ಮುಂಬೈ:ವಾಣಿಜ್ಯ ರಾಜಧಾನಿ ಮುಂಬೈ ಎಂದರೆ ಟ್ರಾಫಿಕ್‌ ಜಾಂ. ದಿನದ 24 ಗಂಟೆಯೂ ಇಲ್ಲಿ ಟ್ರಾಫಿಕ್‌ ಕಿರಿಕಿರಿ. ಅದಕ್ಕಾಗಿಯೇ ಮುಂಬೈಯನ್ನು ಎಂದಿಗೂ ನಿದ್ರಿಸದ ನಗರಿ ಎಂದೇ ಕರೆಯಲಾಗುತ್ತದೆ. ಇದರಿಂದಾಗಿಯೇ ಮಾಲಿನ್ಯ ವಿಪರೀತ ಮಟ್ಟಕ್ಕೆ ಏರಿ ಅಲ್ಲೋಲ ಕಲ್ಲೋಲ ಸೃಷ್ಟಿಸಿದ್ದು ಎಲ್ಲರಿಗೂ ತಿಳಿದ ವಿಷಯವೇ.
ಆದರೆ ಈ ಟ್ರಾಫಿಕ್‌ ಕಿರಿಕಿರಿಯಿಂದ ಮುಂಬೈನಲ್ಲಿ ಡಿವೋರ್ಸ್ ಪ್ರಕರಣಗಳೂ ಹೆಚ್ಚುತ್ತಿವೆಯಂತೆ! ಹೀಗಂತ ಹೇಳಿದವರು ಮಾಜಿ ಮುಖ್ಯಮಂತ್ರಿ ದೇವೇಂದ್ರ ಫಡ್ನವೀಸ್ ಅವರ ಪತ್ನಿ ಅಮೃತಾ ಫಡ್ನವೀಸ್.
“ನಾನು ಮಾಜಿ ಸಿಎಂ ಪತ್ನಿಯಾಗಿ ಅಲ್ಲ, ಬದಲಿಗೆ ಸಾಮಾನ್ಯ ನಾಗರಿಕಳಾಗಿ ಹೇಳುತ್ತಿದ್ದೇನೆ, ನಾನು ಒಮ್ಮೆ ಹೊರಗೆ ಹೋದಾಗ ಗುಂಡಿಗಳು, ಟ್ರಾಫಿಕ್ ಸೇರಿದಂತೆ ಹಲವಾರು ಸಮಸ್ಯೆಗಳನ್ನು ಅನುಭವಿಸುತ್ತೇನೆ. ಟ್ರಾಫಿಕ್ ಕಾರಣ, ಜನರು ತಮ್ಮ ಕುಟುಂಬಗಳಿಗೆ ಸಮಯ ನೀಡಲು ಸಾಧ್ಯವಾಗುತ್ತಿಲ್ಲ. ಪರಿಣಾಮ ವಿಚ್ಛೇದನ ಪ್ರಕರಣಗಳು ಹೆಚ್ಚುತ್ತಿವೆ’ ಎಂದು ಹೇಳಿದ್ದಾರೆ.
ಮುಂಬೈನಲ್ಲಿ ಶೇ.3ರಷ್ಟು ವಿಚ್ಛೇದನಗಳು ಟ್ರಾಫಿಕ್​ ಸಮಸ್ಯೆಯಿಂದ ನಡೆಯುತ್ತಿವೆ ಎಂಬ ಅಂಕಿ ಅಂಶವನ್ನೂ ಅವರು ನೀಡಿದ್ದಾರೆ. ಜನಜೀವನದ ಮೇಲೆ ಟ್ರಾಫಿಕ್​ ಸಮಸ್ಯೆ ಭಾರಿ ಪರಿಣಾಮ ಬೀರಿದೆ ಎಂದು ಹೇಳಿದ್ದಾರೆ.
ಇದಕ್ಕೆ ಪ್ರತಿಕ್ರಿಯೆ ಕೊಟ್ಟಿರುವ ಮುಂಬೈ ಮೇಯರ್‌ ಕಿಶೋರಿ ಪಡ್ನೇಕರ್‌, ಇದು ಬಾಲಿಶಃ ಹೇಳಿಕೆ ಎಂದು ಟೀಕಿಸಿದ್ದಾರೆ. ಟ್ರಾಫಿಕ್‌ ಸಮಸ್ಯೆಯಿಂದಾಗಿ ವಿಚ್ಛೇದನ ಪ್ರಕರಣ ಹೆಚ್ಚುತ್ತಿದೆ ಎನ್ನುವುದರಲ್ಲಿ ಯಾವುದೇ ಆಧಾರವಿಲ್ಲ. ಹಾಗೆಂದು ಟ್ರಾಫಿಕ್‌ ಸಮಸ್ಯೆ ಇಲ್ಲವೆಂದಲ್ಲ. ಆದರೆ ಹೆಚ್ಚುತ್ತಿರುವ ಡಿವೋರ್ಸ್‌ಗೂ ಟ್ರಾಫಿಕ್‌ಗೂ ಯಾವುದೇ ಸಂಬಂಧವಿಲ್ಲ ಎಂದಿದ್ದಾರೆ.
VIDEO: ನಾಮಪತ್ರ ಸಲ್ಲಿಸಲು ಓಡೋಡಿ ಬಂದ ಕ್ರೀಡಾ ಸಚಿವ! ವಿಡಿಯೋ ವೈರಲ್

ಉತ್ತರ ಪ್ರದೇಶದಲ್ಲಿ 30 ವರ್ಷಗಳಲ್ಲಿ ಇದೇ ಮೊದಲ ಬಾರಿಗೆ ಇತಿಹಾಸ ಸೃಷ್ಟಿಸಿದ ಕಾಂಗ್ರೆಸ್‌: ಪ್ರಿಯಾಂಕಾ ಘೋಷಣೆ

ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:one × 2 =
Remember me
