ಚಂಡೀಗಢ:ಕೇಂದ್ರ ಸರ್ಕಾರ ಜಾರಿಗೆ ತಂದಿರುವ ಕೃಷಿ ನೀತಿ ವಿರೋಧಿಸಿ ನಡೆಸುತ್ತಿರುವ ದೆಹಲಿ ಚಲೋ ಉಗ್ರ ಸ್ವರೂಪ ಪಡೆದುಕೊಂಡಿದೆ. ಪಂಜಾಬ್ ಮೂಲಕ ಹರಿಯಾಣ ಪ್ರವೇಶಿಸಲು ಯತ್ನಿಸಿದ ರೈತರನ್ನು ತಡೆ ಹಿಡಿಯಲು ಮುಂದಾದ ಪೊಲೀಸರ ಮೇಲೆ ರೈತರು ಮುಗಿ ಬಿದ್ದ ಹಿನ್ನೆಲೆಯಲ್ಲಿ ಮುಂಜಾಗ್ರತಾ ಕ್ರಮವಾಗಿ ಪ್ರತಿಭಟನಾ ನಿರತರ ಮೇಲೆ ಅಶ್ರುವಾಯು ಹಾಗೂ ಜಲಫಿರಂಗಿ ಪ್ರಯೋಗಿಸಲಾಗಿದೆ.
ಹರಿಯಾಣ ರೈತರು ಅಂಬಾಲಾ-ಕುರುಕ್ಷೇತ್ರ ಗಡಿ ಸಮೀಪ ತಿಯೋರಿ ಗ್ರಾಮದ ಮೂಲಕ ದೆಹಲಿಯತ್ತ ತೆರಳುತ್ತಿದ್ದಾಗ ದೆಹಲಿ ಪ್ರವೇಶಿಸದಂತೆ ತಡೆ ಹಿಡಿಯಲಾಯಿತು. ಪಂಜಾಬ್ ಮೂಲಕ ಸಹಸ್ರಾರು ಮಂದಿ ರೈತರು ದೆಹಲಿಯತ್ತ ಮುನ್ನುಗ್ಗುವುದನ್ನು ತಡೆಗಟ್ಟುವ ಉದ್ದೇಶದಿಂದ ಹರಿಯಾಣದ ಎಲ್ಲಾ ಗಡಿ ಪ್ರದೇಶಗಳನ್ನು ಬಂದ್ ಮಾಡಲಾಗಿದೆ.
#WATCHPolice use water cannon to disperse farmers gathered at Shambhu border, near Ambala (Haryana), to proceed to Delhi to stage a demonstration against the farm lawspic.twitter.com/U1uXO0MdOs
— ANI (@ANI)November 26, 2020

ಪಂಜಾಬ್-ಹರ್ಯಾಣ ಗಡಿಯ ಶಂಭು ಎಂಬಲ್ಲಿ ರೈತರು ಗುಂಪು ಸೇರಿ ದೆಹಲಿ ಚಲೋ ಆರಂಭಿಸಿ ಪೊಲೀಸ್ ಬ್ಯಾರಿಕೇಡ್ ತೆಗೆದು ನುಗ್ಗಲು ಪ್ರಯತ್ನಿಸುತ್ತಿದ್ದರು. ಆಗ ಹರಿಯಾಣ ಪೊಲೀಸರು ಧ್ವನಿವರ್ಧಕ ಮೂಲಕ ಪ್ರತಿಭಟನಾಕಾರರಿಗೆ ಎಚ್ಚರಿಸುತ್ತಿದ್ದರು.
ಈ ವೇಳೆ ಹರಿಯಾಣ ಪಂಜಾಬ್ ಶಂಭು ಅಂತಾರಾಜ್ಯ ಗಡಿಭಾಗದಲ್ಲಿ ಪರಿಸ್ಥಿತಿ ಉದ್ವಿಗ್ನಗೊಂಡಿತ್ತು. ಪಂಜಾಬ್ ರೈತರು ಪೊಲೀಸ್ ಬ್ಯಾರಿಕೇಡ್ ಮುರಿದು ಹರಿಯಾಣ ರಾಜ್ಯ ಪ್ರವೇಶಿಸಲು ಮುಂದಾದ ವೇಳೆ ಗುಂಪನ್ನು ಚದುರಿಸಲು ಪೊಲೀಸರು ಅಶ್ರುವಾಯು ಸಿಡಿಸಿದ್ದಾರೆ.
#WATCH| Protestors pelt stones at the Shambhu border (Punjab-Haryana border)pic.twitter.com/nRs0fyFd01
— ANI (@ANI)November 26, 2020

ಈ ಮಧ್ಯೆ ಕೇಂದ್ರ ಸರ್ಕಾರದ ಕೃಷಿ ನೀತಿ ವಿರೋಧಿಸಿ ಶಾಂತಿಯುತ ಪ್ರತಿಭಟನೆ ನಡೆಸಲು ಅವಕಾಶ ಮಾಡಿಕೊಡುವಂತೆ ದೆಹಲಿಯ ವಿವಿಧ ರೈತ ಸಂಘಟನೆಗಳು ಮಾಡಿಕೊಂಡ ಮನವಿಯನ್ನು ಕರೊನಾ ಹಿನ್ನೆಲೆಯಲ್ಲಿ ದೆಹಲಿ ಪೊಲೀಸರು ತಳ್ಳಿ ಹಾಕಿದ್ದಾರೆ.
#WATCHFarmers' protest continues at Shambhu border, near Ambala (Haryana) as police stop them from proceeding to Delhipic.twitter.com/UtssadGKpU
— ANI (@ANI)November 26, 2020

ಕರೊನಾ ಸೋಂಕಿನ ಸಂದರ್ಭದಲ್ಲಿ ಯಾವುದೇ ಸಂಘಟನೆಗಳು ಗುಂಪುಗೂಡಲು ಅವಕಾಶವಿರುವುದಿಲ್ಲ. ಒಂದು ವೇಳೆ ನಿಯಮ ಉಲ್ಲಂಘಿಸಿದರೆ ಅಂತಹವರ ವಿರುದ್ಧ ಕಾನೂನು ಕ್ರಮ ಕೈಗೊಳ್ಳುವ ಎಚ್ಚರಿಕೆ ನೀಡಲಾಗಿದೆ.
ಮಗು ಸತ್ತು ಹೋಯಿತು ಎಂದು ಸುಳ್ಳು ಹೇಳಿದ ಈ ತಂದೆ ಮಾಡಿದ್ದು ಪಾಪದ ಕೆಲಸ…

ಮಹಿಳೆಯರನ್ನು ಹೊಗಳುವ ಭರದಲ್ಲಿ ಪ್ರಾಣಿಗೆ ಹೋಲಿಸಿ ಪೇಚಿಗೆ ಸಿಲುಕಿರೋ ಇಸ್ರೇಲ್​ ಪ್ರಧಾನಿ!

ಲಕ್ಷ್ಮಿ ಹೆಬ್ಬಾಳ್ಕರ್‌ ಇನ್ಮುಂದೆ ಅತ್ತೆ! ಗೋವಾದಲ್ಲಿ ಬೀಡುಬಿಟ್ಟಿರೋ ಕೈ ಮುಖಂಡರು…

ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
ಭಾರತದಲ್ಲಿ ಬೇಳೆಕಾಳುಗಳು ಜನರು ಬಹುಮುಖ್ಯ ಭಕ್ಷ್ಯವಾಗಿದೆ. ಬೇಳೆಕಾಳುಗಳನ್ನು ವಾರಕ್ಕೊಮ್ಮೆಯಾದರೂ ತಿನ್ನಲಾಗುತ್ತದೆ. ಈ ಬೇಳೆಕಾಳುಗಳು ಪೋಷಕಾಂಶಗಳ ಆಗರವಾಗಿದ್ದು,…
ಬೆಂಗಳೂರು:  ಪಾಲಕರು ಪ್ರತಿ ಮಗುವಿನ ಮೊದಲ ಶಿಕ್ಷಕರು, ಅವರ ರೋಲ್ ಮಾಡೆಲ್. ಮಕ್ಕಳ ನಡವಳಿಕೆಯ ಮೇಲೆ…
Sign in to your account
Please enter an answer in digits:twelve − 1 =
Remember me
