ಭೋಪಾಲ್:ಆಸ್ಪತ್ರೆಯ ನವಜಾತ ಶಿಶು ನಿಗಾ ಘಟಕದಲ್ಲಿ (ಎಸ್​ಎನ್​ಸಿಯು) ಬೆಂಕಿ ಬಿದ್ದ ಹಿನ್ನೆಲೆಯಲ್ಲಿ ನಾಲ್ಕು ನವಜಾತ ಶಿಶುಗಳು ಮೃತಪಟ್ಟಿರುವ ಘಟನೆ ಭೋಪಾಲ್​ನ ಕಮಲಾ ನೆಹರೂ ಮಕ್ಕಳ ಆಸ್ಪತ್ರೆಯಲ್ಲಿ ನಡೆದಿದೆ.
ಐಸಿಯುನ ಮೂರನೆಯ ಮಹಡಿಯಲ್ಲಿ ಶಾರ್ಟ್‌ ಸರ್ಕ್ಯೂಟ್‌ನಿಂದ ಈ ದುರಂತ ಸಂಭವಿಸಿರುವುದಾಗಿ ತಿಳಿದುಬಂದಿದೆ. ಈ ವಾರ್ಡ್‌ನಲ್ಲಿ 40 ಮಕ್ಕಳು ಚಿಕಿತ್ಸೆ ಪಡೆಯುತ್ತಿದ್ದರು. ಘಟನೆಯ ಬಗ್ಗೆ ಮಾಹಿತಿ ಪಡೆದ ಕೂಡಲೇ ರಕ್ಷಣಾ ಕಾರ್ಯ ತ್ವರಿತವಾದ ಹಿನ್ನೆಲೆಯಲ್ಲಿ ಉಳಿದ ಮಕ್ಕಳನ್ನು ಬಚಾವ್‌ ಮಾಡಲಾಗಿದೆ.
ಈ ಘಟನೆ ಕುರಿತು ಉನ್ನತ ಮಟ್ಟದ ತನಿಖೆಗೆ ಮಧ್ಯಪ್ರದೇಶ ಸರ್ಕಾರ ಆದೇಶಿಸಿದೆ. ಈ ದುರಂತದಲ್ಲಿ ಮೃತಪಟ್ಟಿರುವ ನಾಲ್ಕು ಮಕ್ಕಳ ಪೋಷಕರಿಗೆ 4 ಲಕ್ಷ ರೂ ಪರಿಹಾರ ನೀಡುವುದಾಗಿ ಮುಖ್ಯಮಂತ್ರಿ ಶಿವರಾಜ್ ಸಿಂಗ್ ಚೌಹಾಣ್​ ಘೋಷಿಸಿದ್ದಾರೆ.
ರಾತ್ರಿ 9 ಗಂಟೆ ಸುಮಾರಿಗೆ ಬೆಂಕಿ ಕಾಣಿಸಿಕೊಂಡಿದ್ದು, ತಕ್ಷಣ 10 ವಾಹನಗಳೊಂದಿಗೆ ಬೆಂಕಿ ನಂದಿಸಲು ಸ್ಥಳಕ್ಕೆ ಧಾವಿಸಿದೆವು ಎಂದು ಫತೇಘರ್​ ಅಗ್ನಿಶಾಮಕ ಠಾಣೆಯ ಉಸ್ತುವಾರಿ ಜುಬೇರ್ ಖಾನ್ ತಿಳಿಸಿದ್ದಾರೆ.
ಟ್ಯಾಂಕರ್‌ ಪಲ್ಟಿ: ತೈಲ ಸಂಗ್ರಹಿಸಲು ಮುಗಿಬಿದ್ದು ಸಜೀವ ದಹನವಾದ 100ಕ್ಕೂ ಅಧಿಕ ಮಂದಿ!

ಜಾಮೀನಿನ ಮೇಲೆ ಹೊರಬರುತ್ತಿದ್ದಂತೆಯೇ ವರಸೆ ಬದಲಿಸಿದ ಆರ್ಯನ್‌: ವಿಚಾರಣೆಗೆ ಹಾಜರಾಗದೇ ಕೊಟ್ಟನೊಂದು ಕಾರಣ…

ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:one × three =
Remember me
