ಮುಂಬೈ: ಮಹಾರಾಷ್ಟ್ರದ ಮುಖ್ಯಮಂತ್ರಿಯಾಗಿದ್ದ ಉದ್ಧವ್​ ಠಾಕ್ರೆ ಅವರು ರಾಜೀನಾಮೆ ನೀಡಿದ ಬೆನ್ನಲ್ಲೇ ಇಂದು ರಾತ್ರಿ ನೂತನ ಮುಖ್ಯಮಂತ್ರಿ ಪ್ರಮಾಣ ವಚನ ಸ್ವೀಕಾರ ಮಾಡಲಿದ್ದಾರೆ. ಆದರೆ ಇಲ್ಲಿಯವರೆಗೂ ಹಿರಿಯ ಬಿಜೆಪಿ ನಾಯಕ ದೇವೇಂದ್ರ ಫಡ್ನವಿಸ್ ಅವರೇ ಮುಖ್ಯಮಂತ್ರಿ ಎಂದು ಹೇಳಲಾಗಿತ್ತು. ಆದರೆ ಕೊನೆ ಕ್ಷಣದಲ್ಲಿ ಇದಕ್ಕೆ ಭಾರಿ ಟ್ವಿಸ್ಟ್​ ಸಿಕ್ಕಿದೆ.
ಉಪ ಮುಖ್ಯಮಂತ್ರಿಯಾಗಿ ಪ್ರಮಾಣ ವಚನ ಸ್ವೀಕಿಸಬೇಕಿದ್ದ ಶಿವಸೇನೆಯ ಬಂಡಾಯ ನಾಯಕ ಏಕನಾಥ್​ ಶಿಂಧೆ ಅವರಿಗೇ ಮುಖ್ಯಮಂತ್ರಿ ಪಟ್ಟ ನೀಡಲು ತೀರ್ಮಾನಿಸಲಾಗಿದೆ. ಈ ಕುರಿತು ಪತ್ರಿಕಾಗೋಷ್ಠಿ ಕರೆದ ಫಡ್ನವಿಸ್​ ಮಾಹಿತಿ ನೀಡಿದ್ದಾರೆ. ಸದ್ಯ ಏಕನಾಥ್​ ಶಿಂಧೆ ಅವರನ್ನು ಮುಖ್ಯಮಂತ್ರಿ ಮಾಡಲು ನಿರ್ಧರಿಸಲಾಗಿದೆ. ಉಳಿದ ಬೆಳವಣಿಗೆಗಳ ಕುರಿತು ನಂತರದಲ್ಲಿ ಚರ್ಚಿಸಲಾಗುವುದು ಎಂದಿದ್ದಾರೆ.
ಇಂದು ರಾತ್ರಿ 7.30ಕ್ಕೆ ಪ್ರಮಾಣ ವಚನ ಸ್ವೀಕಾರ ಸಮಾರಂಭ ನಡೆಯಲಿದೆ ಎಂದೂ ಅವರು ತಿಳಿಸಿದ್ದಾರೆ. ಈ ಕುರಿತು ಪ್ರತಿಕ್ರಿಯೆ ನೀಡಿರುವ ಏಕನಾಥ ಶಿಂಧೆ, ಸಂಖ್ಯಾಬಲದ ಆಧಾರದ ಮೇಲೆ ಫಡ್ನವಿಸ್​ ಅವರೇ ಮುಖ್ಯಮಂತ್ರಿಯಾಗಬಹುದಿತ್ತು. ಆದರೆ ಅವರು ವಿಶಾಲ ಹೃದಯವಂತಿಕೆ ಮೆರೆದಿದ್ದು, ನನ್ನನ್ನು ಮುಖ್ಯಮಂತ್ರಿ ಮಾಡಿದ್ದಾರೆ. ಅವರಿಗೆ ನಾನು ಧನ್ಯವಾದ ಸಲ್ಲಿಸುತ್ತೇನೆ ಎಂದಿದ್ದಾರೆ.
ವಿಶ್ವಾಸಮತ ಸಾಬೀತುಪಡಿಸುವ ಪ್ರಶ್ನೆ ಉದ್ಭವಿಸಿದ ಬೆನ್ನಿಗೇ ನಿನ್ನೆ ಬುಧವಾರ ಮುಖ್ಯಮಂತ್ರಿ ಸ್ಥಾನಕ್ಕೆ ರಾಜೀನಾಮೆ ಉದ್ಧವ್ ಠಾಕ್ರೆ ರಾಜೀನಾಮೆ ಘೋಷಿಸಿದ್ದರು. ಅದನ್ನು ಇಂದು ರಾಜ್ಯಪಾಲರು ಅಂಗೀಕಾರ ಮಾಡಿದ್ದಾರೆ. ವಿಶ್ವಾಸಮತ ಸಾಬೀತುಪಡಿಸುವಂತೆ ಸುಪ್ರೀಂಕೋರ್ಟ್ ಸೂಚನೆ ನೀಡಿದ ಕೆಲವೇ ನಿಮಿಷಗಳಲ್ಲಿ ಫೇಸ್​ಬುಕ್ ಲೈವ್ ಬಂದಿದ್ದ ಠಾಕ್ರೆ, ತಾವು ರಾಜೀನಾಮೆ ನೀಡಲಿರುವುದಾಗಿ ಘೋಷಿಸಿದ್ದರು.
VIDEO: ಹನುಮಂತ ಶಿವನ 12ನೇ ಅವತಾರ ಎಂದು ಈಗಾದ್ರೂ ತಿಳೀತಾ ಶಿವಸೇನಾ? ಠಾಕ್ರೆಗೆ ಮತ್ತೆ ಕುಕ್ಕಿದ ಕಂಗನಾ

ಬಾಳ್​ ಠಾಕ್ರೆ ಪರಂಪರೆ ಮುಂದುವರೆಸಲು ಜೈಲಿಗೆ ಹೋಗಲೂ ಸಿದ್ಧ ಎಂದು ಭಾವುಕರಾದ ಸಂಸದ ರಾವುತ್​!

Sign in to your account
Please enter an answer in digits:one × one =
Remember me
