ಲಖನೌ:ಹಾಥರಸ್​ನಲ್ಲಿ 19 ವರ್ಷದ ಯುವತಿಯ ಗ್ಯಾಂಗ್‍ರೇಪ್ ನಡೆದಿದೆ ಎನ್ನಲಾದ ಪ್ರಕರಣದ ಬಿಸಿ ತಣ್ಣಗಾಗುವ ಮೊದಲೇ ನಾಲ್ಕು ವರ್ಷದ ಮಗುವಿನ ಮೇಲೆ ಅತ್ಯಾಚಾರ ನಡೆದಿರುವ ಪ್ರಕರಣ ಬೆಳಕಿಗೆ ಬಂದಿದೆ.
ಹಾಥರಸ್​ನ ಸಸ್ನಿ ಎಂಬಲ್ಲಿ ಈ ಘಟನೆ ನಡೆದಿದೆ. ಈ ಮಗುವಿನ ಸಂಬಂಧಿಯೇ ಅತ್ಯಾಚಾರ ಎಸಗಿರುವುದು ಮೇಲ್ನೋಟಕ್ಕೆ ಕಂಡುಬಂದಿದೆ.
ಸದ್ಯ ಆತನ ವಿರುದ್ಧ ಪ್ರಕರಣ ದಾಖಲಿಸಿಕೊಳ್ಳಲಾಗಿದ್ದು, ತನಿಖೆ ನಡೆಸಲಾಗುತ್ತಿದೆ ಎಂದು ಸರ್ಕಲ್ ಆಫಿಸರ್ ರುಚಿ ಗುಪ್ತಾ ತಿಳಿಸಿದ್ದಾರೆ.
Hathras: A 4-year-old girl was allegedly raped by her relative in Sasni area. Ruchi Gupta, Circle Officer says, "The accused has been arrested. A case has been registered." (13.11)pic.twitter.com/Xccs4CjIO8
— ANI UP/Uttarakhand (@ANINewsUP)October 14, 2020

ಮಾಹಿತಿ ಪಡೆದ ಕೂಡಲೇ ಪೊಲೀಸರು ಸ್ಥಳಕ್ಕೆ ಧಾವಿಸಿದ್ದಾರೆ. ಬಾಲಕಿಯನ್ನು ಚಿಕಿತ್ಸೆಗಾಗಿ ಆರೋಗ್ಯ ಕೇಂದ್ರಕ್ಕೆ ಕರೆತರಲಾಗಿದೆ. ರುಚಿ ಗುಪ್ತಾ ಕೂಡ ಸ್ಥಳಕ್ಕೆ ತಲುಪಿದ್ದಾರೆ. ಅವರು ಕುಟುಂಬ ಮತ್ತು ಗ್ರಾಮಸ್ಥರಿಂದ ವಿಚಾರಿಸಿ ಸಂಗತಿಗಳನ್ನು ಸಂಗ್ರಹಿಸಿದ್ದಾರೆ. ಇದರ ಆಧಾರದ ಮೇಲೆ ಬಾಲಕಿಯ ಸಂಬಂಧಿಕನನ್ನು ಬಂಧಿಸಲಾಗಿದೆ.
ಅತ್ಯಾಚಾರದ ವಿಷಯ ತಿಳಿಯುತ್ತಲೇ ಸಾರ್ವಜನಿಕರು ಸರ್ಕಾರ ಮತ್ತು ಪೊಲೀಸರ ವಿರುದ್ಧ ಆಕ್ರೋಶ ಹೊರ ಹಾಕುತ್ತಿದ್ದಾರೆ.
ಅಬ್ಬರಿಸುತ್ತಿರುವ ವರುಣ: ಕುಸಿದ ಕಾಂಪೌಂಡ್​ – ಮಗು ಸೇರಿ 9 ಮಂದಿ ಸಾವು

14 ತಿಂಗಳ ಗೃಹಬಂಧನದಿಂದ ಮುಫ್ತಿಗೆ ಸಿಕ್ಕಿತು ಮುಕ್ತಿ- ಕೇಂದ್ರದ ವಿರುದ್ಧ ಗುಡುಗು

ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:eleven − eight =
Remember me
