ಪಣಜಿ:ಗೋವಾ ಕಾಂಗ್ರೆಸ್​ನ 11 ಶಾಸಕರ ಪೈಕಿ 8 ಶಾಸಕರು ನಿನ್ನೆ (ಸೆ.14) ಬಿಜೆಪಿ ಸೇರ್ಪಡೆಯಾದ ಬೆನ್ನಲ್ಲೇ ಗೋವಾ ರಾಜಕೀಯದಲ್ಲಿ ಕುತೂಹಲದ ಬೆಳವಣಿಗೆ ನಡೆದಿದೆ. ಸ್ಥಳೀಯ ಕಾಂಗ್ರೆಸ್ ಶಾಸಕಾಂಗ ಪಕ್ಷ ಬಿಜೆಪಿಯೊಂದಿಗೆ ವಿಲೀನವಾಗಿದೆ. ಗೋವಾ ಸ್ಪೀಕರ್ ರಮೇಶ್ ತಾವಡ್ಕರ್ ವಿಲೀನ ಪ್ರಕ್ರಿಯೆಯನ್ನು ಅನುಮೋದನೆ ನೀಡಿದ್ದಾರೆ.
ರಾಜ್ಯ ಕಾಂಗ್ರೆಸ್ ಶಾಸಕಾಂಗ ಪಕ್ಷವು (ಸಿಎಲ್‌ಪಿ) ಆಡಳಿತಾರೂಢ ಬಿಜೆಪಿಯೊಂದಿಗೆ ವಿಲೀನ ಪ್ರಕ್ರಿಯೆಗೆ ತಾವು ಒಪ್ಪಿಗೆ ನೀಡಿರುವುದಾಗಿ ತಾವಡ್ಕರ್ ತಿಳಿಸಿದ್ದಾರೆ. ಈ ಕುರಿತು ಮಾಧ್ಯಮ ಪ್ರತಿನಿಧಿಗಳ ಜತೆ ಮಾತನಾಡಿದ ತಾವಡ್ಕರ್​, ಕಾಂಗ್ರೆಸ್ ಶಾಸಕರು ತಮಗೆ ಪತ್ರ ನೀಡಿದ್ದು ಕಾಂಗ್ರೆಸ್ ಶಾಸಕಾಂಗ ಪಕ್ಷವನ್ನು ಬಿಜೆಪಿಯೊಂದಿಗೆ ವಿಲೀನ ಮಾಡುವುದಕ್ಕೆ ಅಗತ್ಯವಿರುವ ಸಂಖ್ಯೆ ತಮ್ಮ ಬಳಿ ಇದೆ ಎಂದು ಹೇಳಿದ್ದರು. ಈ ಆಧಾರದಲ್ಲಿ ವಿಲೀನಕ್ಕೆ ಅನುಮೋದನೆ ನೀಡಿರುವುದಾಗಿ ಹೇಳಿದ್ದಾರೆ.
ಗೋವಾ ವಿಧಾನಸಭೆಯ ಪ್ರತಿಪಕ್ಷ ನಾಯಕ ಮೈಕೆಲ್ ಲೋಬೋ ಮತ್ತು ಹಿರಿಯ ನಾಯಕ ದಿಗಂಬರ್ ಕಾಮತ್ ಸೇರಿದಂತೆ 11 ಕಾಂಗ್ರೆಸ್ ಶಾಸಕರ ಪೈಕಿ ಎಂಟು ಮಂದಿ ಪಕ್ಷ ತೊರೆದು ಬಿಜೆಪಿ ಸೇರಿದ ನಂತರ ಲೋಬೋ ಅವರು ಗೋವಾ ಮುಖ್ಯಮಂತ್ರಿ ಪ್ರಮೋದ್ ಸಾವಂತ್ ಅವರ ಸಮ್ಮುಖದಲ್ಲಿ ಸೆಪ್ಟೆಂಬರ್ 13 ರಂದು ವಿಲೀನದ ನಿರ್ಣಯ ಮಂಡಿಸಿದ್ದರು. ಬಿಜೆಪಿ ಸೇರಿದ್ದ ಕಾಂಗ್ರೆಸ್ ಶಾಸಕರಲ್ಲಿ ಡೆಲಿಲಾ ಲೋಬೋ, ರಾಜೇಶ್ ಫಾಲ್ದೇಸಾಯಿ, ಕೇದಾರ್ ನಾಯಕ್, ಸಂಕಲ್ಪ್ ಅಮೋನ್ಕರ್, ಅಲೆಕ್ಸೋ ಸಿಕ್ವೇರಾ ಮತ್ತು ರುಡಾಲ್ಫ್ ಫರ್ನಾಂಡಿಸ್ ಸೇರಿದ್ದಾರೆ.
ಕಾಂಗ್ರೆಸ್‌ನ ಬಲ ಮೂರಕ್ಕೆ ಇಳಿದಿದ್ದು, ಈಗ ಗೋವಾ ವಿಧಾನಸಭೆಯಲ್ಲಿ ಯಾವುದೇ ಪಕ್ಷಕ್ಕೆ ಪ್ರತಿಪಕ್ಷ ನಾಯಕನ ಸ್ಥಾನದಲ್ಲಿ ಕುಳಿತುಕೊಳ್ಳಲು ಬೇಕಾದಷ್ಟು ಸಂಖ್ಯಾ ಬಲ ಹೊಂದಿಲ್ಲ. (ಏಜೆನ್ಸೀಸ್​)
ಗೋವಾ ಕಾಂಗ್ರೆಸ್​ನಲ್ಲಿ ಮತ್ತೆ ಕೋಲಾಹಲ! ಬಿಜೆಪಿಯ ಕೈ ಹಿಡಿಯಲಿದ್ದಾರಾ ಎಂಟು ಶಾಸಕರು?
ಡಿಕೆಶಿಗೆ ಮತ್ತೆ ಶಾಕ್​ ಕೊಟ್ಟ ಇಡಿ: ಸಮನ್ಸ್​ ಜಾರಿ- ಟ್ವೀಟ್​ ಮೂಲಕ ಅಸಮಾಧಾನ ಹೊರಹಾಕಿದ ಕೆಪಿಸಿಸಿ ಅಧ್ಯಕ್ಷ
ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:2 × one =
Remember me
