ನವದೆಹಲಿ:ಭಾರತದಲ್ಲಿ ಅಂಗಾಗ ದಾನ ಮಾಡುವವರ ಕೊರತೆ ಇದೆ. ಜತೆಗೆ ಅಂಗಾಗಗಳ ಬೇಡಿಕೆ ಮತ್ತು ಪೂರಕೆಯಲ್ಲೂ ತುಂಬಾ ಅಂತರವಿದೆ. ಈ ಹಿನ್ನೆಲೆಯಲ್ಲಿ ಅಂಗಾಂಗ ದಾನಗಳ ಕುರಿತು ಖಾಸಗಿ ಮಸೂದೆಗೆ ಬಿಜೆಪಿ ಸಂಸದ ವರುಣ್ ಗಾಂಧಿ ಮುಂದಾಗಿದ್ದಾರೆ.
ಈ ಕುರಿತು ಮಾಹಿತಿ ನೀಡಿರುವ ಅವರು, ಯುವ ಜನರಲ್ಲಿ ಅಂಗಾಂಗ ದಾನವನ್ನು ಉತ್ತೇಜಿಸುವುದಕ್ಕಾಗಿ ಸಂಸತ್ತಿನ ಮುಂಗಾರು ಅಧಿವೇಶನದಲ್ಲಿ ಸಂಸದರ ಖಾಸಗಿ ಮಸೂದೆಯೊಂದನ್ನು ಮಂಡಿಸುವುದಾಗಿ ಮಾಹಿತಿ ನೀಡಿದ್ದಾರೆ.
ಪ್ರತಿ ವರ್ಷ 2 ಲಕ್ಷ ಮೂತ್ರಪಿಂಡಗಳು, 50 ಸಾವಿರ ಹೃದಯಗಳು ಮತ್ತು 50 ಸಾವಿರ ಲಿವರ್‌ಗಳು ಕಸಿಗಾಗಿ ಬೇಕಾಗಿವೆ. ಆದರೆ ಇವು ಸಿಗದೇ ಹಲವಾರು ರೋಗಿಗಳು ಮೃತಪಡುತ್ತಿರುವ ಪ್ರಕರಣ ಹೆಚ್ಚಾಗುತ್ತಿದೆ. ಈ ಹಿನ್ನೆಲೆಯಲ್ಲಿ ಮೃತರ ಅಂಗಾಂಗಗಳನ್ನು ದಾನ ಮಾಡುವುದು ಇಂದಿನ ಅಗತ್ಯವಾಗಿದೆ ಎಂದು ಅವರು ಹೇಳಿದ್ದಾರೆ.
ಇದನ್ನೂ ಓದಿ:ಕರೊನಾದಿಂದ ಸಿದ್ದರಾಮಯ್ಯ, ‍ಪುತ್ರ ಗುಣಮುಖ: ಆಸ್ಪತ್ರೆಯಿಂದ ಡಿಸ್‌ಚಾರ್ಜ್‌
ಮಾನವ ಅಂಗಾಂಗ ದಾನ ಮತ್ತು ಕಸಿ ಮಸೂದೆ-2020ಯನ್ನು (Donation and Transplantation of Human Organ Bill, 2020′) ಸಂಸತ್ತಿನ ಮುಂಗಾರು ಅಧಿವೇಶನದಲ್ಲಿ ಮಂಡಿಸಲಾಗುವುದು. ವ್ಯಕ್ತಿ ಸತ್ತ ನಂತರ ಅಂಗಾಗ ದಾನ ಮಾಡುವುದನ್ನು ಕಡ್ಡಾಯಗೊಳಿಸಲಿದೆ ಎಂಬ ಮಾಹಿತಿಯನ್ನು ವರುಣ್‌ ಗಾಂಧಿ ನೀಡಿದ್ದಾರೆ.
#OrganDonationDay ಹ್ಯಾಷ್‌ಟ್ಯಾಗ್ ಮೂಲಕ ಟ್ವೀಟ್ ಮಾಡಿರುವ ವರುಣ್‌ ಗಾಂಧಿಯವರು, ದೇಶದಲ್ಲಿರುವ ಎಲ್ಲ ನಾಗರಿಕರು ಅಂಗಾಗ ದಾನಕ್ಕೆ ಸ್ವಯಂ ಪ್ರೇರಿತವಾಗಿ ನೋಂದಣಿ ಮಾಡಿಸಿಕೊಳ್ಳುವುದನ್ನು ಉತ್ತೇಜಿಸಲು ಈ ಖಾಸಗಿ ಮಸೂದೆಯನ್ನು ಮಂಡಿಸುತ್ತಿದ್ದೇನೆ. ಇದರಿಂದ ಅಂಗಾಗ ಕೊರತೆಯಿಂದ ಮೃತರಾಗುತ್ತಿರುವವರ ಸಂಖ್ಯೆಯನ್ನು ಕಡಿಮೆ ಮಾಡಲು ಸಾಧ್ಯವಿದೆ ಎಂದಿದ್ದಾರೆ.
ಮಚ್ಚು ಹಿಡಿದು ಚಿನ್ನದಂಗಡಿಗೆ ನುಗ್ಗಿದವನ ಚಚ್ಚಿದಳು ಚಿಕ್ಕಮಗಳೂರು ಮಹಿಳೆ!

ನಾಯಿಗಳು ಕಚ್ಚಿ ತಿಂದ ಕರೊನಾ ಸೋಂಕಿತನ ಶವ!

ಪಾಕ್‌ಗೆ ಬಿಗ್‌ ಷಾಕ್‌: ಸಾಲವೂ ಬಂದ್‌, ತೈಲವೂ ಬಂದ್‌ ಎಂದ ಸೌದಿ ಅರೇಬಿಯಾ!

ಫ್ರಿಜ್‌ ಟ್ರೇ ಬಳಸಿ ಆನ್‌ಲೈನ್‌ ಕ್ಲಾಸ್‌: ಶಿಕ್ಷಕಿಯ ಪ್ಲ್ಯಾನ್‌ಗೆ ಅಪಾರ ಮೆಚ್ಚುಗೆ

ದಫನ್‌ ಆಗಿದ್ದವ ರಾತ್ರಿ ಹೆಂಡತಿಗೆ ಪ್ರತ್ಯಕ್ಷನಾಗಿ ನಾನೇ ನಿನ್ನ ಗಂಡ ಎಂದ!

ಸರ್ಕಾರಿ ಆಸ್ಪತ್ರೆಯಲ್ಲಿ ಜಿಲ್ಲಾಧಿಕಾರಿ ಪತ್ನಿ ಡೆಲಿವರಿ: ಶ್ಲಾಘನೆಗಳ ಮಹಾಪೂರ

ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
ಭಾರತದಲ್ಲಿ ಬೇಳೆಕಾಳುಗಳು ಜನರು ಬಹುಮುಖ್ಯ ಭಕ್ಷ್ಯವಾಗಿದೆ. ಬೇಳೆಕಾಳುಗಳನ್ನು ವಾರಕ್ಕೊಮ್ಮೆಯಾದರೂ ತಿನ್ನಲಾಗುತ್ತದೆ. ಈ ಬೇಳೆಕಾಳುಗಳು ಪೋಷಕಾಂಶಗಳ ಆಗರವಾಗಿದ್ದು,…
ಬೆಂಗಳೂರು:  ಪಾಲಕರು ಪ್ರತಿ ಮಗುವಿನ ಮೊದಲ ಶಿಕ್ಷಕರು, ಅವರ ರೋಲ್ ಮಾಡೆಲ್. ಮಕ್ಕಳ ನಡವಳಿಕೆಯ ಮೇಲೆ…
Sign in to your account
Please enter an answer in digits:seventeen + five =
Remember me
