ಜಮ್ಮು:ಹಿರಿಯ ಕಾಂಗ್ರೆಸ್ ನಾಯಕ ಗುಲಾಂ ನಬಿ ಆಜಾದ್ ಅವರ ಸೋದರಳಿಯ ಮುಬಾಶಿರ್ ಆಜಾದ್ ಇಂದು ಬಿಜೆಪಿ ಸೇರಿದ್ದಾರೆ. ಇವರು ಗುಲಾಂ ನಬಿ ಆಜಾದ್ ಅವರ ಸೋದರ ಸಂಬಂಧಿ ಲಿಯಾಕತ್ ಅಲಿ ಅವರ ಪುತ್ರ.
ಜಮ್ಮುವಿನ ತ್ರಿಕೂಟ ನಗರದಲ್ಲಿರುವ ಪಕ್ಷದ ಪ್ರಧಾನ ಕಚೇರಿಯಲ್ಲಿ ಅವರು ಸೇರ್ಪಡೆಗೊಂಡರು. ತಾವು ಕಾಂಗ್ರೆಸ್‌ ತೊರೆದು ಬಿಜೆಪಿ ಸೇರಿರುವ ಬಗ್ಗೆ ಮಾತನಾಡಿದ ಅವರು, ಕಾಂಗ್ರೆಸ್ ಪಕ್ಷವು ಒಳಜಗಳದಲ್ಲಿ ಮುಳುಗಿದೆ. ಆದರೆ ಪ್ರಧಾನಿ ನರೇಂದ್ರ ಮೋದಿ ನೇತೃತ್ವದಲ್ಲಿ ಜನರ ಕಲ್ಯಾಣಕ್ಕಾಗಿ ಕೆಲಸ ನಡೆಯುತ್ತಿದೆ. ಪ್ರಧಾನಿ ನರೇಂದ್ರ ಮೋದಿಯವರ ಅಭಿವೃದ್ಧಿ ಕಾರ್ಯಗಳಿಂದ ಪ್ರಭಾವಿತನಾಗಿ ಬಿಜೆಪಿ ಸೇರಿರುವೆ ಎಂದು ಹೇಳಿದ್ದಾರೆ.
ಚೆನಾಬ್ ಕಣಿವೆ ಪ್ರದೇಶದ ದೋಡಾ, ಕಿಶ್ತ್ವಾರ್ ಮತ್ತು ರಾಂಬನ್ ಜಿಲ್ಲೆಗಳಿಂದ ಹೆಚ್ಚಿನ ಯುವ ಕಾಂಗ್ರೆಸ್‌ ಕಾರ್ಯಕರ್ತರು ಬಿಜೆಪಿ ಸೇರಲು ಇದು ಮುನ್ನಡಿ ಬರೆದಿದೆ, ಇದೊಂದು ತಿರುವು ಆಗಿದೆ ಎನ್ನಲಾಗಿದೆ.
ಕಾಂಗ್ರೆಸ್‌ ಪಕ್ಷದ ಪ್ರಮುಖ ನಾಯಕರಲ್ಲಿ ಒಬ್ಬರಾದ ಮತ್ತು ಮಾಜಿ ಮುಖ್ಯಮಂತ್ರಿ ಗುಲಾಂ ನಬಿ ಆಜಾದ್ ಅವರನ್ನು ಕಾಂಗ್ರೆಸ್ ನಡೆಸಿಕೊಂಡ ರೀತಿ ಜನಸಾಮಾನ್ಯರ ಭಾವನೆಗಳನ್ನು ಘಾಸಿಗೊಳಿಸಿದೆ. ನಮ್ಮ ಅಂಕಲ್‌ ಅವರನ್ನು ಕಾಂಗ್ರೆಸ್ ಅಗೌರವದಿಂದ ನಡೆಸಿಕೊಂಡಿದೆ ಎಂದು ಇದೇ ವೇಳೆ ಮುಬಾಶಿರ್ ಆರೋಪಿಸಿದ್ದಾರೆ.
ಮುಬಾಶಿರ್ ಮತ್ತು ಅವರ ಬೆಂಬಲಿಗರನ್ನು ಜಮ್ಮು ಮತ್ತು ಕಾಶ್ಮೀರ ಬಿಜೆಪಿ ಅಧ್ಯಕ್ಷ ರವೀಂದರ್ ರೈನಾ ಮತ್ತು ಮಾಜಿ ಶಾಸಕ ದಲೀಪ್ ಸಿಂಗ್ ಪರಿಹಾರ್ ಸೇರಿದಂತೆ ಇತರ ಹಿರಿಯ ನಾಯಕರು ಪಕ್ಷಕ್ಕೆ ಸ್ವಾಗತಿಸಿದರು.
ಅತ್ತ ಕಾಂಗ್ರೆಸ್‌ ಪಾದಯಾತ್ರೆ, ಇತ್ತ ಜೆಡಿಎಸ್‌ ಮುಖಂಡರ ಶಿವರಾತ್ರಿ ಯಾತ್ರೆ! ರಾಜಕೀಯದಲ್ಲಿ ಸಂಚಲನ…

ನನ್ನ ಕೆನ್ನೆಗೆ ಹೊಡೆಯಲು ಆಲಿಯಾ 20 ಸಲ ಟ್ರೈ ಮಾಡಬೇಕಾಯ್ತು! ಅನುಭವ ಬಿಚ್ಚಿಟ್ಟ ನಟ ಶಂತನು

ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:4 × two =
Remember me
