ಮುಂಬೈ:ಬಾಂಬ್​ ಸ್ಫೋಟ, ಆತ್ಮಹತ್ಯೆ ಪ್ರಕರಣ ಸೇರಿದಂತೆ ಭ್ರಷ್ಟಾಚಾರದ ಆರೋಪ ಎದುರಿಸುತ್ತಿರುವ ಮಹಾರಾಷ್ಟ್ರದ ಗೃಹ ಸಚಿವ ಅನಿಲ್​ ದೇಶ್​ಮುಖ್​ ಅವರನ್ನು ಹುದ್ದೆಯಿಂದ ವಜಾ ಮಾಡಬೇಕು ಎಂಬ ಒತ್ತಡ ಇದೀಗ ಬಲು ಜೋರಾಗಿ ಕೇಳಬರತೊಡಿಗಿದೆ.
ಮೊದಲು ಇವರ ವಿರುದ್ಧ ಗಂಭೀರ ಆರೋಪ ಕೇಳಿಬಂದದ್ದು, ಸಂಸದ ಮೋಹನ್ ದೇಲ್ಕರ್ ಆತ್ಮಹತ್ಯೆ ಪ್ರಕರಣದಲ್ಲಿ. ಖಾಸಗಿ ಹೋಟೆಲ್​ನಲ್ಲಿ ಆತ್ಮಹತ್ಯೆ ಮಾಡಿಕೊಂಡಿದ್ದ ಮೋಹನ್​ ಅವರ ಸಾವಿನಲ್ಲಿ ಅನಿಲ್​ ದೇಶ್​ಮುಖ್​ ಅವರ ಹೆಸರು ಕೇಳಿಬಂದಿತ್ತು.
ನಂತರ ಉದ್ಯಮಿ ಮುಕೇಶ್ ಅಂಬಾನಿ ಮನೆ ಮುಂದೆ ಸ್ಫೋಟಕ ಹೊತ್ತಿದ್ದ ಕಾರು ಪತ್ತೆ ಪ್ರಕರಣದಲ್ಲಿಯೂ ಇವರ ಹೆಸರು ಕೇಳಿಬಂದಿದೆ. ಈ ಪ್ರಕರಣದಲ್ಲಿ ಅಮಾನತುಗೊಂಡಿರುವ ಎನ್​ಕೌಂಟರ್​ ಸ್ಪೆಷಲಿಸ್ಟ್​ ಸಚಿನ್ ವಾಜೆ ಬಳಿ ದೇಶ್​ಮುಖ್ ಅವರು ಬಾರ್ ಹಾಗೂ ರೆಸ್ಟೋರೆಂಟ್​ಗಳಿಂದ ಪ್ರತಿ ತಿಂಗಳು 100 ಕೋಟಿ ಹಣ ವಸೂಲಿ ಮಾಡುವಂತೆ ಒತ್ತಡ ಹೇರಿದ್ದರು ಎಂದು ಮುಂಬೈ ಮಾಜಿ ಪೊಲೀಸ್ ಆಯುಕ್ತ ಪರಮ್​ಬೀರ್​ ಸಿಂಗ್​ ಮಹಾರಾಷ್ಟ್ರ ಮುಖ್ಯಮಂತ್ರಿ ಉದ್ಧವ್ ಠಾಕ್ರೆ ಅವರಿಗೆ ಬರೆದ ಪತ್ರದಲ್ಲಿ ಆರೋಪಿಸಿದ್ದರು.
ನಂತರ ಮಹಾರಾಷ್ಟ್ರ ಸರ್ಕಾರ ಮತ್ತು ಶಿವಸೇನೆ ‘ಅದು ಪರಮ್​ವೀರ್ ಸಿಂಗ್ ಬರೆದ ಪತ್ರವಲ್ಲ ಎಂದು ಹೇಳಿ ನುಣುಚಿಕೊಳ್ಳುವ ಪ್ರಯತ್ನ ಮಾಡಿತ್ತು. ಆದರೆ ಇಂದು ಬೆಳಗ್ಗೆ ಪರಮ್​ವೀರ್ ಸಿಂಗ್ ಖುದ್ದಾಗಿ ತಾವೇ ಪತ್ರ ಬರೆದಿದ್ದಾಗಿ ಖಚಿತಪಡಿಸಿದ್ದ ಹಿನ್ನೆಲೆಯಲ್ಲಿ ಸರ್ಕಾರ ಇದೀಗ ಭಾರಿ ಮುಜುಗರ ಅನುಭವಿಸುವಂತಾಗಿದೆ.
ಈ ಹಿನ್ನೆಲೆಯಲ್ಲಿ ಅವರನ್ನು ಹುದ್ದೆಯಿಂದ ಕೆಳಕ್ಕೆ ಇಳಿಸಬೇಕು ಎಂಬ ಭಾರಿ ಒತ್ತಡ ಕೇಳಿಬರುತ್ತಿದೆ. ಈ ನಡುವೆ, ಇಂದು ಸಂಜೆ ಶಿವಸೇನಾ ನಾಯಕರೊಂದಿಗೆ ಮತ್ತು ರಾಷ್ಟ್ರೀಯವಾದಿ ಕಾಂಗ್ರೆಸ್ ಪಕ್ಷದ ನಾಯಕ ಶರದ್ ಪವಾರ್ ಅವರೊಂದಿಗೆ ಸಭೆ ನಡೆಸಿ ತೀರ್ಮಾನ ತೆಗೆದುಕೊಳ್ಳಲಾಗುವುದು ಎಂದು ಮುಖ್ಯಮಂತ್ರಿ ಉದ್ಧವ್ ಠಾಕ್ರೆ ಹೇಳಿದ್ದಾರೆ.
ಇವೆಲ್ಲ ಬೆಳವಣಿಗೆಗಳ ನಡುವೆಯೇ ಪರಮ್​ವೀರ್ ಸಿಂಗ್ ಮಾಡಿರುವ ಆರೋಪಗಳು ಸಂಪೂರ್ಣ ಸುಳ್ಳು. ಹಾಗೂ ನಾನು ಮಾನಹಾನಿ ಪ್ರಕರಣ ದಾಖಲಿಸುತ್ತಿರುವ ಕಾರಣ ಅವರು ಮಾಡಿರುವ ಆರೋಪಗಳನ್ನು ಸಾಕ್ಷೀಕರಿಸಬೇಕು ಎಂದು ಅನಿಲ್ ದೇಶ್​ಮುಖ್ ತಿಳಿಸಿದ್ದಾರೆ.
ಸ್ನೇಹಿತೆಯ ಜತೆ ಸೇರಿದಾಗ ಅವಳಿಗೆ ನಾನು ಮೊದಲಿನವನಲ್ಲ ಎನ್ನಿಸಿತು- ಸಂದೇಹ ಪರಿಹಾರ ಹೇಗೆ ಮಾಡಿಕೊಳ್ಳಲಿ?

ಎಲ್ಲೆಲ್ಲೋ ಹೋಗಿ ಬಟ್ಟೆ ಬಿಚ್​ತಿರೋರಿಗೆ ದಾನ ಮಾಡ್ತೇನೆ- ಇನ್ನೂ 19 ಸಿಡಿ ಇವೆಯಂತೆ…ಜೋಕೆ!

‘ಮೇ 1ರಂದು ನಾಲ್ಕು ಕೊಲೆ- ಸಿ.ಟಿ ರವಿ ಕೊಲೆಯಾದ್ರೆ ನಾನ್​ ಉಳೀತೇನೆ, ನನ್ನ ಕೊಲೆಯಾದ್ರೆ ಅವ್ರು ಉಳೀತಾರೆ’

ಪತ್ನಿ ಅನೈತಿಕ ಸಂಬಂಧ ಗೊತ್ತಾದರೂ ಸುಮ್ಮನಿದ್ದರೆ ಈಗ ಅತಿಯಾಗಿಬಿಟ್ಟಿದೆ- ಸಾಕ್ಷಿ ಇಲ್ಲದೆ ಡಿವೋರ್ಸ್​ ಪಡೆಯುವುದು ಹೇಗೆ?

ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
ಭಾರತದಲ್ಲಿ ಬೇಳೆಕಾಳುಗಳು ಜನರು ಬಹುಮುಖ್ಯ ಭಕ್ಷ್ಯವಾಗಿದೆ. ಬೇಳೆಕಾಳುಗಳನ್ನು ವಾರಕ್ಕೊಮ್ಮೆಯಾದರೂ ತಿನ್ನಲಾಗುತ್ತದೆ. ಈ ಬೇಳೆಕಾಳುಗಳು ಪೋಷಕಾಂಶಗಳ ಆಗರವಾಗಿದ್ದು,…
ಬೆಂಗಳೂರು:  ಪಾಲಕರು ಪ್ರತಿ ಮಗುವಿನ ಮೊದಲ ಶಿಕ್ಷಕರು, ಅವರ ರೋಲ್ ಮಾಡೆಲ್. ಮಕ್ಕಳ ನಡವಳಿಕೆಯ ಮೇಲೆ…
Sign in to your account
Please enter an answer in digits:15 + thirteen =
Remember me
