ಮುಂಬೈ:ಬಾಲಿವುಡ್ ಡ್ರಗ್ಸ್ ಪ್ರಕರಣಕ್ಕೆ ಸಂಬಂಧಿಸಿದಂತೆ ಬಾಲಿವುಡ್​ನ ಇಬ್ಬರು ಆರೋಪಿಗಳಿಗೆ ಜಾಮೀನು ಸಿಕ್ಕ ಹಿನ್ನೆಲೆಯಲ್ಲಿ, ತನಿಖಾ ಸಂಸ್ಥೆಯ ಇಬ್ಬರು ತನಿಖಾಧಿಕಾರಿಗಳನ್ನು ಅಮಾನತು ಮಾಡಲಾಗಿದೆ.
ಬಾಲಿವುಡ್ ನಟಿ, ಕಾಮಿಡಿಯನ್ ಭಾರ್ತಿ ಸಿಂಗ್ ಹಾಗೂ ನಟಿ ದೀಪಿಕಾ ಪಡುಕೋಣೆ ಅವರ ಮ್ಯಾನೇಜರ್ ಕರಿಷ್ಮಾ ಅವರಿಗೆ ಜಾಮೀನು ಸಿಕ್ಕಿದ್ದು ಈ ಇಬ್ಬರು ಅಧಿಕಾರಿಗಳಿಗೆ ಮುಳುವಾಗಿದೆ. ಇದಕ್ಕೆ ಕಾರಣ, ಈ ಇಬ್ಬರ ವಿರುದ್ಧ ಗಂಭೀರ ಆರೋಪಗಳು ಇದ್ದರೂ ಸೂಕ್ತವಾದ ತನಿಖೆ ನಡೆಸದೆ ನಿರ್ಲಕ್ಷ್ಯ ತೋರಿದ್ದಾರೆ ಎನ್ನುವುದು.
ಇವರ ವಿರುದ್ಧ ಪ್ರಬಲವಾದ ಸಾಕ್ಷ್ಯಾಧಾರ ಇದ್ದರೂ ಕೋರ್ಟ್​ಗೆ ಸೂಕ್ತ ಸಾಕ್ಷ್ಯಗಳನ್ನು ಒದಗಿಸದೇ, ತನಿಖೆಯನ್ನು ಸರಿಯಾಗಿ ಮಾಡದೇ ಕೋರ್ಟ್​ ಜಾಮೀನು ನೀಡಲು ಕಾರಣವಾಯಿತು ಎಂಬ ಕಾರಣಕ್ಕೆ ಈ ಅಧಿಕಾರಿಗಳ ವಿರುದ್ಧ ಕ್ರಮ ಕೈಗೊಳ್ಳಲಾಗಿದೆ.
ಇದನ್ನೂ ಓದಿ:ದೇವರ ಫೋಟೋ ಜತೆ ಕೆನಡಾದಿಂದ ಬೆಂಗಳೂರಿನ ಆಸ್ಪತ್ರೆಯೊಳಕ್ಕೇ ಬರ್ತಿತ್ತು ಡ್ರಗ್ಸ್​!
ಮಾದಕ ದ್ರವ್ಯಗಳ ಪ್ರಕರಣಕ್ಕೆ ಸಂಬಂಧಿಸಿದಂತೆ ನವೆಂಬರ್ 21ರಂದು ಮುಂಬೈನ ಖಾರದಂಡಾ ಇಲಾಖೆಯ ಯುವಕನ ನಿವಾಸದ ಮೇಲೆ ದಾಳಿ ನಡೆಸಿದ ಸಂದರ್ಭದಲ್ಲಿ. 21 ವರ್ಷದ ಯುವಕನನ್ನು ವಿಚಾರಣೆಗೆ ಒಳಪಡಿಸಿದಾಗ ಭಾರ್ತಿ ಸಿಂಗ್ ಹೆಸರು ಹೇಳಿದ್ದ. ಈ ಹಿನ್ನೆಲೆಯಲ್ಲಿ ಅಧಿಕಾರಿಗಳು ಭಾರ್ತಿ ಅವರ ನಿವಾಸದ ಮೇಲೆ ದಾಳಿ ನಡೆಸಿದ್ದರು.
ಭಾರ್ತಿ ಸಿಂಗ್ ನಿವಾಸ ಮತ್ತು ಪ್ರೊಡೆಕ್ಷನ್ ಕಚೇರಿಯ ಮೇಲೆ ಎನ್‍ಸಿಬಿ ಅಧಿಕಾರಿಗಳು ದಾಳಿ ನಡೆಸಿದ್ದ ಸಂದರ್ಭದಲ್ಲಿ 86.5 ಗ್ರಾಂ ಗಾಂಜಾ ಲಭ್ಯವಾಗಿತ್ತು. ಈ ಹಿನ್ನೆಲೆಯಲ್ಲಿ ಭಾರ್ತಿ ಹಾಗೂ ಅವರ ಪತಿ ಹರ್ಷ್ ಲಿಂಬಾಚಿಯಾ ಅವರನ್ನು ಪೊಲೀಸರು ಬಂಧಿಸಿದ್ದರು.
ಅದೇ ರೀತಿ, ಡ್ರಗ್ಸ್​ ಪ್ರಕರಣದಲ್ಲಿ ಕರಿಷ್ಮಾ ಪ್ರಕಾಶ್‌ ಮನೆ ಮೇಲೆ ಅಧಿಕಾರಿಗಳು ದಾಳಿ ನಡೆಸಿದ್ದರು. ಆ ವೇಳೆ ಹಲವು ಸಾಕ್ಷಿಗಳು ಸಿಕ್ಕಿದ್ದವು. ಆ ಬಳಿಕ ವಿಚಾರಣೆಗೆ ಹಾಜರಾಗುವಂತೆ ಕರಿಷ್ಮಾಗೆ ಸಮನ್ಸ್‌ ನೀಡಲಾಗಿತ್ತು. ಆದರೆ ಬಂಧನದ ಭೀತಿಯಿಂದಾಗಿ ಅವರು ತಲೆಮರೆಸಿಕೊಂಡಿದ್ದರು. ಅವರು ನಿರೀಕ್ಷಣಾ ಜಾಮೀನಿಗೂ ಅರ್ಜಿ ಸಲ್ಲಿಸಿದ್ದರು. ಅವರ ವಿರುದ್ಧ ಸೂಕ್ತ ಸಾಕ್ಷ್ಯಾಧಾರಗಳ ನೀಡಲು ಅಧಿಕಾರಿಗಳು ವಿಫಲರಾದ ಹಿನ್ನೆಲೆಯಲ್ಲಿ ಜಾಮೀನು ಮಂಜೂರು ಮಾಡಲಾಗಿತ್ತು.
ಬಸ್ಸೊಳಗೆ ತೂರಿಬಂದ ಪೈಪ್​​- ಶಿಶು ಎತ್ತಿಕೊಂಡಿದ್ದ ಯುವತಿಯ ರುಂಡವೇ ಕಟ್ಟಾಯ್ತು!

ಡಿವೋರ್ಸ್​ ಕೊಟ್ಟಿಲ್ಲ ಎಂದು ತಾಯಿಯನ್ನೇ ಕೊಲೆ ಮಾಡಿದ ಬಾಲಕ!

ಶಾಲೆಯಲ್ಲಿ ‘ಭೂತ’- ಬಡಿದುಕೊಳ್ಳುತ್ತಲೇ ಇದ್ದ ಬಾಗಿಲು: ಲಾಕ್​ ತೆಗೆದಾಗ ಏನಾಯ್ತು? ನೀವೇ ನೋಡಿ…

ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:fourteen − nine =
Remember me
