ಮುಂಬೈ:ಮಹಾರಾಷ್ಟ್ರದ ಗಡ್ಚಿರೋಲಿ ಜಿಲ್ಲೆಯ ಗ್ಯಾರಪಟ್ಟಿಯಲ್ಲಿ ಐವರು ನಕ್ಸಲರನ್ನು ಪೊಲೀಸರು ಹೊಡೆದುರುಳಿಸಿದ್ದಾರೆ. ಇವರಲ್ಲಿ ಮೂವರು ಮಹಿಳೆಯರು ಸೇರಿದ್ದಾರೆ.
ಕೋಸ್ಮಿ-ಕಿಸ್ನೇಲಿ ಅರಣ್ಯಪ್ರದೇಶದಲ್ಲಿ ನಿನ್ನೆ ಸಂಜೆ ಈ ಘಟನೆ ನಡೆದಿದೆ. ಇದು ಈ ವರ್ಷ ನಕ್ಸಲರ ವಿರುದ್ಧ ನಡೆದ ಅತಿದೊಡ್ಡ ಕಾರ್ಯಾಚರಣೆ ಎಂದು ಪೊಲೀಸರು ಹೇಳಿದ್ದಾರೆ.
ಗಡ್ಚಿರೋಲಿ ಪೊಲೀಸ್‌ ವಿಭಾಗದ ಸಿ-60 ಕಮಾಂಡೋಗಳು ಅರಣ್ಯದಲ್ಲಿ ಶೋಧ ನಡೆಸುತ್ತಿದ್ದಾಗ ನಕ್ಸಲರು ಏಕಾಏಕಿ ಗುಂಡಿನ ದಾಳಿ ನಡೆಸಿದರು. ಎರಡೂ ಕಡೆ ಗುಂಡಿನ ಚಕಮಕಿ ನಡೆಯಿತು. ಈ ಸಂದರ್ಭದಲ್ಲಿ ಕಮಾಂಡೋಗಳು ಎನ್​ಕೌಂಟರ್​ ನಡೆಸಿದ್ದು ಐವರನ್ನು ಹೊಡೆದುರುಳಿಸಿದ್ದಾರೆ.
ಇದನ್ನೂ ಓದಿ:ಶಾಸಕನ ಮೇಲೆ ಗ್ಯಾಂಗ್​ರೇಪ್​ ಆರೋಪ: ಗಾಯಕಿಯಿಂದ ದಾಖಲಾಯ್ತು ದೂರು
ಈ ಚಕಮಕಿಯಲ್ಲಿ ನಕ್ಸಲರು ತಪ್ಪಿಸಿಕೊಂಡರು. ಶೋಧ ನಡೆಸಿದಾಗ ಮೂವರು ಮಹಿಳಾ ನಕ್ಸಲರು ಸೇರಿದಂತೆ ಐವರ ಮೃತದೇಹ ಪತ್ತೆಯಾಯಿತು ಎಂದು ಪೊಲೀಸರು ಹೇಳಿದ್ದಾರೆ.
ಇನ್ನೊಂದೆಡೆ ಪ್ರತ್ಯೇಕ ಘಟನೆಯೊಂದರಲ್ಲಿ ತೆಲಂಗಾಣದ ಮುಲುಗು ಜಿಲ್ಲೆಯಲ್ಲಿ ಪೊಲೀಸರು ರವಿವಾರ ಇಬ್ಬರು ನಕ್ಸಲರನ್ನು ಹೊಡೆದುರುಳಿಸಿದ್ದಾರೆ.
ಚುನಾವಣೆಗೆ 10 ದಿನವಿರುವಾಗ ಅಮ್ಮನಾದ ಏಕೈಕ ಮಹಿಳಾ ಅಭ್ಯರ್ಥಿ

ಚಲಿಸುತ್ತಿದ್ದ ಕಾರಿನಲ್ಲಿ ಏಕಾಏಕಿ ಬೆಂಕಿ- ಬೆಂಗಳೂರಿನಲ್ಲಿ ನಡೆದ ಘಟನೆ

ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:2 × five =
Remember me
