ಶ್ರೀನಗರ:ಶ್ರೀನಗರದ ಉಧಂಪುರ್ ಜಿಲ್ಲೆಯ ಬಟಾಲ್ ಬಲಿಯನ್ ಇರುವ ರಾಸಾಯಿಕ ಕಾರ್ಖಾನೆಯೊಂದು ಮಧ್ಯರಾತ್ರಿ ಧಗ ಧಗ ಹೊತ್ತಿ ಉರಿದಿರುವ ಘಟನೆ ನಡೆದಿದೆ.ಧನುಕಾ ಅಗ್ರಿಟೆಕ್ ಲಿಮಿಟೆಡ್ ಕಾರ್ಖಾನೆಯಲ್ಲಿ ಈ ಅವಘಡ ಸಂಭವಿಸಿದೆ. ಷಾರ್ಟ್‌ ಸರ್ಕೀಟ್‌ನಿಂದಾಗಿ ಈ ಅವಘಡ ಸಂಭವಿಸಿರುವ ಸಾಧ್ಯತೆ ಇದ್ದು, ಅದೃಷ್ಟವಶಾತ್‌ ಯಾವುದೇ ಪ್ರಾಣಹಾನಿಯಾಗಿಲ್ಲ ಎಂದು ಮೂಲಗಳು ಹೇಳಿವೆ.
ಬೆಂಕಿಯ ಕೆನ್ನಾಲಿಗೆ ಬಹುದೂರದವರೆಗೆ ಕಂಡುಬಂದಿದೆ. ಮಧ್ಯರಾತ್ರಿ ಸುಮಾರು 12.30 ಸುಮಾರಿಗೆ ಬೆಂಕಿ ಕಾಣಿಸಿಕೊಂಡಿದೆ. ತಕ್ಷಣ ಬೆಂಕಿ ನಂದಿಸಲು ಅಗ್ನಿಶಾಮಕ ದಳ ಆಗಮಿಸಿದೆ. ಅಷ್ಟು ಹೊತ್ತಿಗಾಗಲೇ ಕಾರ್ಖಾನೆಯ ತುಂಬೆಲ್ಲಾ ಬೆಂಕಿ ಹರಡಿಕೊಂಡಿದೆ. ಎಂಟು ಅಗ್ನಿಶಾಮಕ ದಳದ ವಾಹನಗಳು ಕಾರ್ಯಾಚರಣೆ ಮಾಡುತ್ತಿದೆ. ಇಷ್ಟಾದರೂ ಬೆಂಕಿ ನಂದಿಸಲು ಕಷ್ಟವಾಯಿತು. ಇದೇ ಕಾರಣಕ್ಕೆ ವಾಯುಪಡೆಯಿಂದ ಬೆಂಕಿ ನಂದಿಸುವ ಕ್ರಮ ತೆಗೆದುಕೊಳ್ಳಲಾಗಿದೆ.
ಈ ಕುರಿತು ಸ್ಥಳೀಯ ಮಾಧ್ಯಮಗಳೊಂದಿಗೆ ಪ್ರತಿಕ್ರಿಯಿಸಿರುವ ಅಗ್ನಿಶಾಮಕ ದಳದ ಅಧಿಕಾರಿ, ಕೈಗಾರಿಕಾ ಪ್ರದೇಶದಲ್ಲಿ ಕಾಣಿಸಿಕೊಂಡ ಬೆಂಕಿ ನಂದಿಸುವ ಕಾರ್ಯದಲ್ಲಿ ತೊಡಗಿಕೊಂಡಿದ್ದೇವೆ. ನಾವು ಬೆಂಕಿ ನಂದಿಸಲು ಪ್ರಯತ್ನ ಪಡುತ್ತಿದ್ದರು ಕೂಡ ಸಾಧ್ಯವಾಗುತ್ತಿಲ್ಲ ಎಂದಿದ್ದಾರೆ. ಕಾರ್ಖಾನೆ ಮತ್ತು ಸ್ಥಳದಲ್ಲಿದ್ದ ವಾಹನಗಳು ಪೂರ್ತಿ ಸುಟ್ಟು ಕರಕಲಾಗಿದೆ.
ಬೆಂಕಿ ಅವಘಡದ ವಿಡಿಯೋ ಇಲ್ಲಿದೆ: ಕೃಪೆಜಮ್ಮು ಲಿಂಕ್ಸ್‌ ನ್ಯೂಸ್‌

ಪೋಷಕರು ಬದುಕಿರಲಿ, ಇಲ್ಲದಿರಲಿ… ಸಾಕು ಮಗಳಿಗೆ ಆಸ್ತಿಯಲ್ಲಿ ಪಾಲು ಸಿಗುವುದಿಲ್ಲ- ಕಾನೂನು ಏನಿದೆ ನೋಡಿ…

ಅವರಪ್ಪನಿಂದಲೂ ಬಂಧಿಸಲು ಸಾಧ್ಯವಿಲ್ಲ- ‘ಮೂರ್ಖರ ವಿಜ್ಞಾನ’ದ ಪ್ರತಿಭಟನೆಗೆ ಬಾಬಾ ರಾಮ್‌ದೇವ್‌ ಪ್ರತಿಕ್ರಿಯೆ

ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:14 − three =
Remember me
