ಜಕಾರ್ತ:ಇಂಡೋನೇಷ್ಯಾದ ಬಾಂಟೆನ್ ಪ್ರಾಂತ್ಯದ ಜೈಲಿನಲ್ಲಿ ಬೆಂಕಿ ದುರಂತ ಸಂಭವಿಸಿದ್ದು, ಈ ಘಟನೆಯಲ್ಲಿ ಕೈದಿಗಳು ಸೇರಿದಂತೆ ಕನಿಷ್ಠ 41 ಮಂದಿ ಮೃತಪಟ್ಟಿದ್ದು, 40ಕ್ಕೂ ಅಧಿಕ ಮಂದಿಗೆ ಭೀಕರ ಗಾಯಗಳಾಗಿವೆ. ಮೃತಪಟ್ಟವರಲ್ಲಿ ಪೋರ್ಚಗಲ್‌ ಮತ್ತು ದಕ್ಷಿಣ ಆಫ್ರಿಕಾದ ಕೈದಿಗಳೂ ಇದ್ದರು, ಇವರೆಲ್ಲರೂ ಬೆಂಕಿಯಲ್ಲಿ ಸುಟ್ಟು ಕರಕಲಾಗಿದ್ದಾರೆ ಎನ್ನಲಾಗಿದೆ.ರಾಜಧಾನಿ ಜಕಾರ್ತಾದ ಹೊರಗಿರುವ ಟಾಂಗರಾಂಗ್ ಪೆನಿಟರಿಯಲ್ಲಿ ಮುಂಜಾನೆ ಈ ಘಟನೆ ಸಂಭವಿಸಿದೆ. ಮಾದಕ ದ್ರವ್ಯ ಅಪರಾಧಿಗಳಿಗಾಗಿ ಇರುವ ಜೈಲು ಇದಾಗಿದೆ. ಜೈಲಿನ ಬ್ಲಾಕ್ ಸಿ ಯಲ್ಲಿ ಈ ದುರಂತ ಸಂಭವಿಸಿದೆ ಎಂದು ಕಾನೂನು ಮತ್ತು ಮಾನವ ಹಕ್ಕುಗಳ ಸಚಿವಾಲಯದ ಜೈಲು ಇಲಾಖೆಯ ವಕ್ತಾರ ರಿಕಾ ಅಪ್ರಿಯಂತಿ ಮಾಹಿತಿ ನೀಡಿದ್ದಾರೆ.1,225 ಕೈದಿಗಳನ್ನು ಇಡುವಷ್ಟು ಸಾಮರ್ಥ್ಯವಿರುವ ಈ ಜೈಲಿನಲ್ಲಿ 2 ಸಾವಿರಕ್ಕೂ ಅಧಿಕ ಕೈದಿಗಳನ್ನು ಇಡಲಾಗಿದೆ ಎಂದು ಆರೋಪಿಸಲಾಗಿದೆ. ಬೆಂಕಿ ಅವಘಡ ಸಂಭವಿಸಿದ್ದ ಸಿ ಬ್ಲಾಕ್‌ನಲ್ಲಿ 122 ಅಪರಾಧಿಗಳಿದ್ದರು. ಇವರ ಪೈಕಿ ಹೆಚ್ಚಿನವರು ಅಗ್ನಿಗೆ ಬಲಿಯಾಗಿದ್ದಾರೆ. ಬೆಂಕಿ ನಿಯಂತ್ರಿಸಲು ನೂರಾರು ಪೋಲಿಸರು ಮತ್ತು ಸೈನಿಕರನ್ನು ನಿಯೋಜಿಸಲಾಗಿದೆ ಎಂದು ರಿಕಾ ವಿವರಿಸಿದ್ದಾರೆ.ಇಂಡೋನೇಷ್ಯಾದಲ್ಲಿ ಗಲಭೆಗಳು ಸಾಮಾನ್ಯವಾಗಿದ್ದು, ಕಡಿಮೆ ವ್ಯವಸ್ಥೆಗಳಿರುವ ಜೈಲಿನಲ್ಲಿ ಅತಿಯಾದ ಕೈದಿಗಳಿರುವುದು ಸಮಸ್ಯೆಯಾಗಿದೆ ಎನ್ನಲಾಗಿದ್ದು, ಅಗ್ನಿ ದುರಂತಕ್ಕೆ ಸ್ಪಷ್ಟ ಕಾರಣ ಇದುವರೆಗೆ ಸಿಕ್ಕಿಲ್ಲ. ಈ ಬಗ್ಗೆ ತನಿಖೆ ನಡೆಯುತ್ತಿದೆ. ಷಾರ್ಟ್‌ ಸರ್ಕೀಟ್‌ನಿಂದ ಇದು ಸಂಭವಿಸಿರಬಹುದು ಎನ್ನಲಾಗುತ್ತಿದ್ದರೂ ನಿಖರ ಕಾರಣ ತಿಳಿಯಬೇಕಿದೆಯಷ್ಟೇ.
VIDEO: ಮೊಟ್ಟೆಯ ಬದಲು ಊಸರವಳ್ಳಿಗೆ ಹುಟ್ಟಿತು ಮರಿ- ಕುತೂಹಲದ ವಿಡಿಯೋ ವೈರಲ್‌
ಬ್ರಾಹ್ಮಣರನ್ನು ಬಹಿಷ್ಕರಿಸಿ ಎಂದ ಸಿಎಂ ತಂದೆ ಅರೆಸ್ಟ್‌: ಅಪ್ಪನನ್ನು ಬಂಧಿಸಿದ್ದು ಸರಿ ಎಂದ ಮಗ!
ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:20 + 2 =
Remember me
