ಹೈದರಾಬಾದ್:ಐದು ಕೋಟಿ ಲಂಚ ಸ್ವೀಕಾರ ಪ್ರಕರಣದಲ್ಲಿ ಬಂಧಿತರಾಗಿದ್ದ ತಹಶೀಲ್ದಾರ್​ ಒಬ್ಬರು ಜೈಲಿನಲ್ಲಿಯೇ ಆತ್ಮಹತ್ಯೆ ಮಾಡಿಕೊಂಡಿದ್ದಾರೆ.
ಎರ್ವಾ ಬಸವರಾಜು ನಾಗರಾಜು ಎನ್ನುವ ತಹಶೀಲ್ದಾರ್​ ಆತ್ಮಹತ್ಯೆ ಮಾಡಿಕೊಂಡವರು. ಹೈದರಾಬಾದ್​ನ ಚಂಚಲಗೂಡ ಜೈಲಿನಲ್ಲೇ ಈ ಘಟನೆ ಸಂಭವಿಸಿದೆ. ಭ್ರಷ್ಟಾಚಾರ ಆರೋಪದ ಮೇಲೆ ಸೆರೆವಾಸದಲ್ಲಿದ್ದ ಕೀಸರ ಮಾಜಿ ತಹಶೀಲ್ದಾರ್ ಚಂಚಲಗೂಡ ಜೈಲಿನಲ್ಲೇ ಆತ್ಮಹತ್ಯೆ ಮಾಡಿಕೊಂಡಿದ್ದಾರೆ.
ಲಂಚ ಪ್ರಕರಣ ಹಿನ್ನೆಲೆಯಲ್ಲಿ ಎನ್ ಸಿಬಿ ಅಧಿಕಾರಿಗಳು ನಾಗರಾಜು ಅವರನ್ನು ಬಂಧಿಸಿ ನ್ಯಾಯಾಂಗ ಬಂಧನಕ್ಕೊಳಪಡಿಸಿದ್ದರು. ಜತೆಗೆ ಅವರ ವಿರುದ್ಧ ಎರಡು ಪ್ರಕರಣಗಳನ್ನು ದಾಖಲಿಸಿದ್ದರು. 5 ಕೋಟಿ ರೂಪಾಯಿ ಲಂಚ ಪಡೆಯುತ್ತಿದ್ದ ವೇಳೆ ಎಸಿಬಿಗೆ ರೆಡ್ ಹ್ಯಾಂಡ್ ಆಗಿ ಸಿಕ್ಕಿಬಿದ್ದಿದ್ದರು ಎನ್ನಲಾಗಿದೆ.
ಇದನ್ನೂ ಓದಿ:ಗೋಮಾಂಸ ಮಾರಾಟ ಶಂಕೆ, ಮಾಂಸದಂಗಡಿಗಳಿಗೆ ಮೇಯರ್‌ ದಾಳಿ
ಇಂದು ಬೆಳಗ್ಗೆ ಜೈಲಿನ ಕೊಠಡಿಯಲ್ಲಿ ಅವರ ದೇಹ ನೇತಾಡುತ್ತಿದ್ದನ್ನು ನೋಡಿದ ಜೈಲರ್ ಹಿರಿಯ ಅಧಿಕಾರಿಗಳಿಗೆ ಮಾಹಿತಿ ನೀಡಿದ್ದಾರೆ.
ಮೇಲ್ನೋಟಕ್ಕೆ ಇದು ಆತ್ಮಹತ್ಯೆ ಎಂದು ಕಂಡುಬಂದಿದೆ. ಈ ಬಗ್ಗೆ ಪ್ರಕರಣ ದಾಖಲು ಮಾಡಿಕೊಳ್ಳಲಾಗಿದೆ. ಮುಂದಿನ ಪ್ರಕ್ರಿಯೆ ನಡೆಸಲಾಗುತ್ತಿದೆ ಎಂದು ಪೊಲೀಸರು ಹೇಳಿದ್ದಾರೆ.
ಸಿಎಂ ಎದುರು ಹೊಸ ಬೇಡಿಕೆ ಇಟ್ಟ ಶ್ರೀರಾಮುಲು? ಅವರ ಆಸೆ ಏನು ಗೊತ್ತಾ?

ಮುಸ್ಲಿಂ ಯುವತಿಯ ಸ್ನೇಹಕ್ಕಾಗಿ ಬಿತ್ತು ಮತ್ತೊಂದು ಹೆಣ: ಐವರಿಂದ ಹಿಂದೂ ಯುವಕನ ಹತ್ಯೆ!

ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
ಭಾರತದಲ್ಲಿ ಬೇಳೆಕಾಳುಗಳು ಜನರು ಬಹುಮುಖ್ಯ ಭಕ್ಷ್ಯವಾಗಿದೆ. ಬೇಳೆಕಾಳುಗಳನ್ನು ವಾರಕ್ಕೊಮ್ಮೆಯಾದರೂ ತಿನ್ನಲಾಗುತ್ತದೆ. ಈ ಬೇಳೆಕಾಳುಗಳು ಪೋಷಕಾಂಶಗಳ ಆಗರವಾಗಿದ್ದು,…
ಬೆಂಗಳೂರು:  ಪಾಲಕರು ಪ್ರತಿ ಮಗುವಿನ ಮೊದಲ ಶಿಕ್ಷಕರು, ಅವರ ರೋಲ್ ಮಾಡೆಲ್. ಮಕ್ಕಳ ನಡವಳಿಕೆಯ ಮೇಲೆ…
Sign in to your account
Please enter an answer in digits:8 − 5 =
Remember me
