ಶ್ರೀನಗರ:ಕಾಶ್ಮೀರದ ಉಗ್ರಗಾಮಿ ಸಂಘಟನೆಗಳ ಅತ್ಯಂತ ದೊಡ್ಡ ಕೂಟವಾದ ಹುರಿಯತ್ ಕಾನ್ಪರೆನ್ಸ್​ ಮುಖಂಡ, ಕಾಶ್ಮೀರ ಪ್ರತ್ಯೇಕತಾವಾದಿ ನಾಯಕ ಸೈಯದ್ ಅಲಿ ಶಾ ಗಿಲಾನಿ ನಿಧನರಾಗಿದ್ದಾರೆ. ಅವರಿಗೆ 91 ವರ್ಷ ವಯಸ್ಸಾಗಿತ್ತು. ಮೂರು ದಶಕಗಳಿಗೂ ಹೆಚ್ಚಿನ ಕಾಲ ಜಮ್ಮು ಮತ್ತು ಕಾಶ್ಮೀರ ಪ್ರತ್ಯೇಕ ರಾಜ್ಯವಾಗಬೇಕು ಎಂದು ಹೋರಾಟ ನಡೆಸಿದ್ದರು.
1990ರಿಂದ ಕಾಶ್ಮೀರದಲ್ಲಿ ಪ್ರತ್ಯೇಕತಾವಾದಿ ಚಳವಳಿ ಮುನ್ನಡೆಸಿದ್ದ ಗಿಲಾನಿ, ಹುರಿಯತ್​ನ ಆಜೀವ ಅಧ್ಯಕ್ಷರಾಗಿದ್ದರು. ಸಂಘಟನೆಯಲ್ಲಿರುವ ಪ್ರಸಕ್ತ ಸನ್ನಿವೇಶಗಳಿಂದಾಗಿ ತಾವು ಅಖಿಲ ಭಾರತ ಹುರಿಯತ್ ಕಾನ್ಪರೆನ್ಸ್​ಗೆ 2020ರ ಜೂನ್‌ ತಿಂಗಳಿನಲ್ಲಿ ರಾಜೀನಾಮೆ ನೀಡಿದ್ದರು.
ಇವರು ಮೂರು ಬಾರಿ ಸೋಪೋರ್ ಕ್ಷೇತ್ರದಿಂದ ಮೂರು ಬಾರಿ ವಿಧಾನಸಭೆಗೆ ಆಯ್ಕೆಯಾಗಿದ್ದರು. 2013ರಿಂದ ಹೆಚ್ಚಾಗಿ ಗೃಹಬಂಧನದಲ್ಲಿಯೇ ಇದ್ದ ಅವರ ಆರೋಗ್ಯ ಮೂರು ವರ್ಷಗಳಿಂದ ಹದಗೆಟ್ಟಿತ್ತು. ಹಲವು ಬಾರಿ ಅವರ ಆರೋಗ್ಯದ ಬಗ್ಗೆ ವದಂತಿಗಳು ಹಬ್ಬಿ, ಕಣಿವೆಯಲ್ಲಿ ಅಶಾಂತಿಯ ವಾತಾವರಣ ಕೂಡ ನಿರ್ಮಾಣವಾಗಿತ್ತು. ಹೀಗಾಗಿ ಕುಟುಂಬದ ಸದಸ್ಯರನ್ನು ಹೊರತುಪಡಿಸಿ ಉಳಿದವರು ಅವರನ್ನು ಭೇಟಿ ಮಾಡುವುದಕ್ಕೆ ಅವಕಾಶ ನೀಡುತ್ತಿರಲಿಲ್ಲ.
ನೂರಾರು ಕೋಟಿ ರೂಪಾಯಿಗಳ ಒಡೆಯ ಗಿಲಾನಿ ಹಾಗೂ ಅವರ ಮಕ್ಕಳಾದ ನಾಸೀಮ್, ನಯೀಮ್, ಅನಿಷಾ, ಫಾರ್ ಹಾತ್ ಸೇರಿ ಆರು ಜನರ ಮೇಲೆ ಎನ್ಐಎ ಅಧಿಕಾರಿಗಳು ಕಣ್ಣಿಟ್ಟಿದ್ದರು. ಅಕ್ರಮ ಆಸ್ತಿ ಗಳಿಕೆ, ಪಾಕಿಸ್ತಾನದಿಂದ ಹಣ ಪಡೆದು, ಕಣಿವೆ ರಾಜ್ಯದಲ್ಲಿ ವಿಧ್ವಂಸಕ ಕೃತ್ಯಕ್ಕೆ ಬಳಕೆ ಮುಂತಾದ ಆರೋಪಗಳ ಕುರಿತ ತನಿಖೆ ಇನ್ನೂ ಜಾರಿಯಲ್ಲಿದೆ.ಜಮ್ಮು ಮತ್ತು ಕಾಶ್ಮೀರ ಒಂದು ವಿವಾದಿತ ಪ್ರದೇಶ ಮತ್ತು ಅದರ ಮೇಲೆ ಭಾರತದ ನಿಯಂತ್ರಣ ಸಮರ್ಥನೀಯವಲ್ಲ ಎಂದು ಹುರಿಯತ್ ಪ್ರತಿಪಾದಿಸುತ್ತಾ ಬಂದಿದೆ. ಪಿಡಿಪಿ ಅಧ್ಯಕ್ಷೆ ಮೆಹಬೂಬಾ ಮುಫ್ತಿ ಅವರು ಗಿಲಾನಿ ನಿಧನಕ್ಕೆ ಟ್ವೀಟ್‌ ಮೂಲಕ ಸಂತಾಪ ಸೂಚಿಸಿದ್ದಾರೆ.
ಗಂಡ ಪ್ರೀತಿಯಿಂದ ತಂದ ಪಾನಿಪುರಿಯೇ ಪತ್ನಿಯ ಆತ್ಮಹತ್ಯೆಗೆ ಕಾರಣವಾಯ್ತು! ಅಷ್ಟಕ್ಕೂ ಆಗಿದ್ದೇನು?
ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:seventeen − 6 =
Remember me
