ಮುಂಬೈ:ಶಿಥಿಲಾವಸ್ಥೆಯಲ್ಲಿ ಇದ್ದ ನಾಲ್ಕು ಅಂತಸ್ತುಗಳ ಕಟ್ಟಡವೊಂದು ಕುಸಿದು ಬಿದ್ದು ಜನರಲ್ಲಿ ಆತಂಕ ಸೃಷ್ಟಿಸಿರುವ ಘಟನೆ ಮುಂಬೈನಲ್ಲಿ ನಡೆದಿದೆ.
ಮುಂಬೈನ ಪಶ್ಚಿಮ ಬೊರಿವಲಿಯಲ್ಲಿರುವ ಸಾಯಿಬಾಬಾ ನಗರದಲ್ಲಿ ಇರುವ ಕಟ್ಟಡದಲ್ಲಿ ಈ ದುರಂತ ಸಂಭವಿಸಿದೆ. ಕಟ್ಟಡದ ಅವಶೇಷಗಳ ಅಡಿ ಹಲವರು ಸಿಲುಕಿಕೊಂಡಿರುವ ಶಂಕೆ ವ್ಯಕ್ತವಾಗಿದ್ದು, ಇಲ್ಲಿಯವರೆಗೆ ಯಾವುದೇ ಪ್ರಾಣಹಾನಿ, ಗಾಯಗಳಾಗಿರುವ ಬಗ್ಗೆ ವರದಿ ಆಗಿಲ್ಲ.
ಕಟ್ಟಡ ಕುಸಿತದ ವಿಷಯ ತಿಳಿಯುತ್ತಲೇ ಅಗ್ನಿಶಾಮಕ ದಳ ಸ್ಥಳಕ್ಕೆ ಆಗಮಿಸಿದೆ. ಶಿಥಿಲಗೊಂಡಿದ್ದ ಈ ಕಟ್ಟಡ ಬೀಳುವ ಹಂತದಲ್ಲಿದ್ದ ಹಿನ್ನೆಲೆಯಲ್ಲಿ ಜನರನ್ನು ಖಾಲಿ ಮಾಡಲಾಗಿತ್ತು ಎಂದು ಹೇಳಲಾಗುತ್ತಿದೆ. ಈ ಬಗ್ಗೆ ಇನ್ನಷ್ಟೇ ನಿಖರ ಮಾಹಿತಿ ಬರಬೇಕಿದೆ. ಅಗ್ನಿಶಾಮಕದಳದ ವಾಹನ ಹಾಗೂ ಆ್ಯಂಬುಲೆನ್ಸ್ ಘಟನಾ ಸ್ಥಳದಲ್ಲಿವೆ. ಹೆಚ್ಚಿನ ಮಾಹಿತಿ ನಿರೀಕ್ಷಿಸಲಾಗುತ್ತಿದೆ.(ಏಜೆನ್ಸೀಸ್​​)
ಕಟ್ಟಡ ಕುಸಿತದ ವಿಡಿಯೋ ಸಿಸಿಟಿವಿಯಲ್ಲಿ ದಾಖಲಾಗಿದ್ದು, ಅದರ ದೃಶ್ಯ ಇಲ್ಲಿದೆ:
Four story Geetanjali building located at Saibaba Nagar, Borivali collapsed a while ago, rescue operation is underway.@mid_day@patel_bhupen@MumbaiPolice@MCGM_BMCpic.twitter.com/rtcJL5LsuH— Sachin Gaad (@GaadSachin)August 19, 2022
Four story Geetanjali building located at Saibaba Nagar, Borivali collapsed a while ago, rescue operation is underway.@mid_day@patel_bhupen@MumbaiPolice@MCGM_BMCpic.twitter.com/rtcJL5LsuH
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
ಭಾರತದಲ್ಲಿ ಬೇಳೆಕಾಳುಗಳು ಜನರು ಬಹುಮುಖ್ಯ ಭಕ್ಷ್ಯವಾಗಿದೆ. ಬೇಳೆಕಾಳುಗಳನ್ನು ವಾರಕ್ಕೊಮ್ಮೆಯಾದರೂ ತಿನ್ನಲಾಗುತ್ತದೆ. ಈ ಬೇಳೆಕಾಳುಗಳು ಪೋಷಕಾಂಶಗಳ ಆಗರವಾಗಿದ್ದು,…
ಬೆಂಗಳೂರು:  ಪಾಲಕರು ಪ್ರತಿ ಮಗುವಿನ ಮೊದಲ ಶಿಕ್ಷಕರು, ಅವರ ರೋಲ್ ಮಾಡೆಲ್. ಮಕ್ಕಳ ನಡವಳಿಕೆಯ ಮೇಲೆ…
Sign in to your account
Please enter an answer in digits:16 + one =
Remember me
