ಲಖನೌ:ಉತ್ತರ ಪ್ರದೇಶದ ಮಾಜಿ ಮುಖ್ಯಮಂತ್ರಿ ಮತ್ತು ಸಮಾಜವಾದಿ ಪಕ್ಷದ ಮುಖ್ಯಸ್ಥ ಅಖಿಲೇಶ್ ಯಾದವ್ ಟ್ವಿಟರ್​ನಲ್ಲಿ ಶೇರ್​ ಮಾಡಿರುವ ಘಟನೆಯೊಂದು ಇದೀಗ ಭಾರಿ ಚರ್ಚೆಗೆ ಗ್ರಾಸವಾಗಿದೆ. ಈ ಚಿತ್ರದಲ್ಲಿ ಮಹಿಳೆಯೊಬ್ಬರು ಕೆಳಕ್ಕೆ ಬಿದ್ದಿದ್ದು, ಅವರ ಮೇಲೆ ಪೊಲೀಸ್​ ಸಿಬ್ಬಂದಿ ಕುಳಿತುಕೊಂಡಿದ್ದಾರೆ.ಒಮ್ಮೆಲೇ ಇದನ್ನು ನೋಡಿದರೆ ಈ ಪೊಲೀಸ್​ ಮಹಿಳೆಯ ಮೇಲೆ ದೌರ್ಜನ್ಯ ಎಸಗುತ್ತಿರುವಂತೆ ಕಾಣಿಸುತ್ತದೆ. ಅಖಿಲೇಶ್​ ಕೂಡ ಇದೇ ರೀತಿಯ ಕ್ಯಾಪ್ಷನ್​ ಅದಕ್ಕೆ ಕೊಟ್ಟಿದ್ದಾರೆ. ಅವರು ಕೆಲವು ಪೊಲೀಸ್ ಅಧಿಕಾರಿಗಳು ಅಧಿಕಾರ ದುರುಪಯೋಗಪಡಿಸಿಕೊಂಡಿದ್ದಾರೆ ಎಂದು ಅವರು ಬಿಜೆಪಿ ವಿರುದ್ಧ ಕಿಡಿ ಕಾರಿದ್ದಾರೆ. ಯೋಗಿ ಆದಿತ್ಯನಾಥ ವಿರುದ್ಧ ವಾಗ್ದಾಳಿ ನಡೆಸಿದ್ದಾರೆ.ಇದನ್ನು ಶೇರ್​ ಮಾಡಿರುವ ಅನೇಕ ಮಂದಿ ಬಿಜೆಪಿ ವಿರುದ್ಧ ಹರಿಹಾಯ್ದಿದ್ದಾರೆ. ಆದರೆ ಅಸಲಿಗೆ ಈ ಫೋಟೋದ ಕಥೆಯೇ ಬೇರೆ. ಇಲ್ಲಿ ಮಹಿಳೆಯ ಮೇಲೆ ಪೊಲೀಸ್​ ದೌರ್ಜನ್ಯ ನಡೆಸುತ್ತಿಲ್ಲ. ಬದಲಿಗೆ ಮಹಿಳೆ ಪೊಲೀಸ್ ಅಧಿಕಾರಿಯನ್ನು ಕೊರಳು ಪಟ್ಟಿ ಹಿಡಿದು ಎಳೆದಾಗ ಪೊಲೀಸ್ ಅದರಿಂದ ಬಿಡಿಸಿಕೊಳ್ಳಲು ಪ್ರಯತ್ನಿಸುವ ಚಿತ್ರವಾಗಿದೆ ಇದು! ಇದು ನಡೆದಿರುವುದು ಉತ್ತರ ಪ್ರದೇಶದ ಕಾನ್ಪುರ್ ದೇಹತ್ ಜಿಲ್ಲೆಯಲ್ಲಿ.ಇದೀಗ ಸತ್ಯ ಬಹಿರಂಗಗೊಂಡಿದ್ದು ಜಾಲತಾಣದಲ್ಲಿ ಅಖಿಲೇಶ್​ ಯಾದವ್​ ವಿರುದ್ಧ ಭಾರಿ ಪ್ರತಿಭಟನೆ ಶುರುವಾಗಿದೆ. ಪುಖರಾಯನ್ ಔಟ್‌ಪೋಸ್ಟ್ ಉಸ್ತುವಾರಿ ಮಹೇಂದ್ರ ಪಟೇಲ್ ಎಂದು ಗುರುತಿಸಲ್ಪಟ್ಟ ಈ ಅಧಿಕಾರಿಯು ನಾಲ್ವರು ಕಾನ್‌ಸ್ಟೆಬಲ್‌ಗಳ ತಂಡದೊಂದಿಗೆ ಆರೋಪಿಗಳೊಬ್ಬರ ಮನೆಯ ಮೇಲೆ ದಾಳಿ ನಡೆಸಲು ಹೋದಾಗ ಮಹಿಳೆಯರೊಂದಿಗೆ ಕೆಟ್ಟದಾಗಿ ವರ್ತಿಸಿದ್ದಾಳೆ ಎನ್ನಲಾಗಿದೆ. ಈ ಬಗ್ಗೆ ವಿಚಾರಣೆ ನಡೆಸಲಾಗುತ್ತಿದೆ.
उप्र में भाजपा सरकार के कृपापात्र बने कुछ पुलिसकर्मियों के दुर्व्यवहार से प्रदेश की समस्त पुलिस की छवि धूमिल होती है.भाजपा के शासन में दुशासन की कमी नहीं.घोर निंदनीय!#नहीं_चाहिए_भाजपाpic.twitter.com/tOmmbpe2RZ— Akhilesh Yadav (@yadavakhilesh)July 17, 2021
उप्र में भाजपा सरकार के कृपापात्र बने कुछ पुलिसकर्मियों के दुर्व्यवहार से प्रदेश की समस्त पुलिस की छवि धूमिल होती है.भाजपा के शासन में दुशासन की कमी नहीं.घोर निंदनीय!#नहीं_चाहिए_भाजपाpic.twitter.com/tOmmbpe2RZ
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
ಭಾರತದಲ್ಲಿ ಬೇಳೆಕಾಳುಗಳು ಜನರು ಬಹುಮುಖ್ಯ ಭಕ್ಷ್ಯವಾಗಿದೆ. ಬೇಳೆಕಾಳುಗಳನ್ನು ವಾರಕ್ಕೊಮ್ಮೆಯಾದರೂ ತಿನ್ನಲಾಗುತ್ತದೆ. ಈ ಬೇಳೆಕಾಳುಗಳು ಪೋಷಕಾಂಶಗಳ ಆಗರವಾಗಿದ್ದು,…
ಬೆಂಗಳೂರು:  ಪಾಲಕರು ಪ್ರತಿ ಮಗುವಿನ ಮೊದಲ ಶಿಕ್ಷಕರು, ಅವರ ರೋಲ್ ಮಾಡೆಲ್. ಮಕ್ಕಳ ನಡವಳಿಕೆಯ ಮೇಲೆ…
Sign in to your account
Please enter an answer in digits:5 × 2 =
Remember me
