ಕೊಚ್ಚಿ:ಚಿನ್ನ ಅಕ್ರಮ ಸಾಗಣೆ ಪ್ರಕರಣದ ಪ್ರಮುಖ ಆರೋಪಿ ಸ್ವಪ್ನಾ ಸುರೇಶ್ ಜಾಮೀನು ಕೋರಿ ಸಲ್ಲಿಸಿದ್ದ ವಿಶೇಷ ನ್ಯಾಯಾಲಯ ವಜಾಗೊಳಿಸಿದೆ.
‘ಚಿನ್ನ ಅಕ್ರಮ ಸಾಗಣೆ ಪ್ರಕರಣದಲ್ಲಿ ಭಾಗಿಯಾಗಿರುವುದಾಗಿ ತಪ್ಪು ಒಪ್ಪಿಕೊಂಡಿರುವ ಹಿನ್ನೆಲೆಯಲ್ಲಿ, ತನಿಖೆಯ ಅಗತ್ಯವಿದೆ. ಈ ಹಂತದಲ್ಲಿ ಜಾಮೀನು ನೀಡಲು ಸಾಧ್ಯವಿಲ್ಲ ಎಂದು ವಿಶೇಷ ಪಿಎಂಎಲ್‌ಎ ನ್ಯಾಯಾಲಯ ಹೇಳಿದೆ.
ತಿರುವನಂತಪುರದ ಯುಎಇ ದೂತಾವಾಸದಲ್ಲಿ ವ್ಯಕ್ತಿಯ ಹೆಸರನ್ನು ಬಳಸಿಕೊಂಡು ರಾಜತಾಂತ್ರಿಕ ಸಾಮಾನುಗಳ ಮೂಲಕ ಚಿನ್ನವನ್ನು ಕಳ್ಳಸಾಗಣೆ ಮಾಡಲು ಯತ್ನಿಸಿದ ಆರೋಪ ಸ್ವಪ್ನಾ ಸುರೇಶ್ ಮೇಲಿದೆ.
ಇದನ್ನೂ ಓದಿ:ಅಬ್ಬಬ್ಬಾ.. ಮರದಲ್ಲಿ ಹಣ್ಣಿನ ಬದಲು ಕಣ್ಣು ಬಿಟ್ಟಿದೆ ನೋಡಿ!
ರಾಜತಾಂತ್ರಿಕ ಮಾರ್ಗವನ್ನು ದುರುಪಯೋಗ ಮಾಡಿಕೊಂಡ ಆರೋಪದ ಅಡಿ ಸ್ವಪ್ನಾ ಸುರೇಶ್ ಮತ್ತಿತರರನ್ನು ರಾಷ್ಟ್ರೀಯ ತನಿಖಾ ದಳದವರು ಬಂಧಿಸಿದ್ದರು. ಜಾರಿ ನಿರ್ದೇಶನಾಲಯ ಇವರ ವಿರುದ್ಧ ಪ್ರಕರಣ ದಾಖಲಿಸಿತ್ತು.
ಕೇರಳ ಮುಖ್ಯಮಂತ್ರಿ ಪಿಣರಾಯಿ ವಿಜಯನ್‌ ಸೇರಿದಂತೆ ಹಲವಾರು ರಾಜಕೀಯ ಧುರೀಣರ ಮಾತ್ರವಲ್ಲದೇ ಭಯೋತ್ಪಾದಕರ ಲಿಂಕ್‌ ಕೂಡ ಸ್ವಪ್ನಾಗಿದೆ ಎನ್ನುವುದು ಇದಾಗಲೇ ತನಿಖೆಯಿಂದ ತಿಳಿದುಬಂದಿದೆ. ಈ ಹಿನ್ನೆಲೆಯಲ್ಲಿ ಬಂಧನಕ್ಕೊಳಗಾಗಿರುವ ಸ್ವಪ್ನಾ ಜಾಮೀನು ಕೋರಿ ಅರ್ಜಿ ಸಲ್ಲಿಸಿದ್ದಳು.
ಕರೊನಾಕ್ಕೆ ಆಯುರ್ವೇದ ಔಷಧ ಕಂಡುಹಿಡಿದಿದ್ದೇನೆಂದ ವೈದ್ಯನಿಗೆ ‘ಸುಪ್ರೀಂ’ನಿಂದ ದಂಡ

ಭಾರತದಲ್ಲಿ ಬೇಳೆಕಾಳುಗಳು ಜನರು ಬಹುಮುಖ್ಯ ಭಕ್ಷ್ಯವಾಗಿದೆ. ಬೇಳೆಕಾಳುಗಳನ್ನು ವಾರಕ್ಕೊಮ್ಮೆಯಾದರೂ ತಿನ್ನಲಾಗುತ್ತದೆ. ಈ ಬೇಳೆಕಾಳುಗಳು ಪೋಷಕಾಂಶಗಳ ಆಗರವಾಗಿದ್ದು,…
ಬೆಂಗಳೂರು:  ಪಾಲಕರು ಪ್ರತಿ ಮಗುವಿನ ಮೊದಲ ಶಿಕ್ಷಕರು, ಅವರ ರೋಲ್ ಮಾಡೆಲ್. ಮಕ್ಕಳ ನಡವಳಿಕೆಯ ಮೇಲೆ…
ಅನೇಕ ಜನರು ತಮ್ಮ ಭವಿಷ್ಯವನ್ನು ತಿಳಿದುಕೊಳ್ಳಲು ತುಂಬಾ ಆಸಕ್ತಿ ಹೊಂದಿರುತ್ತಾರೆ. ಮುಂದಿನ ದಿನಗಳಲ್ಲಿ ನಮ್ಮ ಜೀವನದಲ್ಲಿ…
Sign in to your account
Please enter an answer in digits:7 − three =
Remember me
