ನವದೆಹಲಿ:ಕೇಂದ್ರ ಸರ್ಕಾರ ಜಾರಿಗೊಳಿಸಿರುವ ಕೃಷಿ ಕಾನೂನುಗಳನ್ನು ವಿರೋಧಿಸಿ ರೈತರು, ಅದರಲ್ಲಿಯೂ ಹೆಚ್ಚಾಗಿ ಪಂಜಾಬ್‌- ಹರಿಯಾಣ ರೈತರು ನಡೆಸುತ್ತಿರುವ ಪ್ರತಿಭಟನೆಗೆ ಒಂದು ತಿಂಗಳಾಗುತ್ತಾ ಬಂದಿದೆ.
ಈ ಕೃಷಿ ಕಾನೂನಿನಲ್ಲಿ ಇರುವ ನಿಜವಾದ ಅಂಶವೇನು, ವಿಪಕ್ಷಗಳು ಹೇಗೆ ರೈತರನ್ನು ದಾರಿ ತಪ್ಪಿಸುತ್ತಿದ್ದಾರೆ ಎಂದು ಪ್ರಧಾನಿ ನರೇಂದ್ರ ಮೋದಿಯವರು ಹೇಳಿಕೆ ನೀಡುತ್ತಿರುವ ಹೊರತಾಗಿಯೂ ರೈತರು ತಮ್ಮ ಪ್ರತಿಭಟನೆಯನ್ನು ಹಿಂದಕ್ಕೆ ಪಡೆಯುತ್ತಿಲ್ಲ.
ಈ ಮಧ್ಯೆಯೇ, ಕೇಂದ್ರ ಸರ್ಕಾರದ ವಿರುದ್ಧ ಕಿಡಿ ಕಾರಿರುವ ಮಾಜಿ ಸಂಸದ ಹರಿಂದರ್ ಸಿಂಗ್ ಖಾಲ್ಸಾ (73), ಬಿಜೆಪಿ ತೊರೆದಿದ್ದಾರೆ. ಕೇಂದ್ರ ಸರ್ಕಾರದ ಕೃಷಿ ಕಾನೂನುಗಳನ್ನು ವಿರೋಧಿಸಿ ರೈತರು ನಡೆಸುತ್ತಿರುವ ಪ್ರತಿಭಟನೆಗೆ ಭಾರತೀಯ ಜನತಾ ಪಕ್ಷವು ಸರಿಯಾಗಿ ಸ್ಪಂದಿಸುತ್ತಿಲ್ಲ ಎಂದು ಆರೋಪಿಸಿರುವ ಅವರು ತಾವು ರಾಜೀನಾಮೆ ನೀಡುತ್ತಿರುವುದಾಗಿ ಹೇಳಿದ್ದಾರೆ. ರೈತರ ವಿರುದ್ದ ವಿಭಿನ್ನ ನಿಲುವು ತಳೆದಿರುವುದರಿಂದ ಬಿಜೆಪಿಗೆ ರಾಜೀನಾಮೆ ನೀಡಲು ನಿರ್ಧರಿಸಿದ್ದೇನೆ ಎಂದರು.
ಹರಿಂದರ್ ಸಿಂಗ್ ಖಾಲ್ಸಾ ಅವರು, 2014ರಲ್ಲಿ ಫತೇರ್‌ಗಡದಲ್ಲಿ ಆಮ್ ಆದ್ಮಿ ಪಕ್ಷದ ಅಭ್ಯರ್ಥಿಯಾಗಿ ಲೋಕಸಭೆಗೆ ಚುನಾಯಿತಗೊಂಡಿದ್ದರು. ಆದರೆ ಪಕ್ಷ ವಿರೋಧಿ ಚಟುವಟಿಕೆಗಳಿಂದಾಗಿ ಎಎಪಿಯಿಂದ ಅಮಾನತುಗೊಂಡಿದ್ದರು. ಬಳಿಕ 2019ರಲ್ಲಿ ಬಿಜೆಪಿಯನ್ನು ಸೇರಿದ್ದರು.
ಈ ಮಧ್ಯೆ ಪ್ರತಿಭಟನಾನಿರತ ರೈತರು ಡಿಸೆಂಬರ್ 29ರಂದು ಕೇಂದ್ರದ ಜತೆ ಮಾತುಕತೆ ನಡೆಸಲಿದ್ದಾರೆ. ಮಾತುಕತೆಗೆ ಬರುವಂತೆ ಪ್ರಧಾನಿ ಮನವಿಯನ್ನು ಪರಿಗಣಿಸಿ ಚರ್ಚೆ ನಡೆಸಲು ಸಿದ್ಧವಾಗಿದ್ದಾರೆ.
ಮಕ್ಕಳಿಗಾಗಿ ಮದುವೆಯಾದರು: ಎರಡನೇ ಪತ್ನಿಯಾದ ಮಾತ್ರಕ್ಕೆ ನನಗೆ ಬಯಕೆಗಳು ಇರುವುದು ತಪ್ಪೆ?

ಬೆಂಗಳೂರಿನಲ್ಲಿ ಬೈಕ್‌ ಸವಾರರ ಜಾಲಿರೈಡ್‌ಗೆ ಐದು ಕಾರುಗಳು ‘ಬಲಿ’! ಸರಣಿ ಅಪಘಾತದಿಂದ ಆತಂಕ

ಕಣ್ಣೆದುರೇ ಕುಟುಂಬಸ್ಥರ ಮೇಲೆ ಥರ್ಡ್‌ ಡಿಗ್ರಿ ಪ್ರಯೋಗಿಸಿದ ಪೊಲೀಸರು: ಬೆದರಿ ಯುವತಿಯ ಆತ್ಮಹತ್ಯೆ

ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:five × four =
Remember me
