹಾ’ ಡ್ರಾಮಕ್ಕೊಂದು ಟ್ವಿಸ್ಟ್​: ಕಾಣೆಯಾಗಿದ್ದ ಶಿವಸೇನೆ ಶಾಸಕ ಪ್ರತ್ಯಕ್ಷ! ಕಿಡ್ನಾಪ್​ ಮಾಡಿ ಆಸ್ಪತ್ರೆ ಸೇರಿಸಿದ್ರು ಎಂದ ದೇಶ್​ಮುಖ್​
‘ಮಹಾ’ ಸರ್ಕಾರದ ಬಿಕ್ಕಟ್ಟಿನ ನಡುವೆಯೇ ಹಂಗಾಮಾ ಸೃಷ್ಟಿಸಿದ ಸಚಿವನ ‘ಪತ್ನಿ’: ಪರಪುರುಷನ ಜತೆ ಲಾಡ್ಜ್​ನಲ್ಲಿ ಅರೆಸ್ಟ್​!

ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:two × 2 =
Remember me
