ನವದಹಲಿ:ದೆಹಲಿಯ ರಾಜ್‌ಪಥ್‌ನಲ್ಲಿ ಗಣರಾಜ್ಯೋತ್ಸವದ ಕಾರ್ಯಕ್ರಮ ನಡೆಯುತ್ತಿದ್ದರೆ, ಇತ್ತ ಕೃಷಿ ಕಾಯ್ದೆಗಳನ್ನು ವಿರೋಧಿಸಿ ಟ್ರ್ಯಾಕ್ಟರ್ ರ್‍ಯಾಲಿ ಮೂಲಕ ಪ್ರತಿಭಟನೆಗೆ ಮುಂದಾಗಿರುವ ರೈತರು ಗಡಿಗಳಲ್ಲಿನ ಬ್ಯಾರಿಕೇಡ್‌ ಮುರಿದು ಒಳಗೆ ನುಗ್ಗಲು ಪ್ರಯತ್ನ ಮಾಡುತ್ತಿದ್ದಾರೆ.
ದೆಹಲಿ-ಹರಿಯಾಣ ಟಿಕ್ರಿ ಗಡಿಯಲ್ಲಿ ಪೊಲೀಸ್ ನಿರ್ಮಿಸಿರುವ ಬ್ಯಾರಿಕೇಡ್‌ಗಳನ್ನು ಮುರಿದು ಗಲಾಟೆ ಮಾಡುತ್ತಿದ್ದಾರೆ. ಇಷ್ಟೇ ಅಲ್ಲದೇ ಸಿಂಘು ಗಡಿಯಲ್ಲೂ ಇದೇ ರೀತಿ ಮಾಡುತ್ತಿದ್ದು, ಗಲಾಟೆ ಶುರು ಮಾಡಿದ್ದಾರೆ. ಈ ಗಡಿಗಳಲ್ಲಿ ಪ್ರತಿಭಟನೆ ಮಾಡಲು ರೈತರಿಗೆ ಅವಕಾಶ ಕಲ್ಪಿಸಲಾಗಿದೆ. ಆದರೆ ಒಪ್ಪಂದ ಮುರಿದು ಬ್ಯಾರಿಕೇಡ್‌ ಮುರಿಯುತ್ತಿರುವುದು ವರದಿಯಾಗಿದೆ.
ರೈತರು ಬೆಳಗ್ಗೆ 8 ಗಂಟೆ ಸುಮಾರಿಗೆ ದೆಹಲಿ ಪ್ರವೇಶಿಸಿದ್ದಾರೆ. ಪಂಜಾಬ್‌ನ ಪ್ರತಿ ಹಳ್ಳಿಯಿಂದಲೂ ಟ್ರ್ಯಾಕ್ಟರ್‌ ತಂದಿರುವ ರೈತರು ತಂಡೋಪತಂಡವಾಗಿ ನುಗ್ಗುತ್ತಿದ್ದಾರೆ.
#WATCHProtesting farmers break police barricading at Delhi-Haryana Tikri border
Farmers are holding tractor rally today in protest against Centre's three Farm Laws#RepublicDaypic.twitter.com/3tI7uKSSRM
— ANI (@ANI)January 26, 2021

ಪ್ರತಿಭಟನೆ ನಡೆಸಲು ಅವರಿಗೆ ಅನುಮತಿ ನೀಡಲಾಗಿದ್ದು, ಪೊಲೀಸರು 37 ಷರತ್ತುಗಳನ್ನು ವಿಧಿಸಿದ್ದರು. ಸಿಂಗು, ಟಿಕ್ರಿ, ಗಾಜಿಪುರ ಮತ್ತು ಚಿಲ್ಲಾ ನಾಲ್ಕು ಗಡಿಗಳಲ್ಲಿ ಪ್ರತಿಭಟನೆಗೆ ತೊಡಗುವುದಿದ್ದರೆ ಈ ನಿಯಮಗಳನ್ನು ಪಾಲನೆ ಮಾಡಬೇಕು ಎಂದು ಹೇಳಲಾಗಿತ್ತು.
ಆದರೆ ಎಲ್ಲವನ್ನೂ ರೈತರು ಕಡೆಗಣಿಸಿದ್ದಾರೆ. ಇದರಿಂದಾಗಿ ರೈತರು ಮತ್ತು ಪೊಲಿಸರ ನಡುವೆ ತಿಕ್ಕಾಟ ಏರ್ಪಟ್ಟಿದೆ.ಸುಮಾರು 6,000 ಭದ್ರತಾ ಸಿಬ್ಬಂದಿಯನ್ನು ಭದ್ರತೆಗಾಗಿ ನಿಯೋಜಿಸಲಾಗಿದೆ. ಸಮಸ್ಯೆ ಉಂಟು ಮಾಡುವವರನ್ನು ಗುರುತಿಸಲು ಮುಖ ಗುರುತಿಸುವ ವ್ಯವಸ್ಥೆಯನ್ನೂ ಮಾಡಲಾಗಿದೆ.
ಇತಿಹಾಸದಲ್ಲಿಯೇ ಮೊದಲ ಬಾರಿಗೆ ಪ್ರತಿಭಟನಾ‌ ಪರೇಡ್‌: ಪ್ರತಿ ಹಳ್ಳಿಯಿಂದಲೂ ಟ್ರ್ಯಾಕ್ಟರ್‌

ಬಿಗಿ ಬಂದೋಬಸ್ತ್‌ ನಡುವೆ ಇಂದು ಗಣರಾಜ್ಯೋತ್ಸವ- ಶುಭ ಕೋರಿದ ರಾಷ್ಟ್ರಪತಿ, ಪ್ರಧಾನಿ

ರಾಹುಲ್‌ಗಾಂಧಿ ಬಾಯಲ್ಲಿ ‘ನಿಕ್ಕರ್‌ವಾಲಾ’… ಟ್ರಾನ್ಸ್‌ಲೇಟರ್‌ ಬಾಯಲ್ಲಿ ‘ಲಿಕ್ಕರ್‌ವಾಲಾ’ ಆದಾಗ…

ಕ
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
ಭಾರತದಲ್ಲಿ ಬೇಳೆಕಾಳುಗಳು ಜನರು ಬಹುಮುಖ್ಯ ಭಕ್ಷ್ಯವಾಗಿದೆ. ಬೇಳೆಕಾಳುಗಳನ್ನು ವಾರಕ್ಕೊಮ್ಮೆಯಾದರೂ ತಿನ್ನಲಾಗುತ್ತದೆ. ಈ ಬೇಳೆಕಾಳುಗಳು ಪೋಷಕಾಂಶಗಳ ಆಗರವಾಗಿದ್ದು,…
ಬೆಂಗಳೂರು:  ಪಾಲಕರು ಪ್ರತಿ ಮಗುವಿನ ಮೊದಲ ಶಿಕ್ಷಕರು, ಅವರ ರೋಲ್ ಮಾಡೆಲ್. ಮಕ್ಕಳ ನಡವಳಿಕೆಯ ಮೇಲೆ…
Sign in to your account
Please enter an answer in digits:8 − 2 =
Remember me
