ಜೈಪುರ:ಈಗ ನಿರುದ್ಯೋಗ ಸಮಸ್ಯೆ ಎನ್ನುವುದು ಸಾಮಾನ್ಯವಾಗಿ ಬಿಟ್ಟಿದೆ. ಸ್ನಾತಕೋತ್ತರ ಪದವಿ ಸೇರಿದಂತೆ ಉನ್ನತ ವಿದ್ಯಾಭ್ಯಾಸ ಮಾಡಿರುವವರು ಚಿಕ್ಕಪುಟ್ಟ ನೌಕರಿ ಸಿಕ್ಕಾಗ ಹೋಗಲು ಹಿಂಜರಿಕೆ ಮಾಡುವ ಕಾರಣ, ಅಂಥದ್ದರಿಂದಲೇ ನಿರುದ್ಯೋಗ ಸಮಸ್ಯೆ ಹೆಚ್ಚಾಗುತ್ತಿರುವ ಬಗ್ಗೆ ಇದಾಗಲೇ ಸಾಕಷ್ಟು ಅಧ್ಯಯನ ವರದಿಗಳು ತಿಳಿಸಿವೆ.
ಅದೇ ಇನ್ನೊಂದೆಡೆ, ಯಾವುದೇ ಕೆಲಸವೂ ಸಿಗದೇ ಸ್ನಾತಕೋತ್ತರ ಪದವೀಧರರು, ಪದವೀಧರರು ಭಿಕ್ಷಾಟನೆಗೆ ಇಳಿದಿರುವ ಘಟನೆ ರಾಜಸ್ಥಾನದ ಜೈಪುರದಲ್ಲಿ ನಡೆದಿದೆ. ಭಿಕ್ಷಾವೃತ್ತಿಗೆ ಇಳಿದಿರುವವರ ಬಗ್ಗೆ ಪೊಲೀಸರು ಸಮೀಕ್ಷೆ ನಡೆಸಿದ್ದು, ಜೈಪುರದಲ್ಲಿರುವ 1,162 ಭಿಕ್ಷುಕರಲ್ಲಿ ಇಬ್ಬರು ಸ್ನಾತಕೋತ್ತರ ಮತ್ತು ಮೂವರು ಪದವೀಧರರು ಇರುವುದನ್ನು ಕಂಡುಹಿಡಿದಿದ್ದಾರೆ.ಜೈಪುರವನ್ನು ಭಿಕ್ಷುಕರಿಂದ ಮುಕ್ತವಾಗಿ ಮಾಡುವುದು ಮತ್ತು ಅವರಿಗೆ ಕೆಲವು ಉದ್ಯೋಗ ಕೌಶಲವನ್ನು ನೀಡುವುದು, ಇತರರನ್ನು ಕೌಶಲರಹಿತ ಉದ್ಯೋಗಗಳಿಗೆ ಪರಿಚಯಿಸುವ ಉದ್ದೇಶದಿಂದ ಈ ಸಮೀಕ್ಷೆಯನ್ನು ಕೈಗೊಳ್ಳಲಾಗಿದೆ.
ಇದನ್ನೂ ಓದಿ:ಗೆಳೆಯನ ಜತೆ ದೈಹಿಕ ಸಂಪರ್ಕ ಬೆಳೆಸಿ ಅತ್ಯಾಚಾರ ಎಂದಳು: ಹೈಕೋರ್ಟ್‌ ಮಾಡಿತು ತಕ್ಕಶಾಸ್ತಿ
ಸಮೀಕ್ಷೆಯ ನಂತರ ಕಂಡುಬಂದಿರುವುದು ಏನೆಂದರೆ ಜೈಪುರದಲ್ಲಿ 825 ಭಿಕ್ಷಕರು ಅನಕ್ಷರಸ್ಥರು, 39 ಮಂದಿ ಅಕ್ಷರಸ್ಥರು ಮತ್ತು 193 ಜನ ಶಾಲೆಗೆ ಹೋಗಿದ್ದವರು ಸಿಕ್ಕಿದ್ದಾರೆ. ಸಮೀಕ್ಷೆಯ ಪ್ರಕಾರ, ಪದವೀಧರ ಭಿಕ್ಷುಕರು ಜೈಪುರದ ರಾಮ್ನಿವಾಸ್ ಬಾಗ್, ಸಿ-ಸ್ಕೀಮ್ ಮತ್ತು ವಾಲ್ಡ್ ಸಿಟಿಯಲ್ಲಿ ವಾಸಿಸುತ್ತಿದ್ದಾರೆ ಎಂದು ತಿಳಿದು ಬಂದಿದೆ. ವಿದ್ಯಾವಂತ ಭಿಕ್ಷುಕರು ಅವಕಾಶ ನೀಡಿದರೆ ಗೌರವಯುತ ಜೀವನವನ್ನು ಕಟ್ಟಿಕೊಳ್ಳಲು ಸಿದ್ಧವಿದ್ದೇವೆ ಎಂದು ಹೇಳಿದ್ದಾರೆ ಎಂದು ಸಮೀಕ್ಷೆ ತಿಳಿಸಿದೆ.
ಅಕ್ಷರಸ್ಥ ಭಿಕ್ಷುಕರಲ್ಲಿ ಇಬ್ಬರು 32 ಮತ್ತು 35 ವರ್ಷದೊಳಗಿನವರು, ಇನ್ನಿಬ್ಬರು 50 ರಿಂದ 55 ವರ್ಷದೊಳಗಿನವರು ಮತ್ತು ಒಬ್ಬರು 65 ವರ್ಷ ವಯಸ್ಸಿನವರು ಎಂದು ವರದಿಯಲ್ಲಿ ಉಲ್ಲೇಖಿಸಲಾಗಿದೆ.
ಐದು ಉನ್ನತ ಮಟ್ಟದ ವಿದ್ಯಾವಂತ ಭಿಕ್ಷುಕರು ಹೋಟೆಲ್‍ಗಳು, ನಿರ್ಮಾಣ ಹಂತದಲ್ಲಿರುವ ಕಟ್ಟಡದಲ್ಲಿ ಮತ್ತು ಇತರ ಕೌಶಲರಹಿತ ಉದ್ಯೋಗಗಳಲ್ಲಿ ಕೆಲಸ ಮಾಡಲು ಸಿದ್ಧವಿದ್ದೇವೆ ಎಂದು ಸರ್ವೇಯರ್ ಗಳಿಗೆ ತಿಳಿಸಿದ್ದಾರೆ. ಒಟ್ಟು ಭಿಕ್ಷುಕರಲ್ಲಿ ಕನಿಷ್ಠ 419 ಮಂದಿ ಜನರು ಈ ಕೆಲಸವನ್ನು ಬಿಟ್ಟು ಒಳ್ಳೆಯ ಜೀವನವನ್ನು ಕಟ್ಟಿಕೊಳ್ಳಲು ಸಿದ್ಧರಿದ್ದಾರೆ. 27 ಭಿಕ್ಷುಕರು ಅಧ್ಯಯನ ಮಾಡಲು ಇಚ್ಛೆ ವ್ಯಕ್ತಪಡಿಸಿದ್ದಾರೆ ಎಂದು ಸಮೀಕ್ಷೆಯಲ್ಲಿ ತಿಳಿದು ಬಂದಿದೆ.
ಗೆಳೆಯನ ಜತೆ ದೈಹಿಕ ಸಂಪರ್ಕ ಬೆಳೆಸಿ ಅತ್ಯಾಚಾರ ಎಂದಳು: ಹೈಕೋರ್ಟ್‌ ಮಾಡಿತು ತಕ್ಕಶಾಸ್ತಿ

ಬೃಹತ್‌ ದಾಳಿಗೆ ಸ್ಕೆಚ್‌ ಹಾಕುತ್ತಿದ್ದನೇ ಈತ? ಬ್ಯಾಗ್‌ನಲ್ಲಿದ್ದ ಕೋಡ್‌ವರ್ಡ್ಸ್‌ ಏನು ಹೇಳುತ್ತಿವೆ?

ಜಪಾನ್‌ನಲ್ಲಿ ನಿರ್ಮಾಣವಾಗಿದೆ ಪಾರದರ್ಶಕ ಟಾಯ್ಲೆಟ್‌: ಥೂ… ಎನ್ನುವ ಮುನ್ನ ಇದನ್ನು ಓದಿ…

ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
ಭಾರತದಲ್ಲಿ ಬೇಳೆಕಾಳುಗಳು ಜನರು ಬಹುಮುಖ್ಯ ಭಕ್ಷ್ಯವಾಗಿದೆ. ಬೇಳೆಕಾಳುಗಳನ್ನು ವಾರಕ್ಕೊಮ್ಮೆಯಾದರೂ ತಿನ್ನಲಾಗುತ್ತದೆ. ಈ ಬೇಳೆಕಾಳುಗಳು ಪೋಷಕಾಂಶಗಳ ಆಗರವಾಗಿದ್ದು,…
ಬೆಂಗಳೂರು:  ಪಾಲಕರು ಪ್ರತಿ ಮಗುವಿನ ಮೊದಲ ಶಿಕ್ಷಕರು, ಅವರ ರೋಲ್ ಮಾಡೆಲ್. ಮಕ್ಕಳ ನಡವಳಿಕೆಯ ಮೇಲೆ…
Sign in to your account
Please enter an answer in digits:five × 4 =
Remember me
