ಅಹಮದಾಬಾದ್ (ಗುಜರಾತ್‌):ಗುಜರಾತ್‌ನ ಅಹಮದಾಬಾದ್‌ನ ರಾಸಾಯನಿಕ ಗೋದಾಮಿನಲ್ಲಿ ಬೆಂಕಿ ಸ್ಫೋಟಗೊಂದು ಒಂಬತ್ತು ಮಂದಿ ಮೃತಪಟ್ಟಿರುವ ಘಟನೆ ನಡೆದಿದೆ.
ಗೋದಾಮಿಗೆ ಹೊಂದಿಕೊಂಡಿದ್ದ ಕೆಮಿಕಲ್ ಫ್ಯಾಕ್ಟರಿಯಲ್ಲಿ ಮೊದಲ ಬಾರಿ ಬೆಂಕಿ ಕಾಣಿಸಿಕೊಂಡಿದೆ. ಅಹಮದಾಬಾದ್ ನಗರದ ಹೊರವಲಯದಲ್ಲಿರುವ ಕೈಗಾರಿಕಾ ಪ್ರದೇಶವಾದ ಪಿರಾನಾದಲ್ಲಿ ಈ ದುರ್ಘಟನೆ ಸಂಭವಿಸಿದ್ದು, ಆವಶೇಷಗಳಡಿ ಇನ್ನೂ ಕೆಲವರು ಸಿಲುಕಿರುವ ಸಾಧ್ಯತೆ ಇದೆ ಎಂದು ಶಂಕಿಸಲಾಗಿದೆ.
ಇದನ್ನೂ ಓದಿ:ಜೂಜಾಟಕ್ಕೆ ಪ್ರೇರಣೆ: ಹೈಕೋರ್ಟ್‌ ನೋಟಿಸ್‌ ಕುಣಿಕೆಯಲ್ಲಿ ಸಿನಿ, ಕ್ರಿಕೆಟ್‌ ತಾರೆಯರು
ಅವಶೇಷಗಳಡಿ ಸಿಲುಕಿರುವ 14 ಮಂದಿಯನ್ನು ಹೊರತೆಗೆಯಲಾಗಿದ್ದು, ರಕ್ಷಣಾ ಕಾರ್ಯಾಚರಣೆ ಮುಂದುವರೆದಿದೆ ಎಂದು ಅಗ್ನಿಶಾಮಕ ದಳದ ಹಿರಿಯ ಅಧಿಕಾರಿ ಎಂಎಫ್ ದಸ್ತೂರ್ ತಿಳಿಸಿದ್ದಾರೆ.
ಸ್ಫೋಟ ಸಂಭವಿಸಿದಾಗ 18 ಮಂದಿ ಗಂಭೀರವಾಗಿ ಗಾಯಗೊಂಡಿದ್ದರು. ಈ ಪೈಕಿ ಒಂಬತ್ತು ಮಂದಿ ಮೃತಪಟ್ಟಿದ್ದಾರೆ. ಇವರೆಲ್ಲರೂ ಗೋದಾಮಿನಲ್ಲಿ ಕೆಲಸ ಮಾಡುತ್ತಿರುವ ಕಾರ್ಮಿಕರು. ಉಳಿದವರಿಗೆ ಚಿಕಿತ್ಸೆ ನೀಡಲಾಗುತ್ತಿದೆ. ಘಟನೆ ಬಗ್ಗೆ ಪ್ರಾಥಮಿಕ ತನಿಖೆಯನ್ನು ಆರಂಭಿಸಿರುವುದಾಗಿ ಉಪ ಪೊಲೀಸ್ ಆಯುಕ್ತ ಅಶೋಕ್ ಮುನಿಯಾ ಹೇಳಿದ್ದಾರೆ.
ಪ್ರಧಾನಿ ಸಂತಾಪ:ಈ ದುರ್ಘಟನೆಗೆ ಪ್ರಧಾನಿ ನರೇಂದ್ರ ಮೋದಿ ಸಂತಾಪ ಸೂಚಿಸಿದ್ದು, ಸಂತ್ರಸ್ತರಿಗೆ ಎಲ್ಲ ರೀತಿಯ ನೆರವು ನೀಡುವುದಾಗಿ ತಿಳಿಸಿದ್ದಾರೆ.
ಗಾಯಾಳುಗಳು ಅದಷ್ಟು ಬೇಗ ಗುಣಮುಖವಾಗಲಿ ಎಂದು ಪ್ರಾರ್ಥಸಿರುವ ಪ್ರಧಾನಿಯವರು, ಅಧಿಕಾರಿಗಳು ಸಂತ್ರಸ್ತರಿಗೆ ಎಲ್ಲ ರೀತಿಯ ನೆರವು ನೀಡುತ್ತಿದ್ದಾರೆ ಎಂದು ಟ್ವೀಟ್ ಮೂಲಕ ತಿಳಿಸಿದ್ದಾರೆ.
ಕುವೆಂಪು ವಿವಿ: ಕಾಲೇಜು ಶುರು- ಸುತ್ತೋಲೆ ಹೊರಡಿಸಿದ ಕುಲಪತಿ

ಕಾಲೇಜು ಬೋಧಕರಿಗೆ ವರ್ಕ್‌ ಫ್ರಂ ಹೋಂ: ಸರ್ಕಾರದ ಆದೇಶ

ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:nine + sixteen =
Remember me
