ಪಟ್ನಾ:ಕುತೂಹಲದ ಬೆಳವಣಿಗೆಯಲ್ಲಿ ಬಿಹಾರದ ಉಪಮುಖ್ಯಮಂತ್ರಿ ಸ್ಥಾನದಿಂದ ಸುಶೀಲ್​ಕುಮಾರ್​ ಮೋದಿ ಅವರನ್ನು ಕೈಬಿಡಲಾಗಿದೆ.
ಮುಖ್ಯಮಂತ್ರಿ ಹುದ್ದೆಗೆ ಶಾಸಕಾಂಗ ನಾಯಕನ ಆಯ್ಕೆಗಾಗಿ ನಡೆದ ಎನ್.ಡಿ.ಎ. ಶಾಸಕರ ಸಭೆಯಲ್ಲಿ ನಿತೀಶ್ ಕುಮಾರ್ ಅವರನ್ನು ಮುಖ್ಯಮಂತ್ರಿಯಾಗಿ ಆಯ್ಕೆ ಮಾಡಲಾಗಿದೆ. ಉಪಮುಖ್ಯಮಂತ್ರಿ ಸ್ಥಾನಕ್ಕೆ ಕೊನೆ ಕ್ಷಣದವರೆಗೂ ಮೋದಿ ಅವರ ಹೆಸರೇಹೇಳಿಬಂದಿತ್ತು. ಅವರೇ ಮತ್ತೊಮ್ಮೆ ಉಪಮುಖ್ಯಮಂತ್ರಿಯಾಗುವುದು ಬಹುತೇಕ ಖಚಿತವಾಗಿತ್ತು.
भाजपा एवं संघ परिवार ने मुझे ४० वर्षों के राजनीतिक जीवन में इतना दिया की शायद किसी दूसरे को नहीं मिला होगा।आगे भी जो ज़िम्मेवारी मिलेगी उसका निर्वहन करूँगा।कार्यकर्ता का पद तो कोई छीन नहीं सकता।
— Sushil Kumar Modi (@SushilModi)November 15, 2020

ಆದರೆ ಕೊನೆಯ ಕ್ಷಣದಲ್ಲಿ ಉಪ ಮುಖ್ಯಮಂತ್ರಿಗಳಾಗಿ ತಾರ್ ಕಿಶೋರ್ ಪ್ರಸಾದ್, ರೇಣು ದೇವಿ ಅವರನ್ನು ಆಯ್ಕೆಮಾಡಲಾಗಿದೆ. ಈ ಮೂಲಕ ಸುಶೀಲ್​ಕುಮಾರ್​ ಮೋದಿ ಅವರ ಹೆಸರನ್ನು ಕೈಬಿಟ್ಟಿರುವುದಾಗಿ ಮೂಲಗಳು ಹೇಳಿವೆ.
ಈ ಕುರಿತು ವಿಷಯ ತಿಳಿಯುತ್ತಲೇ ಟ್ವೀಟ್​ ಮಾಡಿದ ಸುಶೀಲ್​ಕುಮಾರ್ ಮೋದಿ, ಬಿಜೆಪಿ ಹಾಗೂ ಸಂಘ ಪರಿವಾರ ನನಗೆ ಬಹಳಷ್ಟು ಕೊಟ್ಟಿದೆ. 40 ವರ್ಷದ ರಾಜಕೀಯದಲ್ಲಿ ಬಿಜೆಪಿ ನನಗೆ ಸಾಕಷ್ಟು ವಿಷಯಗಳನ್ನು ತಿಳಿಸಿಕೊಟ್ಟಿದೆ. ಕಾರ್ಯಕರ್ತ ಎಂಬ ಹುದ್ದೆಯನ್ನು ಯಾರೂ ಕಸಿದುಕೊಳ್ಳಲು ಸಾಧ್ಯವಿಲ್ಲ ಎಂದಿದ್ದಾರೆ.
ಜತೆಗೆ, ಪಕ್ಷ ನೀಡುವ ಜವಾಬ್ದಾರಿಯನ್ನು ನಾನು ನಿರ್ವಹಿಸುತ್ತೇನೆ ಎಂದಿದ್ದಾರೆ.
ನಿತೀಶ್​ ಬಿಹಾರದ ಸಿಎಂ ಆಗಲು ಸಾಧ್ಯವೇ ಇಲ್ಲ- ಆರ್‌ಜೆಡಿ ನಾಯಕ ಮನೋಜ್‌ ಸಿಡಿಸಿದರು ಬಾಂಬ್​

ಕಾಂಗ್ರೆಸ್ ಮುಖಂಡ ಅಹಮ್ಮದ್​ ಪಟೇಲ್ ಸ್ಥಿತಿ ಗಂಭೀರ: ಐಸಿಯುಗೆ ಶಿಫ್ಟ್​

ಅಮೆರಿಕದ 231 ವರ್ಷಗಳಲ್ಲೇ ಹೊಸ ದಾಖಲೆ ಬರೆದ ಜಿಲ್ ಬೈಡೆನ್​

ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
ಭಾರತದಲ್ಲಿ ಬೇಳೆಕಾಳುಗಳು ಜನರು ಬಹುಮುಖ್ಯ ಭಕ್ಷ್ಯವಾಗಿದೆ. ಬೇಳೆಕಾಳುಗಳನ್ನು ವಾರಕ್ಕೊಮ್ಮೆಯಾದರೂ ತಿನ್ನಲಾಗುತ್ತದೆ. ಈ ಬೇಳೆಕಾಳುಗಳು ಪೋಷಕಾಂಶಗಳ ಆಗರವಾಗಿದ್ದು,…
ಬೆಂಗಳೂರು:  ಪಾಲಕರು ಪ್ರತಿ ಮಗುವಿನ ಮೊದಲ ಶಿಕ್ಷಕರು, ಅವರ ರೋಲ್ ಮಾಡೆಲ್. ಮಕ್ಕಳ ನಡವಳಿಕೆಯ ಮೇಲೆ…
Sign in to your account
Please enter an answer in digits:eighteen − sixteen =
Remember me
