ಮಧ್ಯಪ್ರದೇಶ :ಕಾರೊಂದು ಆಯತಪ್ಪಿ ರಸ್ತೆಯ ಪಕ್ಕದಲ್ಲಿದ್ದ ಬಾವಿಗೆ ಬಿದ್ದ ಪರಿಣಾಮ ಆರು ಮಂದಿ ಮೃತಪಟ್ಟಿದ್ದು, ಮೂವರು ತೀವ್ರವಾಗಿ ಗಾಯಗೊಂಡಿರುವ ಘಟನೆ ಮಧ್ಯಪ್ರದೇಶದ ಛತ್ತರ್​ಪುರದ ಮಹಾರಾಜ್​ಪುರದಲ್ಲಿ ನಡೆದಿದೆ.
ಮದುವೆ ಕಾರ್ಯಕ್ರಮ ಮುಗಿಸಿ ಹಿಂತಿರುಗುವ ವೇಳೆ ಈ ಘಟನೆ ಸಂಭವಿಸಿದೆ. ಬಾವಿಗೆ ಚೌಕಟ್ಟು ಅಥವಾ ಇನ್ನಾವುದೇ ಸುರಕ್ಷತೆ ಅಳವಡಿಸದ ಹಿನ್ನೆಲೆಯಲ್ಲಿ ಕಾರು ಬಾವಿಯೊಳಕ್ಕೆ ಬಿದ್ದ ಪರಿಣಾಮ ಈ ಘಟನೆ ಸಂಭವಿಸಿದೆ.
ಇದನ್ನೂ ಓದಿ:ನನ್ನ ಮುದ್ದಿನ ಮೊಮ್ಮಗಳು ಎಂದ ಅಜ್ಜನ ಖಾತೆಗೇ ಲವರ್​ ಜತೆ ಸೇರಿ ಕನ್ನ ಹಾಕಿದ ಕಳ್ಳಿ!
ಇವರನ್ನು ಉತ್ತರ ಪ್ರದೇಶದ ಮಹೋಬಾದ ಸ್ವಾಸಾ ಗ್ರಾಮದವರು ಎಂದು ಗುರುತಿಸಲಾಗಿದೆ. 9 ಜನರಿದ್ದ ಕುಟುಂಬವು ನಿನ್ನೆ ರಾತ್ರಿ ಮದುವೆ ಕಾರ್ಯಕ್ರಮ ಮುಗಿಸಿ ವಾಪಸ್​ ಹೊರಡುವ ವೇಳೆ ಈ ಘಟನೆ ನಡೆದಿದೆ.
ಘಟನೆ ನಡೆದ ಕೂಡಲೇ ಸ್ಥಳೀಯರು ಸೇರಿ ಕ್ರೇನ್ ಮೂಲಕ ಕಾರನ್ನು ಮೇಲಕ್ಕೆ ಎತ್ತಿ ಒಂಬತ್ತು ಮಂದಿಯನ್ನು ಆಸ್ಪತ್ರೆಗೆ ಸಾಗಿಸಿದ್ದಾರೆ ಆದರೆ ಅದರಲ್ಲಿ ಆರು ಮಂದಿ ಚಿಕಿತ್ಸೆಗೆ ಸ್ಪಂದಿಸದೆ ಮೃತಪಟ್ಟಿದ್ದಾರೆ. ಮೂವರ ಸ್ಥಿತಿ ಗಂಭೀರವಾಗಿದ್ದು ಚಿಕಿತ್ಸೆ ಮುಂದುವರೆದಿದೆ ಎಂದು ಪೊಲೀಸರು ಹೇಳಿದ್ದಾರೆ.
70 ಲಕ್ಷ ಭಾರತೀಯರ ಡೆಬಿಟ್-ಕ್ರೆಡಿಟ್​ ಕಾರ್ಡ್​ ಸೇರಿದಂತೆ ಹಣಕಾಸಿನ ಪಿನ್​ ಟು ಪಿನ್​ ಮಾಹಿತಿ ಸೋರಿಕೆ!

ಏಲಿಯನ್ ಜತೆ ಅಮೆರಿಕ ಒಪ್ಪಂದ​: ವಿಶ್ವಖ್ಯಾತಿ ಇಸ್ರೇಲ್​ ವಿಜ್ಞಾನಿಯಿಂದ ಅಚ್ಚರಿಯ ಮಾಹಿತಿ

ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
ಭಾರತದಲ್ಲಿ ಬೇಳೆಕಾಳುಗಳು ಜನರು ಬಹುಮುಖ್ಯ ಭಕ್ಷ್ಯವಾಗಿದೆ. ಬೇಳೆಕಾಳುಗಳನ್ನು ವಾರಕ್ಕೊಮ್ಮೆಯಾದರೂ ತಿನ್ನಲಾಗುತ್ತದೆ. ಈ ಬೇಳೆಕಾಳುಗಳು ಪೋಷಕಾಂಶಗಳ ಆಗರವಾಗಿದ್ದು,…
ಬೆಂಗಳೂರು:  ಪಾಲಕರು ಪ್ರತಿ ಮಗುವಿನ ಮೊದಲ ಶಿಕ್ಷಕರು, ಅವರ ರೋಲ್ ಮಾಡೆಲ್. ಮಕ್ಕಳ ನಡವಳಿಕೆಯ ಮೇಲೆ…
Sign in to your account
Please enter an answer in digits:eleven − 8 =
Remember me
