ನವದೆಹಲಿ:ಕೇಂದ್ರ ಸರ್ಕಾರ ಜಾರಿಗೊಳಿಸಿರುವ ಕೃಷಿ ಕಾಯ್ದೆಯ ಬಿಕ್ಕಟ್ಟು ಇಷ್ಟು ಸುಲಭದಲ್ಲಿ ಮುಗಿಯುವ ಲಕ್ಷಣಗಳು ಗೋಚರಿಸುತ್ತಿಲ್ಲ. ಇವತ್ತು ರೈತರು ಮತ್ತು ಕೇಂದ್ರದ ಜತೆ ನಡೆದಿರುವ 9 ನೇ ಸುತ್ತಿನ ಮಾತುಕತೆ ಕೂಡ ವಿಫಲವಾಗಿದೆ.
ಮೂಲಗಳ ಪ್ರಕಾರ, ರೈತರು ಕಾನೂನುಗಳನ್ನು ರದ್ದುಗೊಳಿಸುವ ತಮ್ಮ ಮೂಲ ಬೇಡಿಕೆಗೆ ಪಟ್ಟು ಹಿಡಿದಿದ್ದಾರೆ ಮತ್ತು ತಿದ್ದುಪಡಿಗಳನ್ನು ನೀಡುವ ಸರ್ಕಾರದ ಪ್ರಸ್ತಾಪವನ್ನು ತಿರಸ್ಕರಿಸಿದ್ದಾರೆ. ಆದರೆ ಈ ಕುರಿತು ಇಂದು ನಡೆದ ಮಾತುಕತೆ ಯಾವುದೇ ಫಲ ನೀಡಿಲ್ಲ ಎನ್ನಲಾಗಿದೆ. ಮುಂದಿನ ಸುತ್ತಿನ ಮಾತುಕತೆ ಜನವರಿ 19 ರಂದು ಮಧ್ಯಾಹ್ನ 12.00 ಗಂಟೆಗೆ ನಿಗದಿಯಾಗಿದೆ.
ಇಂದಿನ ಸಭೆಯಲ್ಲಿ ಕೇಂದ್ರ ಕೃಷಿ ಸಚಿವ ನರೇಂದ್ರ ಸಿಂಗ್ ತೋಮರ್, ರೈಲ್ವೆ, ವಾಣಿಜ್ಯ ಮತ್ತು ಆಹಾರ ಸಚಿವ ಪಿಯೂಷ್ ಗೋಯಲ್ ಮತ್ತು ವಾಣಿಜ್ಯ ಸಚಿವ ಸೋಮ್ ಪ್ರಕಾಶ್ ಅವರು ಸುಮಾರು 40 ರೈತ ಸಂಘಟನೆಗಳ ಪ್ರತಿನಿಧಿಗಳೊಂದಿಗೆ ಭಾಗವಹಿಸಿದ್ದರು.
ಕೇಂದ್ರ ಕೃಷಿ ಸಚಿವ ನರೇಂದ್ರ ಸಿಂಗ್ ತೋಮರ್ ಈ ಕುರಿತು ಮಾತನಾಡಿ, ಮಾತುಕತೆಯ ಮೂಲಕ ಸಮಸ್ಯೆ ಇತ್ಯರ್ಥಕ್ಕೆ ಯತ್ನಿಸುತ್ತಿದ್ದೇವೆ. ತೀವ್ರವಾದ ಚಳಿಯಲ್ಲಿ ರೈತರು ಪ್ರತಿಭಟನೆ ಮಾಡುತ್ತಿದ್ದಾರೆ. ಇದಕ್ಕೆ ಕೇಂದ್ರ ಸರ್ಕಾರ ಕಳವಳ ವ್ಯಕ್ತಪಡಿಸಿದೆ ಎಂದು ತಿಳಿಸಿದ್ದಾರೆ.
ಸಭೆಗೆ ತೆರಳುವ ಮುನ್ನ ಮಾಧ್ಯಮಗಳಿಗೆ ಪ್ರತಿಕ್ರಿಯಿಸಿದ ಕೇಂದ್ರ ಸಚಿವ ನರೇಂದ್ರ ಸಿಂಗ್ ತೊಮರ್, ರೈತರ ಪ್ರತಿಭಟನೆ ವಿಚಾರದಲ್ಲಿ ಸುಪ್ರೀಂ ಕೋರ್ಟ್ ಆದೇಶವನ್ನು ಸರ್ಕಾರ ಸ್ವಾಗತಿಸುತ್ತದೆ. ಸುಪ್ರೀಂ ಕೋರ್ಟ್ ರಚಿಸಿರುವ ಸಮಿತಿ ಮುಂದೆ ಸರ್ಕಾರ ತನ್ನ ನಿಲುವನ್ನು ತಿಳಿಸಲಿದೆ. ರೈತರ ಜೊತೆ ಮಾತುಕತೆ ಮೂಲಕ ಸಮಸ್ಯೆ ಬಗೆಹರಿಸುತ್ತೇವೆ ಎಂದು ಹೇಳಿದ್ದರು.
ಕೃಷಿ ಕಾಯ್ದೆ: ನಿಮ್ಮ ಕೆಲಸ ನೀವು ಮಾಡಿ- ನಮ್ಮ ಕೆಲಸ ನಾವು ಮಾಡುತ್ತೇವೆ ಎಂದ ಸುಪ್ರೀಂಕೋರ್ಟ್​

VIDEO: ಯುವಕರೇ ಹುಷಾರ್​! ಈಗಲೇ ಡಾನ್ಸ್​ ಕಲಿತುಬಿಡಿ- ಇಲ್ಲದಿದ್ದರೆ ಕಾದಿದೆ ಅಪಾಯ

ಸಾಲು ಸಾಲು ಪುರುಷರ ಬೆನ್ನಲ್ಲೇ ದೀದಿಗೆ ಶುರುವಾಯ್ತು ಮಹಿಳೆಯರ ಟೆನ್ಷನ್​- ಬೆನ್ನು ತಿರುವಿದ ಸಂಸದೆ​!

ಎದುರಿಗಿದ್ದರೆ ಪಾನೀಪುರಿ ಡಯೆಟ್​ ಯಾರಿಗೆ ಬೇಕ್ರಿ? ನೀಲಿತಾರೆಯ ವಿಡಿಯೋ ವೈರಲ್​

ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
ಭಾರತದಲ್ಲಿ ಬೇಳೆಕಾಳುಗಳು ಜನರು ಬಹುಮುಖ್ಯ ಭಕ್ಷ್ಯವಾಗಿದೆ. ಬೇಳೆಕಾಳುಗಳನ್ನು ವಾರಕ್ಕೊಮ್ಮೆಯಾದರೂ ತಿನ್ನಲಾಗುತ್ತದೆ. ಈ ಬೇಳೆಕಾಳುಗಳು ಪೋಷಕಾಂಶಗಳ ಆಗರವಾಗಿದ್ದು,…
ಬೆಂಗಳೂರು:  ಪಾಲಕರು ಪ್ರತಿ ಮಗುವಿನ ಮೊದಲ ಶಿಕ್ಷಕರು, ಅವರ ರೋಲ್ ಮಾಡೆಲ್. ಮಕ್ಕಳ ನಡವಳಿಕೆಯ ಮೇಲೆ…
Sign in to your account
Please enter an answer in digits:1 × four =
Remember me
