ನವದೆಹಲಿ:ಜಮ್ಮು ಮತ್ತು ಕಾಶ್ಮೀರದ ಬಿಜೆಪಿ ಮುಖಂಡ ಗುಲಾಮ್ ಅಲಿ ಅವರನ್ನು ರಾಜ್ಯಸಭೆಗೆ ನಾಮನಿರ್ದೇಶನ ಮಾಡಲಾಗಿದೆ. ಕೇಂದ್ರ ಸರ್ಕಾರದ ಶಿಫಾರಸಿನ ಮೇರೆಗೆ ರಾಷ್ಟ್ರಪತಿ ದ್ರೌಪದಿ ಮುರ್ಮು ಅವರು ಈ ನೇಮಕಾತಿಯನ್ನು ಮಾಡಿದ್ದಾರೆ. ಇವರು ಜಮ್ಮುವಿನ ಬತಿಂಡಿ ನಿವಾಸಿಯಾಗಿದ್ದಾರೆ.
ನಾಮನಿರ್ದೇಶಿತ ಸದಸ್ಯರಲ್ಲಿ ಒಬ್ಬರ ನಿವೃತ್ತಿಯಿಂದಾಗಿ ತೆರವಾದ ಸ್ಥಾನವನ್ನು ತುಂಬಲು ಗುಲಾಮ್ ಅಲಿ ಅವರನ್ನು ಕೌನ್ಸಿಲ್ ಆಫ್ ಸ್ಟೇಟ್ಸ್‌ಗೆ ನಾಮನಿರ್ದೇಶನ ಮಾಡಲಾಗಿದೆ ಎಂದು ತಿಳಿಸಲಾಗಿದೆ. ಈ ಮೂಲಕ ಇದೇ ಮೊದಲ ಬಾರಿಗೆ ಜಮ್ಮು ಕಾಶ್ಮೀರದ ಗುರ್ಜರ್ ಮುಸ್ಲಿಂ ಒಬ್ಬರನ್ನು ಮೇಲ್ಮನೆಗೆ ನಾಮನಿರ್ದೇಶಿತ ಸದಸ್ಯರಾಗಿ ಕಳುಹಿಸಿದಂತಾಗಿದೆ.
ಗುಲಾಮ್​ ಅಲಿ ಕಳೆದ 24 ವರ್ಷಗಳಿಂದ ಬಿಜೆಪಿಯೊಂದಿಗೆ ಸಕ್ರಿಯವಾಗಿದ್ದಾರೆ. ಪಕ್ಷದ ಎಸ್‌ಸಿ/ಎಸ್‌ಟಿ ವಿಭಾಗದಲ್ಲಿ ವಕ್ತಾರರಾಗಿಯೂ ಕೆಲಸ ನಿರ್ವಹಿಸುತ್ತಿದ್ದಾರೆ.
ನಾಮನಿರ್ದೇಶನದ ನಂತರ ಮಾತನಾಡಿದ ಗುಲಾಂ ಅಲಿ ಅವರು, ‘ಬಿಜೆಪಿಯಲ್ಲಿ ನಾವು ಸ್ಥಾನಕ್ಕಾಗಿ ಕೆಲಸ ಮಾಡುವುದಿಲ್ಲ. ನಾನು ಪಕ್ಷಕ್ಕಾಗಿ ನಿಸ್ವಾರ್ಥವಾಗಿ ಕೆಲಸ ಮಾಡಿದ್ದೇನೆ. ಪಕ್ಷ ನನ್ನ ನಿಷ್ಠೆ, ಕೆಲಸವನ್ನು ನೋಡಿದೆ’ ಎಂದಿದ್ದಾರೆ. ‘ನಾವು ಅಧಿಕಾರಕ್ಕೆ ಬಂದಾಗ ರಾಜಕೀಯ ಶಕ್ತಿ ಇಲ್ಲದವರಿಗೆ ಅಧಿಕಾರ ನೀಡುತ್ತೇವೆ ಎಂದು ಪ್ರಧಾನಿ ನರೇಂದ್ರ ಮೋದಿ ಹೇಳಿದ್ದರು. ಅದರಂತೆ ಅವರು ನಡೆದುಕೊಂಡಿದ್ದಾರೆ’ ಎಂದು ಗುಲಾಂ ಅಲಿ ತಿಳಿಸಿದರು.(ಏಜೆನ್ಸೀಸ್​)
ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:3 + eleven =
Remember me
