ಮುಂಬೈ:ಅಪ್ರಾಪ್ತ ವಯಸ್ಸಿನ ಬಾಲಕಿಯ ಮೇಲೆ ಅತ್ಯಾಚಾರ ಎಸಗಿದ್ದ ಇಬ್ಬರು ಆರೋಪಿಗಳಿಗೆ ಕೋರ್ಟ್‌ ಗಲ್ಲು ಶಿಕ್ಷೆ ವಿಧಿಸುತ್ತಿದ್ದಂತೆಯೇ ಪೊಲೀಸ್‌ ಠಾಣೆಯಲ್ಲಿ ಹಬ್ಬದ ವಾತಾವರಣ ನಿರ್ಮಾಣವಾಗಿತ್ತು. ಇಡೀ ಠಾಣೆಯನ್ನು ದೀಪಗಳಿಂದ ಅಲಂಕರಿಸಿ ಹಬ್ಬದಂತೆ ಕಂಗೊಳಿಸುವಂತೆ ಮಾಡಲಾಗಿತ್ತು.
ಇಂಥದ್ದೊಂದು ಘಟನೆ ನಡೆದಿರುವುದು ಮಹಾರಾಷ್ಟ್ರದ ಬುಲ್ಖಾನದಲ್ಲಿ. ಇಲ್ಲಿಯ ಸೆಷನ್ಸ್ ಕೋರ್ಟ್‌ ಸಾಗರ್ ಮತ್ತು ನಿಖಿಲ್ ಎಂಬುವವರಿಗೆ ಮರಣದಂಡನೆ ವಿಧಿಸಿದ್ದಕ್ಕೆ ಈ ಸಂಭ್ರಮ ಠಾಣೆಯಲ್ಲಿ ನಡೆದಿತ್ತು.
2019ರ ಏಪ್ರಿಲ್ 26ರಂದು ಈ ಇಬ್ಬರು ಅಪ್ರಾಪ್ತ ವಯಸ್ಸಿನ ಬಾಲಕಿ ಮೇಲೆ ಅತ್ಯಾಚಾರ ಮಾಡಿದ್ದಾರೆ ಎಂದು ಸಂತ್ರಸ್ತೆಯ ತಂದೆ ಚಿಕ್ಲಿ ಪೊಲೀಸ್ ಠಾಣೆಯಲ್ಲಿ ದೂರು ದಾಖಲಿಸಿದ್ದರು. ದೂರಿನನ್ವಯ ತಕ್ಷಣವೇ ಕಾರ್ಯೋನ್ಮುಖರಾಗಿದ್ದ ಪೊಲೀಸರು ಆರೋಪಿಗಳಿಗಾಗಿ ಬಲೆ ಬೀಸಿ, ಶೀಘ್ರದಲ್ಲಿ ಬಂಧಿಸುವಲ್ಲಿ ಯಶಸ್ವಿಯಾಗಿದ್ದರು.
ಇದನ್ನೂ ಓದಿ:ಡಿಜೆಹಳ್ಳಿ ಗಲಭೆ: ಪಾಷಾಗೆ ಐಸಿಸ್‌ ನಂಟು? ಕಾರ್ಪೋರೇಟರ್‌ಗಳ ಮೇಲೂ ಪೊಲೀಸರ ಕಣ್ಣು- ನೋಟಿಸ್‌ ಜಾರಿ
ಸುದೀರ್ಘ ವಿಚಾರಣೆ ನಡೆಸಿದ ನ್ಯಾಯಾಲಯ ಭಾರತೀಯ ದಂಡ ಸಂಹಿತೆ (ಐಪಿಸಿ) ಮತ್ತು ಪೋಕ್ಸೊ (ಲೈಂಗಿಕ ಅಪರಾಧಗಳಿಂದ ಮಕ್ಕಳ ರಕ್ಷಣೆ) ಕಾಯ್ದೆಯ ಸೆಕ್ಷನ್ 376 ರ ಅಡಿ ಇಬ್ಬರು ಆರೋಪಿಗಳಿಗೆ ಗಲ್ಲುಶಿಕ್ಷೆ ಘೋಷಿಸಿತು.
ಇದರಿಂದ ಸಂತ್ರಸ್ತೆಯ ಕುಟುಂಬಸ್ಥರಿಗೆ ನ್ಯಾಯ ದೊರಕಿಸಿ ಕೊಟ್ಟ ಖುಷಿಯಲ್ಲಿ ಪೊಲೀಸರು, ಪೊಲೀಸ್ ಠಾಣೆಯನ್ನು ಸಿಂಗರಿಸಿ, ಠಾಣೆಯ ಮುಂದೆ ಪಟಾಕಿ ಸಿಡಿಸಿ, ಸಿಹಿ ಹಂಚಿ ಸಂಭ್ರಮಿಸಿದ್ದಾರೆ.
ತೀರ್ಪಿನ ವಿರುದ್ಧ ಹೈಕೋರ್ಟ್‌ನಲ್ಲಿ ಮೇಲ್ಮನವಿ ಸಲ್ಲಿಸಲು ಅಪರಾಧಿಗಳಿಗೆ ಇನ್ನೂ ಸಮಯ ಇರುವುದರಿಂದ ಅವರ ಗಲ್ಲಿಗೇರಿಸುವ ದಿನಾಂಕವನ್ನು ನ್ಯಾಯಾಲಯ ನಿಗದಿಪಡಿಸಿಲ್ಲ.
ಸೆಪ್ಟೆಂಬರ್‌ನಲ್ಲಿ ಶಾಲೆ ಶುರುವಾಗತ್ತಾ? ಸಚಿವ ಸುರೇಶ್‌ಕುಮಾರ್‌ ಏನು ಹೇಳಿದ್ದಾರೆ ಕೇಳಿ…

ಮಚ್ಚು ಹಿಡಿದು ಚಿನ್ನದಂಗಡಿಗೆ ನುಗ್ಗಿದವನ ಚಚ್ಚಿದಳು ಚಿಕ್ಕಮಗಳೂರು ಮಹಿಳೆ!

ನಾಯಿಗಳು ಕಚ್ಚಿ ತಿಂದ ಕರೊನಾ ಸೋಂಕಿತನ ಶವ!

ಪಾಕ್‌ಗೆ ಬಿಗ್‌ ಷಾಕ್‌: ಸಾಲವೂ ಬಂದ್‌, ತೈಲವೂ ಬಂದ್‌ ಎಂದ ಸೌದಿ ಅರೇಬಿಯಾ!

ಫ್ರಿಜ್‌ ಟ್ರೇ ಬಳಸಿ ಆನ್‌ಲೈನ್‌ ಕ್ಲಾಸ್‌: ಶಿಕ್ಷಕಿಯ ಪ್ಲ್ಯಾನ್‌ಗೆ ಅಪಾರ ಮೆಚ್ಚುಗೆ

ದಫನ್‌ ಆಗಿದ್ದವ ರಾತ್ರಿ ಹೆಂಡತಿಗೆ ಪ್ರತ್ಯಕ್ಷನಾಗಿ ನಾನೇ ನಿನ್ನ ಗಂಡ ಎಂದ!

ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
ಭಾರತದಲ್ಲಿ ಬೇಳೆಕಾಳುಗಳು ಜನರು ಬಹುಮುಖ್ಯ ಭಕ್ಷ್ಯವಾಗಿದೆ. ಬೇಳೆಕಾಳುಗಳನ್ನು ವಾರಕ್ಕೊಮ್ಮೆಯಾದರೂ ತಿನ್ನಲಾಗುತ್ತದೆ. ಈ ಬೇಳೆಕಾಳುಗಳು ಪೋಷಕಾಂಶಗಳ ಆಗರವಾಗಿದ್ದು,…
ಬೆಂಗಳೂರು:  ಪಾಲಕರು ಪ್ರತಿ ಮಗುವಿನ ಮೊದಲ ಶಿಕ್ಷಕರು, ಅವರ ರೋಲ್ ಮಾಡೆಲ್. ಮಕ್ಕಳ ನಡವಳಿಕೆಯ ಮೇಲೆ…
Sign in to your account
Please enter an answer in digits:5 × one =
Remember me
