ಆಸ್ಟ್ರೇಲಿಯಾ:ಕ್ರಿಕೆಟ್‌ ಲೋಕದ ದಂತಥೆ ಎಂದೇ ಬಿಂಬಿತವಾಗಿದ್ದ ಆಸ್ಟ್ರೇಲಿಯಾದ ಮಾಜಿ ಕ್ರಿಕೆಟ್ ಆಟಗಾರ ಆಂಡ್ರ್ಯೋ ಸೈಮಂಡ್ಸ್ ಕಾರು ಅಪಘಾತದಲ್ಲಿ ಮೃತಪಟ್ಟಿದ್ದಾರೆ. ಇವರಿಗೆ 46 ವರ್ಷ ವಯಸ್ಸಾಗಿತ್ತು. ಆಸ್ಟ್ರೇಲಿಯಾದ ಕ್ವೀನ್ಸ್‌ಲ್ಯಾಂಡ್‌ನ ಟೌನ್ಸ್‌ವಿಲ್ಲೆ ಬಳಿ ಈ ಅಪಘಾತ ನಡೆದಿದೆ.
ಆಸ್ಟ್ರೇಲಿಯಾ ಕ್ರಿಕೆಟ್ ಕಂಡ ಶ್ರೇಷ್ಠ ಆಲ್‌ರೌಂಡರ್‌ಗಳಲ್ಲಿ ಒಬ್ಬರಾಗಿದ್ದ ಸೈಮಂಡ್ಸ್ 26 ಟೆಸ್ಟ್, 198 ಏಕದಿನ ಹಾಗೂ 14 ಟಿ20 ಪಂದ್ಯಗಳಲ್ಲಿ ರಾಷ್ಟ್ರೀಯ ತಂಡವನ್ನು ಪ್ರತಿನಿಧಿಸಿದ್ದಾರೆ. ಕ್ವೀನ್ಸ್‌ಲ್ಯಾಂಡ್ ಪೊಲೀಸರು ಶನಿವಾರ ಸಂಜೆ ನಗರದಿಂದ ಸುಮಾರು 50 ಕಿಲೋಮೀಟರ್ ದೂರದಲ್ಲಿರುವ ಹರ್ವೆ ರೇಂಜ್‌ನಲ್ಲಿ ಅಪಘಾತದ ಬಗ್ಗೆ ತನಿಖೆ ನಡೆಸಲಾಗುತ್ತಿದೆ ಎಂದು ದೃಢಪಡಿಸಿದ್ದಾರೆ.
ಆಸ್ಟ್ರೇಲಿಯಾ ಕ್ರಿಕೆಟ್‌ ತಂಡದ ದಂತಕಥೆ ಎನ್ನಿಸಿದ್ದ ರಾಡ್ ಮಾರ್ಷ್ ಮತ್ತು ಶೇನ್ ವಾರ್ನ್ ಇಬ್ಬರೂ ಶಂಕಿತ ಹೃದಯಾಘಾತದಿಂದ ಮೃತಪಟ್ಟಿದ್ದರು. ಇದೀಗ ಮೂರನೆಯ ಬಾರಿಗೆ ಕ್ರೀಡಾ ಲೋಕಕ್ಕೆ ದೊಡ್ಡ ಆಘಾತವಾಗಿದೆ. ಸೈಮಂಡ್ಸ್ ನಿಧನದ ನಂತರ ಕ್ರಿಕೆಟ್ ಲೋಕ ಹಾಗೂ ಅವರ ಕೋಟ್ಯಂತರ ಅಭಿಮಾನಿಗಳಲ್ಲಿ ಶೋಕದ ಅಲೆ ಎದ್ದಿದೆ.
ಡಾ.ರಾಜ್‌ ಕುಟುಂಬಕ್ಕೆ ಇನ್ನೊಂದು ಆಘಾತ: ಪಾರ್ವತಮ್ಮ ಸಹೋದರಿ ನಾಗಮ್ಮ ಇನ್ನಿಲ್ಲ

ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:14 + 18 =
Remember me
