ನವದೆಹಲಿ:ದೇಶದ ಸಮಗ್ರತೆ, ಸಾರ್ವಭೌಮತೆ ಮತ್ತು ಭದ್ರತೆಗೆ ಹಾನಿಯುಂಟು ಮಾಡುವ ಕಾನೂನುಬಾಹಿರ ಚಟುವಟಿಕೆಗಳಲ್ಲಿ ತೊಡಗಿಸಿಕೊಂಡಿರುವ ಆರೋಪದ ಮೇಲೆ ನಿಷೇಧಕ್ಕೆ ಒಳಗಾಗಿರುವ ಪಾಪುಲರ್ ಫ್ರಂಟ್ ಆಫ್ ಇಂಡಿಯಾ (ಪಿಎಫ್​ಐ) ಮತ್ತು ಅದರ ಎಂಟು ಅಂಗಸಂಸ್ಥೆಗಳು ತಮ್ಮ ನಿಷೇಧದ ಕುರಿತು ಪ್ರಶ್ನೆ ಮಾಡುವ ಅಧಿಕಾರವನ್ನು ಕಾನೂನುಬಾಹಿರ ಚಟುವಟಿಕೆಗಳ ತಡೆಗಟ್ಟುವಿಕೆ (UAPA) ನ್ಯಾಯಮಂಡಳಿಯಲ್ಲಿ ಪ್ರಶ್ನಿಸಬಹುದಾಗಿದೆ.
ಈ ಹಿನ್ನೆಲೆಯಲ್ಲಿ, ನ್ಯಾಯಮಂಡಳಿಯ ಅಧ್ಯಕ್ಷರಾಗಿ ದೆಹಲಿ ಹೈಕೋರ್ಟ್ ನ್ಯಾಯಮೂರ್ತಿ ದಿನೇಶ್ ಕುಮಾರ್ ಶರ್ಮಾ ಅವರನ್ನು ಕೇಂದ್ರ ಸರ್ಕಾರ ನೇಮಿಸಿದೆ. ಈ ನ್ಯಾಯಮಂಡಳಿಯಲ್ಲಿ ಪಿಎಫ್​ಐ ಸರ್ಕಾರದ ನಿಷೇಧಿತ ನಿರ್ಧಾರವನ್ನು ಪ್ರಶ್ನೆ ಮಾಡಬಹುದಾಗಿದೆ. ವಿಚಾರಣೆ ಬಳಿಕ ನ್ಯಾಯ ಮಂಡಳಿ, ಸರ್ಕಾರದ ನಿಲುವಿನ ಬಗ್ಗೆ ತನ್ನ ತೀರ್ಪು ನೀಡಲಿದೆ.
ಕೇಂದ್ರ ಸರ್ಕಾರ ಸೆಪ್ಟೆಂಬರ್ 28 ರಂದು ಯುಎಪಿಎ ಸೆಕ್ಷನ್ 3 ರ ಅಡಿಯಲ್ಲಿ ಪಿಎಫ್‌ಐ ಕಾನೂನುಬಾಹಿರ ಎಂದು ಘೋಷಿಸಿತು. ಐದು ವರ್ಷಗಳ ಕಾಲ ಅದರ ಮೇಲೆ ನಿಷೇಧ ಹೇರಿದೆ. ಇದನ್ನು ಈಗ ಪಿಎಫ್​ಐ ಮತ್ತು ಅಂಗಸಂಸ್ಥೆಗಳು ಪ್ರಶ್ನೆ ಮಾಡಬಹುದಾಗಿದೆ.
ಅಷ್ಟಕ್ಕೂ ಇಂಥದ್ದೊಂದು ನ್ಯಾಯಮಂಡಳಿ ರಚಿಸಿರಲು ಕಾರಣವೇನೆಂದರೆ ಈ ನಿಷೇಧವನ್ನು ಮಾಡಿರುವುದು ಕಾನೂನುಬಾಹಿರ ಚಟುವಟಿಕೆಗಳ ತಡೆಗಟ್ಟುವಿಕೆ ಕಾಯ್ದೆಯ ಸೆಕ್ಷನ್ 4ರ ಅಡಿ. ಈ ಕಲಮಿನ ಅಡಿ ಮಾಡಿರುವ ನಿಷೇಧವನ್ನು ನ್ಯಾಯಮಂಡಳಿಯು ದೃಢೀಕರಿಸಬೇಕು. ಅದು ದೃಢೀಕರಿಸಿದ ನಂತರವಷ್ಟೇ ನಿಷೇಧ ಜಾರಿಗೆ ಬರಲಿದೆ. ಈ ಹಿನ್ನೆಲೆಯಲ್ಲಿ ಸರ್ಕಾರ ನ್ಯಾಯಮಂಡಳಿಯನ್ನು ರಚಿಸಿದೆ. ಈ ನ್ಯಾಯಮಂಡಳಿ ಪ್ರಕರಣದ ವಿಚಾರಣೆ ನಡೆಸಿ ಬಳಿಕ ಸರ್ಕಾರದ ನಿರ್ಧಾರದ ಬಗ್ಗೆ ತೀರ್ಪು ನೀಡಲಿದೆ.(ಏಜೆನ್ಸೀಸ್​)
ಕ್ರಿಕೆಟ್ ತಂಡದ ಮಾಜಿ ನಾಯಕನ ವಿರುದ್ಧ ರೇಪ್​ ಕೇಸ್​: ಫೇಸ್​ಬುಕ್​ನಲ್ಲಿ ಮಾಹಿತಿ ನೀಡಿ ಸಿಕ್ಕಿಬಿದ್ದ ಕ್ರಿಕೆಟಿಗ

ಹಾಸ್ಯಲೋಕಕ್ಕೆ ಮತ್ತೊಂದು ಬರಸಿಡಿಲು: ರಾಜು ಶ್ರೀವಾಸ್ತವ್​ ಸಾವಿನ ಬೆನ್ನಲ್ಲೇ ಕಾಮಿಡಿಯನ್ ಪರಾಗ್ ನಿಧನ!

ಸತ್ತವನನ್ನೇ ಮದ್ವೆಯಾದ ಖತರ್ನಾಕ್​ ಬಾರ್​ ಗರ್ಲ್​! ಪಾದ್ರಿ ನೀಡಿದ ಸಾಥ್​: 20 ಕೋಟಿ ರೂ. ಗುಳುಂ

ಭಾರತದಲ್ಲಿ ಬೇಳೆಕಾಳುಗಳು ಜನರು ಬಹುಮುಖ್ಯ ಭಕ್ಷ್ಯವಾಗಿದೆ. ಬೇಳೆಕಾಳುಗಳನ್ನು ವಾರಕ್ಕೊಮ್ಮೆಯಾದರೂ ತಿನ್ನಲಾಗುತ್ತದೆ. ಈ ಬೇಳೆಕಾಳುಗಳು ಪೋಷಕಾಂಶಗಳ ಆಗರವಾಗಿದ್ದು,…
ಬೆಂಗಳೂರು:  ಪಾಲಕರು ಪ್ರತಿ ಮಗುವಿನ ಮೊದಲ ಶಿಕ್ಷಕರು, ಅವರ ರೋಲ್ ಮಾಡೆಲ್. ಮಕ್ಕಳ ನಡವಳಿಕೆಯ ಮೇಲೆ…
ಅನೇಕ ಜನರು ತಮ್ಮ ಭವಿಷ್ಯವನ್ನು ತಿಳಿದುಕೊಳ್ಳಲು ತುಂಬಾ ಆಸಕ್ತಿ ಹೊಂದಿರುತ್ತಾರೆ. ಮುಂದಿನ ದಿನಗಳಲ್ಲಿ ನಮ್ಮ ಜೀವನದಲ್ಲಿ…
Sign in to your account
Please enter an answer in digits:thirteen − seven =
Remember me
