ಸತನಾ (ಮಧ್ಯಪ್ರದೇಶ):ಭೀಕರ ಅಪಘಾತವೊಂದರಲ್ಲಿ ಇಡೀ ಕುಟುಂಬವೇ ಸರ್ವನಾಶವಾಗಿರುವ ಭಯಾನಕ ಘಟನೆಯೊಂದು ಮಧ್ಯಪ್ರದೇಶದ ಸತನಾದಲ್ಲಿ ನಡೆದಿದೆ. ಈ ಅಪಘಾತದಲ್ಲಿ ಅಪ್ಪ-ಅಮ್ಮ ಸೇರಿ ಇಬ್ಬರು ಕಂದಮ್ಮಗಳೂ ಬಲಿಯಾಗಿದ್ದು, ಇಡೀ ಕುಟುಂಬಕ್ಕೆ ಕುಟುಂಬವೇ ಬಲಿಯಾಗಿದೆ.
ಸತ್ಯಂ ಉಪಾಧ್ಯಾಯ ಕುಟುಂಬ ಇಂಥದ್ದೊಂದು ದುರಂತ ಅಂತ್ಯ ಕಂಡಿದೆ. ಕಾರಿನಲ್ಲಿ ಈ ಕುಟುಂಬದ ಸದಸ್ಯರು ಷಾಪಿಂಗ್‌ಗೆ ಹೋಗಿದ್ದರು. ಕಾರಿನಲ್ಲಿ ಅದರಲ್ಲಿ ಸತ್ಯ (40), ಅವರ ಪತ್ನಿ ಮೋನಿಕಾ (36), ಮಕ್ಕಳಾದ ಇಶಾನಿ (10) ಹಾಗೂ ಸ್ನೇಹಾ (8) ಇದ್ದರು. ಷಾಪಿಂಗ್‌ ಮುಗಿಸಿ ಮನೆಗೆ ವಾಪಸಾಗುವ ಸಂದರ್ಭದಲ್ಲಿ ಯಮನಾಗಿ ಬಂದ ಟ್ರಕ್​ ಕಾರಿಗೆ ಡಿಕ್ಕಿ ಹೊಡೆದಿದೆ.
ಈ ರಭಸಕ್ಕೆ ಕಾರು ಸಂಪೂರ್ಣವಾಗಿ ನಜ್ಜುಗುಜ್ಜಾಗಿದ್ದು, ನಾಲ್ವರೂ ಸ್ಥಳದಲ್ಲಿಯೇ ಮೃತಪಟ್ಟಿದ್ದಾರೆ. ಕೇಸನ್ನು ದಾಖಲಿಸಿಕೊಂಡಿರುವ ಪೊಲೀಸರು ತನಿಖೆ ನಡೆಸುತ್ತಿದ್ದಾರೆ.
ಇನ್ನು ಈ ದುರ್ಘಟನೆಗೆ ಮಧ್ಯಪ್ರದೇಶದ ಮುಖ್ಯಮಂತ್ರಿ ಶಿವರಾಜ್ ಸಿಂಗ್​ ಚೌಹಾಣ್​ ಟ್ವೀಟ್‌ ಮಾಡಿದ್ದು, ಶ್ರದ್ಧಾಂಜಲಿ ಸಲ್ಲಿಸಿದ್ದಾರೆ. ‘ಈ ಅಪಘಾತದ ಸುದ್ದಿ ಕೇಳಿ ತುಂಬಾ ಆಘಾತವಾಗಿದ್ದು, ಮೃತಪಟ್ಟವರ ಆತ್ಮಕ್ಕೆ ಶಾಂತಿ ಸಿಗಲಿ. ಕುಟುಂಬಸ್ಥರಿಗೆ ಭಗವಂತ ಈ ನೋವು ಭರಿಸುವ ಶಕ್ತಿ ನೀಡಲಿ’ ಎಂದು ಪ್ರಾರ್ಥಿಸಿದ್ದಾರೆ.
ಮೈಸೂರಿನ ಆಸ್ತಿ ಅರಸರದ್ದೇ: ಸರ್ಕಾರಕ್ಕೆ ಸುಪ್ರೀಂನಲ್ಲಿ ಭಾರಿ ಹಿನ್ನಡೆ- ಜಿಲ್ಲಾಡಳಿತಕ್ಕೂ ಎದುರಾಗಿದೆ ದೊಡ್ಡ ಸಂಕಷ್ಟ!

VIDEO: ಸೆಲ್ಫಿ ಕೇಳುವ ನೆಪದಲ್ಲಿ ನಟಿ ಕವಿತಾ ಗೌಡ ಕಿಡ್ನಾಪ್‌! ಸಿಸಿಟಿವಿಯಲ್ಲಿ ಭಯಾನಕ ದೃಶ್ಯ; ಅಪಹರಣದ ರಹಸ್ಯ ಬಯಲು

ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:four × two =
Remember me
