ಬೆಂಗಳೂರು:ಇಂದು ನಸುಕಿನಲ್ಲಿಯೇ ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್​ ಅವರ ಮನೆಯ ಮೇಲೆ ನಡೆದಿರುವ ದಾಳಿಗೆ ಸಂಬಂಧಿಸಿದಂತೆ ಅಧಿಕಾರಿಗಳು ಮನೆಯಲ್ಲಿ ಸುಮಾರು 50 ಲಕ್ಷ ರೂಪಾಯಿಗಳನ್ನು ಪತ್ತೆ ಮಾಡಿರುವುದಾಗಿ ಮೂಲಗಳು ಹೇಳಿವೆ.
ಡಿ.ಕೆ.ಶಿವಕುಮಾರ್ ಮನೆಯ ಮೇಲೆ ದಾಳಿ ಮಾಡಿದ್ದಾರೆ. ಮನೆಯಲ್ಲಿ 50 ಲಕ್ಷ ಹಣ ಪತ್ತೆಯಾಗಿದ್ದು, ಸಿಬಿಐ ಅಧಿಕಾರಿಗಳು ಆ ಹಣವನ್ನು ಸೀಜ್ ಮಾಡಲಾಗಿದೆ ಎನ್ನಲಾಗಿದೆ. ಡಿಕೆ ಶಿವಕುಮಾರ್ ಅವರಿಗೆ ಸಂಬಂಧಿಸಿದ ಕರ್ನಾಟಕದ 9 ಕಡೆ, ದೆಹಲಿಯ 4 ಕಡೆ ಹಾಗೂ ಮುಂಬೈನ 1 ಕಡೆ ಇಂದು ಸಿಬಿಐ ದಾಳಿ ನಡೆದಿದ್ದು, ದಾಖಲೆಗಳಿಗಾಗಿ ಹುಡುಕಾಟ ನಡೆಸಲಾಗುತ್ತಿದೆ.
ಡಿ.ಕೆ. ಶಿವಕುಮಾರ್ ಮನೆ ಜತೆಗೆ ಅವರ ಸಹೋದರ ಸಂಸದ ಡಿ.ಕೆ. ಸುರೇಶ್ ಮನೆ ಮೇಲೂ ದಾಳಿ ನಡೆಸಲಾಗಿದೆ. ಅವರಿಗೆ ಸಂಬಂಧಿಸಿದ ನಿವಾಸ, ಸಂಸ್ಥೆ, ಕಟ್ಟಡಗಳ ಮೇಲೆ ಸಿಬಿಐ ದಾಳಿ ಮಾಡಿದೆ.
ಡಿಕೆಶಿ ಅರೆಸ್ಟ್​?ಇದಾಗಲೇ 50 ಲಕ್ಷ ರೂಪಾಯಿ ಸೀಜ್​ ಆಗಿರುವ ಹಿನ್ನೆಲೆಯಲ್ಲಿ ಹಣದ ಬಗ್ಗೆ ವಿಚಾರಣೆ ಮಾಡುವ ಸಲುವಾಗಿ ಸಿಬಿಐ ಅಧಿಕಾರಿಗಳು ಶಿವಕುಮಾರ್​ ಅವರನ್ನು ವಶಕ್ಕೆ ಪಡೆಯುವ ಸಾಧ್ಯತೆ ಇದೆ ಎಂದು ಹೇಳಲಾಗುತ್ತಿದೆ.
ಸಿಬಿಐ ದಾಳಿ ನಡೆಸಿದ್ದೇಕೆ?ಅಷ್ಟಕ್ಕೂ ಡಿ.ಕೆ.ಶಿವಕುಮಾರ್​ ಅವರ ಮನೆಯ ಮೇಲೆ ಸಿಬಿಐ ಅಧಿಕಾರಿಗಳು ದಾಳಿ ನಡೆಸಿರುವುದಕ್ಕೆ ಕಾರಣ ಏಕೆಂದರೆ, ಸಿದ್ದರಾಮಯ್ಯನವರ ಸರ್ಕಾರದಲ್ಲಿ ಡಿ.ಕೆ. ಶಿವಕುಮಾರ್ ಅವರು ಇಂಧನ ಸಚಿವರಾಗಿದ್ದ ವೇಳೆ ಸಾರ್ವಜನಿಕರ ಹಣವನ್ನು ದುರುಪಯೋಗ ಮಾಡಿಕೊಂಡು, ಬಹುಕೋಟಿ ಆಸ್ತಿ ಸಂಪಾದನೆ ಮಾಡಿದ್ದಾರೆ ಎಂಬ ಆರೋಪ ಕೇಳಿಬಂದಿದೆ. ಇದಕ್ಕೆ ಸಂಬಂಧಿಸಿದ ದಾಖಲೆಗಳನ್ನು ಕಲೆಹಾಕಿದ್ದ ಆದಾಯ ತೆರಿಗೆ ಇಲಾಖೆ ಹಾಗೂ ಜಾರಿ ನಿರ್ದೇಶನಾಲಯಗಳಿಂದ ಡಿಕೆಶಿ ವಿಚಾರಣೆ ನಡೆಸಿತ್ತು. ಈ ಎರಡೂ ಇಲಾಖೆಗಳು ಆ ದಾಖಲೆಗಳನ್ನು ಸಿಬಿಐಗೆ ಹಸ್ತಾಂತರಿಸಿದೆ. ಇದೇ ಕಾರಣಕ್ಕೆ ಇಂದು ಸಿಬಿಐ ಅಧಿಕಾರಿಗಳು ದಾಳಿ ನಡೆಸಿದ್ದಾರೆ ಎಂದು ಅಧಿಕಾರಿಗಳು ಹೇಳುತ್ತಿದ್ದಾರೆ.
ಭಾರಿ ಪ್ರತಿಭಟನೆ:ಈ ದಾಳಿಯನ್ನು ಖಂಡಿಸಿ ಕಾಂಗ್ರೆಸ್ ಕಾರ್ಯಕರ್ತರು ಮತ್ತು ಡಿಕೆ ಶಿವಕುಮಾರ್ ಬೆಂಬಲಿಗರು ಡಿಕೆಶಿ ಮನೆ ಬಳಿ ಹಾಗೂ ಕಾಂಗ್ರೆಸ್ ಭವನದ ಎದುರು ಬಿಜೆಪಿ ಸರ್ಕಾರದ ವಿರುದ್ಧ ಪ್ರತಿಭಟನೆ ನಡೆಸುತ್ತಿದ್ದಾರೆ. ಬೆಂಗಳೂರಿನಲ್ಲಿರುವ ಕಾಂಗ್ರೆಸ್ ಭವನದ ಮುಂದೆ ಪ್ರತಿಭಟನೆ ನಡೆಸಲಾಗುತ್ತಿದೆ. ಉಪಚುನಾವಣೆ ವೇಳೆ ಪ್ರಧಾನಿ ಮೋದಿ ದುಷ್ಟ ರಾಜಕಾರಣವನ್ನು ಮಾಡುತ್ತಿದ್ದಾರೆ ಎಂದು ಬಿಜೆಪಿ ವಿರುದ್ಧ ಕಾಂಗ್ರೆಸ್ ಕಾರ್ಯಕರ್ತರು ಆಕ್ರೋಶ ಹೊರಹಾಕಿದ್ದಾರೆ.
ಡಿ.ಕೆ.ಶಿವಕುಮಾರ್​ ಆಪ್ತನ ಮನೆ ಮೇಲೂ ಸಿಬಿಐ ದಾಳಿ

ಡಿಕೆಶಿ ಮನೆ ಮೇಲೆ ಸಿಬಿಐ ದಾಳಿ: ದುಷ್ಟತನದ ಪರಮಾವಧಿ ಎಂದ ಸಿದ್ದುಗೆ ಕಮೆಂಟಿಗರಿಂದ ಗುದ್ದೋ ಗುದ್ದು!

ಡಿಕೆಶಿಗೆ ಡಬಲ್​ ಶಾಕ್​! ಆದಾಯ ಮೀರಿ ಆಸ್ತಿ ಗಳಿಕೆ ಆರೋಪ- ದಾಖಲಾಯ್ತು ಎಫ್​ಐಆರ್​

ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
ಭಾರತದಲ್ಲಿ ಬೇಳೆಕಾಳುಗಳು ಜನರು ಬಹುಮುಖ್ಯ ಭಕ್ಷ್ಯವಾಗಿದೆ. ಬೇಳೆಕಾಳುಗಳನ್ನು ವಾರಕ್ಕೊಮ್ಮೆಯಾದರೂ ತಿನ್ನಲಾಗುತ್ತದೆ. ಈ ಬೇಳೆಕಾಳುಗಳು ಪೋಷಕಾಂಶಗಳ ಆಗರವಾಗಿದ್ದು,…
ಬೆಂಗಳೂರು:  ಪಾಲಕರು ಪ್ರತಿ ಮಗುವಿನ ಮೊದಲ ಶಿಕ್ಷಕರು, ಅವರ ರೋಲ್ ಮಾಡೆಲ್. ಮಕ್ಕಳ ನಡವಳಿಕೆಯ ಮೇಲೆ…
Sign in to your account
Please enter an answer in digits:1 × five =
Remember me
