ಬೀಜಿಂಗ್:ಬೆಂಕಿ ಕಾಣಿಸಿಕೊಂಡಿರುವ ಕಟ್ಟಡದಿಂದ ಮಾನವ ಸರಪಳಿ ನಿರ್ಮಿಸಿ ಇಬ್ಬರು ಬಾಲಕಿಯರನ್ನು ಯುವಕರು ರಕ್ಷಣೆ ಮಾಡಿರುವ ಘಟನೆ ಚೀನಾದ ಕ್ಸಿಂಟಿಯನ್‌ನಲ್ಲಿ ನಡೆದಿದೆ.
ಇದರ ವಿಡಿಯೋ ವೈರಲ್‌ ಆಗಿದ್ದು, ಆರು ಮಂದಿ ಯುವಕರ ಈ ಸಾಹಸಕ್ಕೆ ಭಾರಿ ಮೆಚ್ಚುಗೆ ವ್ಯಕ್ತವಾಗಿದೆ. ಇಲ್ಲಿಯ ಬಹುಮಹಡಿ ಕಟ್ಟಡವೊಂದರಲ್ಲಿ ಬೆಂಕಿ ಕಾಣಿಸಿಕೊಂಡಿತ್ತು. ಈ ಸಂದರ್ಭದಲ್ಲಿ ಇಬ್ಬರು ಬಾಲಕಿಯರು ಕಟ್ಟಡದೊಳಗೆ ಸಿಲುಕಿಕೊಂಡಿದ್ದರು.
ಇದನ್ನು ಗಮನಿಸಿದ ಕೆಲ ಯುವಕರು ಒಬ್ಬರ ಮೇಲೆ ಒಬ್ಬರಂತೆ ಚೈನ್ ತರ ನಿಂತು ಬೆಂಕಿ ಕಾಣಿಸಿಕೊಂಡ ಕಟ್ಟಡದಿಂದ ಬಾಲಕಿಯನ್ನು ಹೊರಗೆ ಎಳೆದು ಸುರಕ್ಷಿತವಾಗಿ ಕೆಳಗಿಳಿಸಿದ್ದಾರೆ. ಬಾಲಕಿಯರನ್ನು ರಕ್ಷಿಸುತ್ತಿರುವ ವೀಡಿಯೋವನ್ನು ಸ್ಥಳೀಯರು ತಮ್ಮ ಮೊಬೈಲ್‌ನಲ್ಲಿ ಸೆರೆಹಿಡಿದಿದ್ದು ಅದೀಗ ವೈರಲ್‌ ಆಗಿದೆ. 25 ಸೆಕೆಂಡ್ ವಿಡಿಯೋ ಇದಾಗಿದ್ದು ಇದಾಗಲೇ ಸಾಕಷ್ಟು ಜನ ಮೆಚ್ಚುಗೆ ವ್ಯಕ್ತಪಡಿಸಿದ್ದಾರೆ. ಕಳೆದ ಜೂನ್‌ ತಿಂಗಳ ವಿಡಿಯೋ ಇದಾಗಿದ್ದು, ಇದೀಗ ಭಾರಿ ಸದ್ದು ಮಾಡುತ್ತಿದೆ.
ವಿಡಿಯೋ ನೋಡಲು ಈ ಲಿಂಕ್‌ ಕ್ಲಿಕ್‌ ಮಾಡಿ:
https://www.facebook.com/watch/?v=142981944592748
ತಾಲಿಬಾನಿ ಹಾರಿಸಿದ ಗುಂಡಿನ ನೋವು ಇಂದಿಗೂ ಮಾಯಲಿಲ್ಲ- ಅಂದು ಅನುಭವಿಸಿದ ಯಾತನೆ ಬಿಚ್ಚಿಟ್ಟ ಮಲಾಲ

ಗಂಡ ತಾಲೀಬಾನಿ ಎಂದು ನಾಲ್ಕು ವರ್ಷಗಳ ಹಿಂದೆ ವಿಚ್ಛೇದನ ಕೊಟ್ಟಾಕೆಗೆ ಗಲ್ಲುಶಿಕ್ಷೆ ವಿಧಿಸಿದ ಕೋರ್ಟ್‌!

ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:ten − two =
Remember me
