ಕಾಮಾರೆಡ್ಡಿ (ತೆಲಂಗಾಣ) :ಹೃದಯಾಘಾತಕ್ಕೆ ಒಳಗಾಗಿರುವ ರೋಗಿಯೊಬ್ಬರಿಗೆ ಚಿಕಿತ್ಸೆ ನೀಡುತ್ತಲೇ ವೈದ್ಯರೊಬ್ಬರು ಹೃದಯಾಘಾತದಿಂದ ಮೃತಪಟ್ಟಿರುವ ಘಟನೆ ತೆಲಂಗಾಣದ ಕಾಮಾರೆಡ್ಡಿ ಎಂಬಲ್ಲಿ ನಡೆದಿದೆ.
ವೈದ್ಯ ಲಕ್ಷ್ಮಣ್​​ ಎಂಬುವವರು ಹೃದಯಾಘಾತಕ್ಕೆ ಒಳಗಾಗಿ ಮೃತಪಟ್ಟಿದ್ದಾರೆ. ಇವರು ಕಾಮಾರೆಡ್ಡಿಯ ಜಿಲ್ಲೆಯ ಗಾಂಧಾರಿ ಮಂಡಲದ ನಿವಾಸಿ ಸರ್ಜು ಎಂಬುವವರಿಗೆ ಚಿಕಿತ್ಸೆ ನೀಡುತ್ತಿದ್ದರು. ಈ ಸಂದರ್ಭದಲ್ಲಿ ಹೃದಯಾಘಾತವಾಗಿದೆ. ಸರ್ಜು ಅವರಿಗೆ ಹೃದಯಾಘಾತವಾಗಿತ್ತು. ಈ ವೇಳೆ ಕುಟುಂಬಸ್ಥರು ಆಸ್ಪತ್ರೆಗೆ ಕರೆದುಕೊಂಡು ಬಂದಿದ್ದರು.
ಕೂಡಲೇ ಕಾರ್ಯಪ್ರವೃತ್ತರಾಗಿದ್ದ ಡಾ.ಲಕ್ಷ್ಮಣ್‌ ಚಿಕಿತ್ಸೆ ನೀಡುತ್ತಿದ್ದರು. ತಕ್ಞಣ ಅವರು ಕುಸಿದುಬಿದ್ದು ಅಲ್ಲಿಯೇ ಮೃತಪಟ್ಟಿದ್ದಾರೆ. ಸರ್ಜುವನ್ನು ಕಾಮಾರೆಡ್ಡಿ ಆಸ್ಪತ್ರೆಗೆ ಸಾಗಿಸಲು ಪ್ರಯತ್ನಿಸಲಾಯಿತಾರೂ, ಮಾರ್ಗಮಧ್ಯೆ ಸರ್ಜು ಸಾವನ್ನಪ್ಪಿದ್ದಾರೆ. ಈ ನಡುವೆಯೇ ಚಿಕಿತ್ಸೆ ಮಾಡುವ ಪೂರ್ವದಲ್ಲಿಯೇ ರೋಗಿ ಸರ್ಜು ಕೂಡ ಮೃತಪಟ್ಟಿದ್ದಾರೆ.
ನಿಜಾಮಾಬಾದ್ ಮೆಡಿಕಲ್ ಕಾಲೇಜಿನಲ್ಲಿ ಪ್ರೊಫೆಸರ್ ಆಗಿಯೂ ಕಾರ್ಯ ನಿರ್ವಹಿಸುತ್ತಿದ್ದ ಡಾ.ಲಕ್ಷ್ಮಣ್‌ ಅವರ ಸಾವಿಗೆ ಇಡೀ ಆಸ್ಪತ್ರೆ ಕಂಬನಿ ಮಿಡಿದಿದೆ.
ಖ್ಯಾತ ಉದ್ಯಮಿಯ ಕಾರು ಅಪಘಾತಕ್ಕೆ ಭಾರಿ ಟ್ವಿಸ್ಟ್‌: ಮರಣೋತ್ತರ ಪರೀಕ್ಷೆಯಿಂದ ಬಯಲಾಯ್ತು ಸಾವಿನ ರಹಸ್ಯ!

ಶವಸಂಸ್ಕಾರಕ್ಕೆ ಹೊರಟ 18 ಮಂದಿ ದಾರಿಯಲ್ಲಿಯೇ ಹೆಣವಾದರು! ಭೀಕರ ಅಪಘಾತದಲ್ಲಿ ದಾರುಣ ಸಾವು

ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:4 × one =
Remember me
