ಇಸ್ಲಾಮಾಬಾದ್: ಪಾಕಿಸ್ತಾನದಲ್ಲಿ ಹಿಂದೂ ದೇವಾಲಯವನ್ನು ಧ್ವಂಸ ಮಾಡಿದ್ದ 22 ಕಿಡಿಗೇಡಿಗಳಿಗೆ ಕೋರ್ಟ್​ ಐದು ವರ್ಷಗಳ ಕಠಿಣ ಶಿಕ್ಷೆಯನ್ನು ವಿಧಿಸಿದೆ.
2021ರ ಜುಲೈ ತಿಂಗಳಿನಲ್ಲಿ ಈ ಘಟನೆ ನಡೆದಿತ್ತು. ಮದರಾಸಾದಲ್ಲಿ ಎಂಟು ವರ್ಷದ ಬಾಲಕ ಮೂತ್ರ ವಿಸರ್ಜನೆ ಮಾಡಿದ್ದಾನೆ ಎಂದು ಆರೋಪಿಸಲಾಗಿತ್ತು. ಇದೇ ಕಾರಣವನ್ನಿಟ್ಟು, ಇಲ್ಲಿರುವ ಗಣೇಶ ಮಂದಿರದ ಮೇಲೆ ದಾಳಿ ನಡೆದಿತ್ತು. ದೇವಾಲಯ ಧ್ವಂಸಗೊಳಿಸಲು ವಿವಿಧ ಆಯುಧಗಳನ್ನು ತೆಗೆದುಕೊಂಡು ಹೋಗಿ ತಮ್ಮ ಕಾರ್ಯ ನೆರವೇರಿಸಿದ್ದರು. ಮಾತ್ರವಲ್ಲದೇ ಭದ್ರತೆಗಾಗಿ ನಿಯೋಜಿಸಿದ್ದ ಪೊಲೀಸರ ಮೇಲೆ ಹಲ್ಲೆ ನಡೆಸಿದ್ದರು. ಈ ಘಟನೆಗೆ ಸಂಬಂಧಿಸಿದಂತೆ 84 ಜನರನ್ನು ವಶಕ್ಕೆ ತೆಗೆದುಕೊಳ್ಳಲಾಗಿತ್ತು.
ಪಾಕಿಸ್ತಾನದ ಸಂಸತ್ತು ಕೂಡ ನಿರ್ಣಯವನ್ನು ಅಂಗೀಕರಿಸುವ ಮೂಲಕ ದೇವಾಲಯದ ದಾಳಿಯನ್ನು ಖಂಡಿಸಿತ್ತು. ಈ ಕೃತ್ಯವನ್ನು ಗಂಭೀರವಾಗಿ ಪರಿಗಣಿಸಿರುವ ಕೋರ್ಟ್​, 84 ಮಂದಿಯ ಪೈಕಿ 22 ಮಂದಿಗೆ ಶಿಕ್ಷೆ ನೀಡಿದೆ. ಉಳಿದ 62 ಮಂದಿಯನ್ನು ಬಿಡುಗಡೆ ಮಾಡಲಾಗಿದೆ.
ಮದರಾಸಾಗಳಲ್ಲಿ ಇನ್ಮುಂದೆ ರಾಷ್ಟ್ರಗೀತೆ ಕಡ್ಡಾಯ: ಮೊದಲು ಜನ ಗಣ ಮನ, ನಂತರ ಕಲಿಕೆ ಎಂದ ಯುಪಿ

BREAKING: ಜ್ಞಾನವಾಪಿ ಮಸೀದಿ ಸಮೀಕ್ಷೆಗೆ ಕೋರ್ಟ್​ ಗ್ರೀನ್​ ಸಿಗ್ನಲ್​: ಕಮಿಷನರ್​ ಬದಲಾಯಿಸಲಾಗದು ಎಂದ ನ್ಯಾಯಾಧೀಶರು

ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:four × 3 =
Remember me
