ನವದೆಹಲಿ:ಹಿಜಾಬ್ ಧರಿಸುವ ವಿಚಾರದಲ್ಲಿ ರಾಜ್ಯ ಸರ್ಕಾರ ನೀಡಿರುವ ಆದೇಶ ಕಾನೂನುಬದ್ಧವಾಗಿದೆ ಎಂದು ಕರ್ನಾಟಕ ಹೈಕೋರ್ಟ್ ಮಾ.15ರಂದು ತೀರ್ಪು ನೀಡುತ್ತಿದ್ದಂತೆಯೇ ಈ ತೀರ್ಪನ್ನು ಪ್ರಶ್ನಿಸಿ ಹಲವರು ಸುಪ್ರೀಂಕೋರ್ಟ್​ ಮೆಟ್ಟಿಲೇರಿದ್ದಾರೆ.
ಹಿಜಾಬ್ ಧರಿಸಿವುದು ಮುಸ್ಲಿಂ ಮಹಿಳೆಯರ ಅತ್ಯಗತ್ಯ ಧಾರ್ಮಿಕ ಆಚರಣೆಯ ಭಾಗವಲ್ಲ ಎಂದು ಹೈಕೋರ್ಟ್ ಹೇಳಿದೆ. ಈ ಕುರಿತು ಸರ್ಕಾರ ನೀಡಿದ ಆದೇಶ ಕಾನೂನುಬದ್ಧವಾಗಿದೆ. ಫೆಬ್ರವರಿ 5ರಂದು ಸರ್ಕಾರ ನೀಡಿದ ಆದೇಶವನ್ನು ಅಮಾನ್ಯಗೊಳಿಸಲು ಸಾಧ್ಯವಿಲ್ಲ ಎಂದು ಹೈಕೋರ್ಟ್​ ಹೇಳಿದೆ. ಇದನ್ನು ಸುಪ್ರೀಂಕೋರ್ಟ್​ನಲ್ಲಿ ವಿದ್ಯಾರ್ಥಿನಿಯರು ಸೇರಿದಂತೆ ಹಲವರು ಪ್ರಶ್ನಿಸಿದ್ದಾರೆ.
ಇದರ ವಿಚಾರಣೆ ತುರ್ತಾಗಿ ನಡೆಯಬೇಕಿರುವ ಹಿನ್ನೆಲೆಯಲ್ಲಿ, ಕೂಡಲೇ ವಿಚಾರಣೆ ನಡೆಸಿ ಎಂದು ಮೇಲ್ಮನವಿದಾರರ ಪರ ವಕೀಲರು ಸುಪ್ರೀಂಕೋರ್ಟ್​ ಅನ್ನು ಕೋರಿದ್ದರು. ಸೋಮವಾರದಿಂದ ಪರೀಕ್ಷೆ ಶುರುವಾಗಲಿರುವ ಹಿನ್ನೆಲೆಯಲ್ಲಿ ಕೂಡಲೇ ಅರ್ಜಿಯ ವಿಚಾರಣೆ ನಡೆಸಿ ಎಂದು ವಕೀಲರು ಕೋರಿದರು. ಆದರೆ ಸುಪ್ರೀಂಕೋರ್ಟ್​ ಈ ಅರ್ಜಿಯ ವಿಚಾರಣೆಯನ್ನು ಇಂದು ನಡೆಸಲು ತಿರಸ್ಕರಿಸಿದ್ದು, ಹೋಳಿ ಹಬ್ಬ ಮುಗಿದ ಮೇಲೆ ವಿಚಾರಣೆ ಕೈಗೆತ್ತಿಕೊಳ್ಳಲಾಗುವುದು ಎಂದು ಹೇಳಿದೆ.
ಈ ನಡುವೆಯೇ ಹಿಂದೂ ಸೇನಾದ ಅಧ್ಯಕ್ಷ ಸುರ್ಜಿತ್ ಯಾದವ್ ಅವರು ಸುಪ್ರೀಂಕೋರ್ಟ್‌ನಲ್ಲಿ ಕೇವಿಯಟ್ ಅರ್ಜಿ ಸಲ್ಲಿಸಿದ್ದಾರೆ. ಹೈಕೋರ್ಟ್​ ತೀರ್ಪನ್ನು ಪ್ರಶ್ನಿಸಿ ಸಲ್ಲಿಸಿರುವ ಮೇಲ್ಮನವಿಗೆ ಸಂಬಂಧಿಸಿದಂತೆ ಯಾವುದೇ ಆದೇಶ ಹೊರಡಿಸುವ ಪೂರ್ವದಲ್ಲಿ ತಮ್ಮ ವಾದವನ್ನೂ ಆಲಿಸಬೇಕು ಎಂದು ಅವರು ಕೋರಿದ್ದಾರೆ.
ಮದ್ವೆಯಾಗೋದಾಗಿ ಹೇಳಿ ರೇಪ್​: ದುಬಾರಿ ಗಿಫ್ಟ್​ ಪಡೆದು ಸ್ಯಾಂಡಲ್​ವುಡ್​ ನಟಿಯ ಅಣ್ಣ ಎಸ್ಕೇಪ್​?

ಯೂಕ್ರೇನ್‌ನಿಂದ 800 ಭಾರತೀಯರನ್ನು ರಕ್ಷಿಸಿದ ಯುವತಿ: ಬಿಜೆಪಿ ಮುಖಂಡೆಯ ಪುತ್ರಿಗೆ ಶ್ಲಾಘನೆಗಳ ಮಹಾಪೂರ…

ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
ಭಾರತದಲ್ಲಿ ಬೇಳೆಕಾಳುಗಳು ಜನರು ಬಹುಮುಖ್ಯ ಭಕ್ಷ್ಯವಾಗಿದೆ. ಬೇಳೆಕಾಳುಗಳನ್ನು ವಾರಕ್ಕೊಮ್ಮೆಯಾದರೂ ತಿನ್ನಲಾಗುತ್ತದೆ. ಈ ಬೇಳೆಕಾಳುಗಳು ಪೋಷಕಾಂಶಗಳ ಆಗರವಾಗಿದ್ದು,…
ಬೆಂಗಳೂರು:  ಪಾಲಕರು ಪ್ರತಿ ಮಗುವಿನ ಮೊದಲ ಶಿಕ್ಷಕರು, ಅವರ ರೋಲ್ ಮಾಡೆಲ್. ಮಕ್ಕಳ ನಡವಳಿಕೆಯ ಮೇಲೆ…
Sign in to your account
Please enter an answer in digits:one × 3 =
Remember me
