ಮುಂಬೈ:ಕರೊನಾ ನಿಯಮಗಳನ್ನು ಉಲ್ಲಂಘಿಸುತ್ತಿರುವ ಬಾಲಿವುಡ್ ನಟಿ ಆಲಿಯಾ ಭಟ್ ವಿರುದ್ಧ ಬೃಹನ್‍ಮುಂಬೈ ಮುನ್ಸಿಪಲ್ ಕಾರ್ಪೊರೇಷನ್ (ಬಿಎಂಸಿ) ಎಫ್‍ಐಆರ್ ದಾಖಲಿಸಲು ತಯಾರಿ ನಡೆಸಿದೆ.
ಕರೊನಾ ವೈರಸ್‌ಗೆ ತುತ್ತಾಗಿದ್ದರೂ ಆಲಿಯಾ ಜನರ ಜತೆಸಂಪರ್ಕ ಹೊಂದುತ್ತಿದ್ದಾರೆ. ಅವರಿಗೆ ಕ್ವಾರಂಟೈನ್‌ನಲ್ಲಿ ಇರುವಂತೆ ಸೂಚಿಸಲಾಗಿದ್ದರೂ, ಅದನ್ನು ಪಾಲನೆ ಮಾಡುತ್ತಿಲ್ಲ. ಈ ಹಿನ್ನೆಲೆಯಲ್ಲಿ ಅವರ ವಿರುದ್ಧ ಕೇಸ್‌ ದಾಖಲಿಸಲು ಅಧಿಕಾರಿಗಳು ಮುಂದಾಗಿದ್ದಾರೆ.
ಶೀಘ್ರದಲ್ಲಿ ಬಿಡುಗಡೆಯಾಗಲಿರುವ ‘ಬ್ರಹ್ಮಾಸ್ತ್ರ’ ಸಿನಿಮಾದ ಪ್ರಮೋಷನ್ ಮತ್ತು ಪೋಸ್ಟರ್ ಬಿಡುಗಡೆಗಾಗಿ ಇತ್ತೀಚೆಗೆ ದೆಹಲಿಗೆ ಭೇಟಿ ನೀಡಿದ್ದರು. ಈ ವೇಳೆ ಬಿಎಂಸಿ ಆಲಿಯಾ ಅವರನ್ನು ಸಂಪರ್ಕಿಸಿ ದೆಹಲಿಯಲ್ಲೇ ಕ್ವಾರಂಟೈನ್ ಆಗುವಂತೆ ಸೂಚಿಸಿತ್ತು. ಆದರೆ ಸೂಚನೆಯನ್ನು ಧಿಕ್ಕರಿಸಿ ಈಗಲೂ ಕಾರ್ಯಕ್ರಮದಲ್ಲಿ ಭಾಗವಹಿಸುತ್ತಿರುವ ಹಿನ್ನೆಲೆಯಲ್ಲಿ ಕಠಿಣ ಕ್ರಮ ಕೈಗೊಳ್ಳಲು ಮುಂದಾಗಿದೆ.
ಈ ಕುರಿತು ಬಿಎಂಸಿ ಆರೋಗ್ಯ ಸಮಿತಿಯ ಅಧ್ಯಕ್ಷ ರಾಜುಲ್ ಪಟೇಲ್ ಮಾಹಿತಿ ನೀಡಿದ್ದಾರೆ. ಹೋಮ್ ಐಸೋಲೇಶನ್ ನಿಯಮಗಳನ್ನು ಉಲ್ಲಂಘಿಸಿದ್ದಕ್ಕಾಗಿ ಆಲಿಯಾ ಭಟ್ ವಿರುದ್ಧ ಎಫ್‍ಐಆರ್ ದಾಖಲಿಸಲು ಸಾರ್ವಜನಿಕ ಆರೋಗ್ಯ ಇಲಾಖೆಯ ಉಪ ಮುನ್ಸಿಪಲ್ ಕಮಿಷನರ್ ಅವರಿಗೆ ನಾನು ಆದೇಶಿಸಿದ್ದೇನೆ. ನಟ-ನಟಿಯರನ್ನು ಅನುಕರಿಸುವವರು ಹಲವು ಮಂದಿ. ಅನೇಕರು ಇವರನ್ನೇ ಆದರ್ಶವಾಗಿಟ್ಟುಕೊಳ್ಳುತ್ತಾರೆ. ಇಂಥವರು ಜವಾಬ್ದಾರಿಯಿಂದ ವರ್ತಿಸಬೇಕು.ಅದನ್ನು ಬಿಟ್ಟು ಈ ರೀತಿ ನಡೆದುಕೊಳ್ಳುವುದು ಸರಿಯಲ್ಲ ಎಂದಿದ್ದಾರೆಪಟೇಲ್‌.
‘ಬ್ರಹ್ಮಾಸ್ತ್ರ’ ಚಿತ್ರದಲ್ಲಿ ಅಮಿತಾಭ್‌ ಬಚ್ಚನ್, ಮೌನಿ ರಾಯ್ ಮತ್ತು ನಾಗಾರ್ಜುನ ಅಕ್ಕಿನೇನಿ ಕೂಡ ನಟಿಸಿದ್ದು, ಈ ಸಿನಿಮಾ 2020ರ ಸೆಪ್ಟೆಂಬರ್‌ನಲ್ಲಿ ಬಿಡುಗಡೆಯಾಗಲಿದೆ.
ಬಿಳಿ ಕೂದಲಿನಲ್ಲಿಯೇ ಮದುವೆಯಾದ ನಟನ ಮಗಳು: ಸಹಜ ಸೌಂದರ್ಯಕ್ಕೆ ಮನಸೋತ ನೆಟ್ಟಿಗರು

ಸುಖ ಬೇಕಾದ್ರೆ ಬಾಯ್‌ಫ್ರೆಂಡ್‌ ಮಾಡ್ಕೋ, ನನ್‌ ತಂಟೆಗೆ ಬರ್ಬೇಡಾ ಅನ್ನೋ ಗಂಡನ ಜತೆ ಹೇಗೆ ಬಾಳಲಿ ಮೇಡಂ?

ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:five + one =
Remember me
