ವಾಷಿಂಗ್ಟನ್‌:ವಿದೇಶಗಳಿಗೆ ಹೋಗುವವರಿಗೆ ಲಸಿಕೆಯನ್ನು ಕಡ್ಡಾಯ ಮಾಡಲಾಗಿದೆ. ಲಸಿಕೆ ಹಾಕಿಸಿಕೊಂಡರಷ್ಟೇ ತಮ್ಮ ದೇಶಕ್ಕೆ ಪ್ರವೇಶ ಎಂದು ಅಮೆರಿಕ ಸೇರಿದಂತೆ ಹಲವು ದೇಶಗಳು ಇದಾಗಲೇ ಘೋಷಣೆ ಮಾಡಿವೆ.ಆದರೆ ಇದೀಗ ವಿದ್ಯಾರ್ಥಿಗಳಿಗೆ ರಿಯಾಯಿತಿ ನೀಡಿರುವ ಅಮೆರಿಕ, ಭಾರತೀಯ ವಿದ್ಯಾರ್ಥಿಗಳು ತಮ್ಮ ದೇಶಕ್ಕೆ ಬರುವುದಾದರೆ ಲಸಿಕೆ ಕಡ್ಡಾಯವಲ್ಲ ಎಂದು ಹೇಳಿದೆ. ಈ ಕುರಿತು ವಿದೇಶಾಂಗ ಸಚಿವಾಲಯದ ವಕ್ತಾರ ಅರಿಂದಮ್ ಬಾಗ್ಚಿ, ಮಾಹಿತಿ ನೀಡಿದ್ದಾರೆ.
ನಮ್ಮ ದೇಶಕ್ಕೆ ಭಾರತೀಯ ವಿದ್ಯಾರ್ಥಿಗಳು ಪ್ರಯಾಣಿಸಲು ವ್ಯಾಕ್ಸಿನೇಷನ್ ಕಡ್ಡಾಯವಲ್ಲ ಎಂದು ವಕ್ತಾರ ತಿಳಿಸಿದ್ದರೆ, ಅಲ್ಲಿಯ ಕೆಲವು ಪ್ರಮುಖ ಶಿಕ್ಷಣ ಸಂಸ್ಥೆಗಳು ಲಸಿಕೆ ಕಡ್ಡಾಯ ಎಂದು ಘೋಷಿಸಿವೆ. ಈ ಹಿನ್ನೆಲೆಯಲ್ಲಿ ಸ್ವಲ್ಪ ಕನ್‌ಫ್ಯೂಷನ್‌ ಏರ್ಪಟ್ಟಿದ್ದು, ಈ ಬಗ್ಗೆ ಗೊಂದಲವನ್ನು ಶೀಘ್ರದಲ್ಲಿ ಪರಿಹರಿಸಲಾಗುವುದು ಎಂದು ಸರ್ಕಾರ ಹೇಳಿದೆ. ಕರೊನಾ ಲಸಿಕೆಯನ್ನು ವಿದ್ಯಾರ್ಥಿಗಳಿಗೆ ಕಡ್ಡಾಯ ಮಾಡದೇ ಇರಲು ಶಿಕ್ಷಣ ಸಂಸ್ಥೆಗಳಿಗೆ ಸೂಚನೆ ನೀಡಲಾಗುವುದು ಎಂದು ವಕ್ತಾರರು ಹೇಳಿದ್ದಾರೆ.
ಜನವರಿ 26 ರಿಂದ ಅಮೆರಿಕಕ್ಕೆ ಬರುವ ಎರಡು ವರ್ಷ ಅಥವಾ ಅದಕ್ಕಿಂತ ಹೆಚ್ಚಿನ ವಯಸ್ಸಿನ ಎಲ್ಲಾ ಪ್ರಯಾಣಿಕರು ಕರೊನಾ ನೆಗೆಟಿವ್‌ ವರದಿ ಹೊಂದಿರುವುದು ಕಡ್ಡಾಯ. ಕರೊನಾ ಸೋಂಕಿನಿಂದ ಗುಣಮುಖರಾಗಿದ್ದರೆ ಅದರ ವರದಿ ಹೊಂದಿರಬೇಕು ಎಂದು ವಕ್ತಾರರು ಮಾಹಿತಿ ನೀಡಿದ್ದಾರೆ.
ಕ್ಯಾಲೆಂಡರ್‌ಗೋಸ್ಕರ ಪುನಃ ಟಾಪ್‌ಲೆಸ್‌ ಆದ ನಟಿ- ಹಾಟ್‌ ಫೋಟೋಗಳು ವೈರಲ್‌

ಕೃಷಿ ವಿಶ್ವವಿದ್ಯಾಲಯದಲ್ಲಿ ಖಾಲಿ ಇರುವ ವಿವಿಧ ಹುದ್ದೆಗಳಿಗೆ ಅರ್ಜಿ ಆಹ್ವಾನ

ಪತಿ ಮೃತಪಟ್ಟಿದ್ದು, ಮತ್ತೊಂದು ವಿವಾಹವಾಗಿದ್ದೇನೆ- ಮೊದಲ ಗಂಡನ ಆಸ್ತಿ ನನಗೆ ಸಿಗುತ್ತಾ?

ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:five × one =
Remember me
