ಧಾರವಾಡ:ಧಾರವಾಡ ಜಿಲ್ಲಾ ಪಂಚಾಯಿತಿ ಸದಸ್ಯ ಯೋಗೀಶ್ ಗೌಡರ ಕೊಲೆ ಪ್ರಕರಣ ಸಂಬಂಧ ಬಂಧನಕ್ಕೆ ಒಳಗಾಗಿರುವ ಮಾಜಿ ಸಚಿವ ವಿನಯ್ ಕುಲಕರ್ಣಿ ಜಾಮೀನು ಕೋರಿ ಸಲ್ಲಿಸಿದ್ದ ಅರ್ಜಿಯನ್ನು ಡಿಸೆಂಬರ್​ 4ಕ್ಕೆ ಮುಂದೂಡಲಾಗಿದೆ.
ಈ ಹಿನ್ನೆಲೆಯಲ್ಲಿ ಇನ್ನೊಂದು ವಾರ ವಿನಯ್​ ಅವರು ಜೈಲಿನಲ್ಲಿಯೇ ಕಾಲ ಕಳೆಯುವಂತಾಗಿದೆ.
2016ರ ಜೂನ್ 15ರಲ್ಲಿ ಉದಯ್ ಜಿಮ್​ನಲ್ಲಿ ಯೋಗೀಶ್​ ಗೌಡ ಬರ್ಬರವಾಗಿ ಹತ್ಯೆಯಾಗಿದ್ದರು. ಈ ಸಂಬಂಧ ಸಿಬಿಐ ವಿಚಾರಣೆ ಕೈಗೆತ್ತಿಗೊಂಡಾಗ ವಿನಯ್​ ಕುಲಕರ್ಣಿ ಹೆಸರು ಕೇಳಿಬಂದಿತ್ತು. ರಾಜಕೀಯ ಪ್ರಭಾವ ಬಳಸಿ ಕೇಸು ಮುಚ್ಚಿ ಹಾಕಿರುವ ಆರೋಪ ಇವರ ಮೇಲಿದೆ.
ಇದನ್ನೂ ಓದಿ:ಅನಿಯಮಿತ ಮೂತ್ರ ಸಮಸ್ಯೆಯೆ?ಆಯುರ್ವೇದ ವೈದ್ಯರ ಪರಿಹಾರ ಇಲ್ಲಿದೆ…
ಕಳೆದ ತಿಂಗಳು ಧಾರವಾಡ ಕಲ್ಯಾಣ ನಗರದಲ್ಲಿನ ವಿನಯ್​ ಕುಲಕರ್ಣಿ ಮನೆ ಮೇಲೆ ದಾಳಿ ಮಾಡಿದ ಸಿಬಿಐ ಅಧಿಕಾರಿಗಳು ಅವರನ್ನು ವಶಕ್ಕೆ ಪಡೆದಿದ್ದರು. ತಮಗೆ ಜಾಮೀನು ನೀಡುವಂತೆ ಅವರು ಕೋರ್ಟ್​ ಮೊರೆ ಹೋಗಿದ್ದಾರೆ.
ಈ ಹಿಂದೆ ಸಲ್ಲಿಸಿದ್ದ ಜಾಮೀನು ಅರ್ಜಿಯನ್ನು ಅವರ ಪರ ವಕೀಲರು ವಾಪಸ್ ಪಡೆದಿದ್ದರು. ಇದೀಗ ಹೊಸ ಜಾಮೀನು ಅರ್ಜಿಯನ್ನು ಸಲ್ಲಿಸಲಾಗಿದೆ. ಇಂದು ಅರ್ಜಿ ವಿಚಾರಣೆಯ ಅವಧಿ ಮುಗಿದ ಹಿನ್ನೆಲೆ ಡಿಸೆಂಬರ 4ಕ್ಕೆ ವಿಚಾರಣೆಯನ್ನು ನ್ಯಾಯಾಲಯ ಮುಂದೂಡಿದೆ.
ಧಾರವಾಡದ ಮೂರನೇ ಹೆಚ್ಚುವರಿ ಸೆಷನ್ ಕೋರ್ಟ್​ನಲ್ಲಿ ನ.23ರಂದು ವಿನಯ್ ಅವರ ನ್ಯಾಯಾಂಗ ಬಂಧನ ವಿಚಾರಣೆ ಇತ್ತು. ಈ ವೇಳೆ ಸಿಬಿಐ ಅಧಿಕಾರಿಗಳು ಕೋರ್ಟಿಗೆ ನ್ಯಾಯಾಂಗ ಬಂಧನದ ಅವಧಿಯನ್ನು ವಿಸ್ತರಿಸುವಂತೆ ಮನವಿ ಸಲ್ಲಿಸಿದ್ದರು. ಹೀಗಾಗಿ ಹಿಂಡಲಗಾ ಜೈಲಿನಿಂದಲೇ ವಿಡಿಯೋ ಕಾನ್ಪರೆನ್ಸ್ ಮೂಲಕ ವಿನಯ್ ವಿಚಾರಣೆಗೆ ಹಾಜರಾದರು.
ಇದರ ವಿಚಾರಣೆಯನ್ನು ಸೆಷನ್ಸ್​ ಕೋರ್ಟ್​ ಡಿಸೆಂಬರ್​ 4ಕ್ಕೆ ಮುಂದೂಡಿದೆ. ಸದ್ಯ ಅವರು ಬೆಳಗಾವಿಯ ಹಿಂಡಲಗಾ ಜೈಲಿನಲ್ಲಿದ್ದಾರೆ.
ಮಹಾರಾಷ್ಟ್ರ ಸರ್ಕಾರಕ್ಕೆ ಮುಖಭಂಗ- ಹೈಕೋರ್ಟ್​ನಿಂದ ಕಂಗನಾಗೆ ಸಿಕ್ಕಿತು ರಿಲೀಫ್​

ಮಿನಿ ಧರಿಸಿ, ಕೆಳಕ್ಕೆ ಬಗ್ಗಿ ‘ಸೆಕ್ಸಿ ಶಾಪಿಂಗ್’ ಮಾಡೋ​ ಟಿಪ್ಸ್​ ಕೊಟ್ಟಾಕೆ ಸಿಲುಕಿದಳು ಪೇಚಿಗೆ!

ಕೊಲೆ ಕೇಸ್​ನಲ್ಲಿ ವಿನಯ್​ ಕುಲಕರ್ಣಿ ಜೈಲುಪಾಲು

ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
ಭಾರತದಲ್ಲಿ ಬೇಳೆಕಾಳುಗಳು ಜನರು ಬಹುಮುಖ್ಯ ಭಕ್ಷ್ಯವಾಗಿದೆ. ಬೇಳೆಕಾಳುಗಳನ್ನು ವಾರಕ್ಕೊಮ್ಮೆಯಾದರೂ ತಿನ್ನಲಾಗುತ್ತದೆ. ಈ ಬೇಳೆಕಾಳುಗಳು ಪೋಷಕಾಂಶಗಳ ಆಗರವಾಗಿದ್ದು,…
ಬೆಂಗಳೂರು:  ಪಾಲಕರು ಪ್ರತಿ ಮಗುವಿನ ಮೊದಲ ಶಿಕ್ಷಕರು, ಅವರ ರೋಲ್ ಮಾಡೆಲ್. ಮಕ್ಕಳ ನಡವಳಿಕೆಯ ಮೇಲೆ…
Sign in to your account
Please enter an answer in digits:one + nineteen =
Remember me
