ಚೆನ್ನೈ:ದೀಪಾವಳಿ ಹಬ್ಬ ಎಂದರೆ ಎಲ್ಲೆಡೆ ಪಟಾಕಿಗಳ ಸಂಭ್ರಮ. ಪಟಾಕಿ ಹೊಡೆದು ದೀಪಾವಳಿಯನ್ನು ಸಂಭ್ರಮಿಸುವ ಸಲುವಾಗಿ ಪಟಾಕಿ ಖರೀದಿಗೆ ಹೋದ ಐವರು ಪಟಾಕಿ ಅಂಗಡಿಯಲ್ಲಿಯೇ ಸಜೀವವಾಗಿ ದಹಿಸಿಹೋದ ದಾರುಣ ಘಟನೆ ತಮಿಳುನಾಡಿನ ಕಲ್ಲಕುರುಚಿ ಜಿಲ್ಲೆಯ ಶಂಕರಪುರದಲ್ಲಿ ನಡೆದಿದೆ.ಘಟನೆಯಲ್ಲಿ 10ಕ್ಕೂ ಹೆಚ್ಚು ಮಂದಿ ಗಾಯಗೊಂಡಿದ್ದು ಕೆಲವರ ಸ್ಥಿತಿ ಚಿಂತಾಜನವಾಗಿದೆ. ಪಟಾಕಿ ಖರೀದಿಗೆ ಈ ಅಂಗಡಿಯಲ್ಲಿ ಭಾರಿ ಸಂಖ್ಯೆಯಲ್ಲಿ ಜನರು ಸೇರಿದ್ದರು. ಇದ್ದಕ್ಕಿದ್ದಂತೆಯೇ ಬೆಂಕಿ ಸ್ಫೋಟಗೊಂಡಿದೆ. ಏನಾಯಿತು ಎಂದು ನೋಡುವಷ್ಟರಲ್ಲಿಯೇ ಬೆಂಕಿ ಕೆನ್ನಾಲಿಗೆ ಚಾಚಿ ಅಕ್ಕಪಕ್ಕದ ಅಂಗಡಿಗೂ ಹೊತ್ತಿಕೊಂಡಿದೆ. ಅಂಗಡಿಯಲ್ಲಿ ಇರಿಸಿದ್ದ ಸಿಲಿಂಡರ್ ಕೂಡ ಸ್ಫೋಟಗೊಂಡಿದ್ದರಿಂದ ಹೆಚ್ಚಿನ ಅನಾಹುತವಾಗಿದೆ.ಕೂಡಲೇ ಅಗ್ನಿಶಾಮಕದಳದ ಸಿಬ್ಬಂದಿ ಬಂದರೂ ಐವರು ಅದಾಗಲೇ ಮೃತಪಟ್ಟಿದ್ದರು. ರಕ್ಷಣಾ ಕಾರ್ಯಾಚರಣೆ ನಡೆಸಿ, ಕೆಲವರನ್ನು ರಕ್ಷಿಸಲಾಗಿದ್ದು, ಗಾಯಾಳುಗಳನ್ನು ಆಸ್ಪತ್ರೆಗೆ ಸಾಗಿಸಲಾಗಿದೆ.
ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:seventeen − eight =
Remember me
