ಗುರುಗ್ರಾಮ (ನವದೆಹಲಿ):ಸೆಲ್ಫಿ ಹುಚ್ಚು ಅದೆಷ್ಟೋ ಮಂದಿಯ ಪ್ರಾಣ ಕಳೆದಿರುವುದು ಉಂಟು. ಸೆಲ್ಫಿ ತೆಗೆದು ಅದನ್ನು ಸಾಮಾಜಿಕ ಜಾಲತಾಣದಲ್ಲಿ ಶೇರ್‌ ಮಾಡಿ ಹೆಚ್ಚೆಚ್ಚು ಲೈಕ್ಸ್‌ ಪಡೆಯುವ ಹುಚ್ಚಾಟದಲ್ಲಿ ಪ್ರಾಣಕ್ಕೇ ಕುತ್ತು ತಂದುಕೊಳ್ಳುತ್ತಿರುವವರಿಗೆ ಲೆಕ್ಕವೇ ಇಲ್ಲ.
ಈಗ ಅಂಥದ್ದೇ ಒಂದು ದುರ್ಘಟನೆ ದೆಹಲಿಯ ಗುರುಗ್ರಾಮದಲ್ಲಿ ನಡೆದಿದೆ. ರೈಲು ಹಳಿಗಳ ಮೇಲೆ ಸೆಲ್ಫಿ ತೆಗೆದು ದುಸ್ಸಾಹಸ ಮಾಡುತ್ತಿದ್ದ ವೇಳೆ ಈ ಅವಘಡ ಸಂಭವಿಸಿದೆ.
ದೂರದಿಂದ ರೈಲು ಬರುತ್ತಿರುವಾಗ ರೈಲು ಬರುವುದು ಕಾಣಿಸುವ ಜತೆಗೆ ಸೆಲ್ಫಿ ತೆಗೆದರೆ ಚೆನ್ನಾಗಿ ಬರುತ್ತದೆ ಎಂದು ಹಳಿಯ ಮೇಲೆ ನಿಂತಿದ್ದ ನಾಲ್ವರು ಯುವಕರು ತಮ್ಮ ಪ್ರಾಣ ಕಳೆದುಕೊಂಡಿದ್ದಾರೆ. ದೆಹಲಿಯ ಸರಾಯ್ ರೋಹಿಲ್ಲಾದಿಂದ ರಾಜಸ್ಥಾನದ ಅಜ್ಮೀರ್‌ಗೆ ಹೋಗುವ ಜನ ಶತಾಬ್ದಿ ಎಕ್ಸ್‌ಪ್ರೆಸ್ ಗುರುಗ್ರಾಮ ರೈಲು ನಿಲ್ದಾಣದಿಂದ ಬಸಾಯಿ ರೈಲು ನಿಲ್ದಾಣದ ಕಡೆಗೆ ಚಲಿಸುತ್ತಿದ್ದಾಗ ಈ ಘಟನೆ ಸಂಭವಿಸಿರುವುದಾಗಿ ಮೂಲಗಳು ಹೇಳಿವೆ.
ಮೃತರನ್ನು ದೇವಿಲಾಲ್ ಕಾಲೋನಿಯ ಸಮೀರ್ (19), ಮೊಹಮ್ಮದ್ ಅನಸ್ (20), ಯೂಸುಫ್ ಅಲಿಯಾಸ್ ಭೋಲಾ (21) ಮತ್ತು ಯುವರಾಜ್ ಗೋಗಿಯಾ (18) ಎಂದು ಗುರುತಿಸಲಾಗಿದೆ.
ಹಿಜಾಬ್‌ ಪರ ವಾದಿಸುತ್ತಿರುವ ವಕೀಲರ ಪರ ನಿಂತ ಶ್ರೀರಾಮಕೃಷ್ಣ ಆಶ್ರಮದ ಸ್ವಾಮೀಜಿ- ಅವರು ಹೇಳಿದ್ದೇನು?

7 ರಾಜ್ಯಗಳ 14 ಮಂದಿಯನ್ನು ಮದ್ವೆಯಾದ ಭೂಪ: ಬಲೆಗೆ ಬಿದ್ದವರೆಲ್ಲಾ ವೈದ್ಯರು, ವಕೀಲರು, ಉನ್ನತ ಅಧಿಕಾರಿಗಳು!

ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:five + twelve =
Remember me
