ಮುಂಬೈ:ಬಾಲಿವುಡ್​ನ ರಿಯಾಲಿಟಿ ಷೋ ಇರಲಿ, ಇನ್ನಾವುದೇ ಹಾಸ್ಯ ಕಾರ್ಯಕ್ರಮವೇ ಇರಲಿ… ಅಲ್ಲಿ ಈ ಕಾಮಿಡಿಯನ್​ ಇದ್ದರೆ ಆ ಷೋದ ಮಾತೇ ಬೇರೆ ಎನ್ನುವಷ್ಟು ಪ್ರಸಿದ್ಧಿ ಪಡೆದವರು ಭಾರ್ತಿ ಸಿಂಗ್​. ತಮ್ಮ ದಢೂತಿ ದೇಹವನ್ನೇ ತಮ್ಮ ಹಾಸ್ಯದ ವಸ್ತು ಮಾಡಿಕೊಂಡು ಜನರನ್ನು ನಕ್ಕು ನಗಿಸುವಲ್ಲಿ ಪ್ರಸಿದ್ಧರಾಗಿರುವ ಭಾರ್ತಿ ಇದೀಗ ಡ್ರಗ್ಸ್​ ಕೇಸ್​ನಲ್ಲಿ ಸಿಲುಕಿಕೊಂಡಿದ್ದಾರೆ.
ನಿನ್ನೆ ಭಾರ್ತಿ ಸಿಂಗ್​ ಅವರನ್ನು ನಾರ್ಕೋಟಿಕ್ಸ್​ ಕಂಟ್ರೋಲ್​ ಬ್ಯೂರೋ (ಎನ್​ಸಿಬಿ) ಅಧಿಕಾರಿಗಳು ವಶಕ್ಕೆ ಪಡೆದ ಬೆನ್ನಲ್ಲೇ ಅವರ ಪತಿ ಹರ್ಷ ಲಿಂಬಾಚಿಯಾ ಅವರನ್ನೂ ಇಂದು ವಶಕ್ಕೆ ಪಡೆದುಕೊಂಡು ವಿಚಾರಣೆ ನಡೆಸಲಾಗುತ್ತಿದೆ.
ಇದೀಗ ತಿಳಿದುಬಂದಿರುವ ಮಾಹಿತಿಯ ಪ್ರಕಾರ ತಾವು ಡ್ರಗ್ಸ್​ ಸೇವನೆ ಮಾಡುತ್ತಿರುವುದಾಗಿ ಈ ದಂಪತಿ ಒಪ್ಪಿಕೊಂಡಿದ್ದಾರಂತೆ. ಇದಕ್ಕೆ ಪುಷ್ಟಿ ನೀಡಲು ಎಂಬಂತೆ ನಿನ್ನೆ ಭಾರ್ತಿ ಸಿಂಗ್ ನಿವಾಸ ಮತ್ತು ಪ್ರೊಡೆಕ್ಷನ್ ಕಚೇರಿಯ ಮೇಲೆ ಎನ್‍ಸಿಬಿ ಅಧಿಕಾರಿಗಳು ದಾಳಿ ನಡೆಸಿದ್ದ ಸಂದರ್ಭದಲ್ಲಿ 86.5 ಗ್ರಾಂ ಗಾಂಜಾ ಲಭ್ಯವಾಗಿತ್ತು.
ಇದನ್ನೂ ಓದಿ:‘ಐದು ವರ್ಷಗಳ ಹಿಂದೆಯೇ ಅಂಡಾಣು ಫ್ರೀಜ್​ ಮಾಡಿದ್ದೇನೆ- ಬೇಕೆಂದಾಗ ಮಗು ಪಡೆಯುವೆ’
ಆದ್ದರಿಂದ ದಂಪತಿಯನ್ನು ತೀವ್ರ ವಿಚಾರಣೆಗೆ ಒಳಪಡಿಸಲಾಗಿದೆ. ಸತತ 15 ಗಂಟೆ ವಿಚಾರಣೆ ನಡೆಸಿದ ಬಳಿಕ ರಾತ್ರಿ ಇಬ್ಬರನ್ನು ಬಂಧನಕ್ಕೊಳಪಡಿಸಲಾಗಿದೆ. ಸದ್ಯ ಇಬ್ಬರನ್ನೂ ವೈದ್ಯಕೀಯ ಪರೀಕ್ಷೆಗೆ ಒಳಪಡಿಸಿ ನ್ಯಾಯಾಧೀಶರ ಮುಂದೆ ಹಾಜರು ಪಡಿಸಲಾಗುವುದು ಎಂದು ಅಧಿಕಾರಿಗಳು ಹೇಳಿದ್ದಾರೆ. ಈ ಮಧ್ಯೆಯೇ ದಂಪತಿ ತಾವು ಡ್ರಗ್ಸ್​ ಸೇವನೆ ಮಾಡುತ್ತಿರುವುದನ್ನು ಒಪ್ಪಿಕೊಂಡಿದ್ದಾರೆ ಎನ್ನಲಾಗಿದೆ.
ಅಷ್ಟಕ್ಕೂ ಈ ದಂಪತಿ ಸಿಕ್ಕಿಬಿದ್ದದ್ದು ಮಾದಕ ದ್ರವ್ಯಗಳ ಪ್ರಕರಣಕ್ಕೆ ಸಂಬಂಧಿಸಿದಂತೆ ನವೆಂಬರ್ 21ರಂದು ಮುಂಬೈನ ಖಾರದಂಡಾ ಇಲಾಖೆಯ ಯುವಕನ ನಿವಾಸದ ಮೇಲೆ ದಾಳಿ ನಡೆಸಿದ ಸಂದರ್ಭದಲ್ಲಿ. 21 ವರ್ಷದ ಯುವಕನನ್ನು ವಿಚಾರಣೆಗೆ ಒಳಪಡಿಸಿದಾಗ ಭಾರ್ತಿ ಸಿಂಗ್ ಹೆಸರು ಹೇಳಿದ್ದ. ಈ ಹಿನ್ನೆಲೆಯಲ್ಲಿ ಅಧಿಕಾರಿಗಳು ಭಾರ್ತಿ ಅವರ ನಿವಾಸದ ಮೇಲೆ ದಾಳಿ ನಡೆಸಿದ್ದರು. ಈ ಸಂದರ್ಭದಲ್ಲಿ ಡ್ರಗ್ಸ್​ ಅವರ ಮನೆಯಲ್ಲಿಯೂ ಪತ್ತೆಯಾಗಿದೆ.
ಜಾನ್​​ಸನ್​ ಪೌಡರ್​ನಿಂದ ಕ್ಯಾನ್ಸರ್​: ₹890 ಕೋಟಿ ಪರಿಹಾರಕ್ಕೆ ‘ಸುಪ್ರೀಂ’ ಆದೇಶ

ಮದ್ವೆಯಾಗಲು ‘ಎಸ್’​ ಹುಡುಗೀನ್ನ ಹುಡುಕುತ್ತಿದ್ದಾನೀತ- ಮೂರು ಹೆಂಡ್ತಿಯರೂ ನೀಡ್ತಿದ್ದಾರೆ ಸಾಥ್​!

ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:11 + 1 =
Remember me
