ಶ್ರೀನಗರ:ಇಲ್ಲಿನ ನೌಗಾಮ್ ಪ್ರದೇಶದಲ್ಲಿ ಉಗ್ರರು ಇಂದು ಭದ್ರತಾ ಪಡೆಗಳ ಮೇಲೆ ದಾಳಿ ನಡೆಸಿದ್ದರಿಂದ ಇಬ್ಬರು ಸಿಆರ್​ಪಿಎಫ್​ ಯೋಧರು ಬಲಿಯಾಗಿದ್ದಾರೆ.
ನೌಗಾಮ್ ಪ್ರದೇಶದ ಕಂಡಿಜಾಲ್ ಸೇತುವೆ ಬಳಿ ಇಂದು ಮಧ್ಯಾಹ್ನ ಉಗ್ರರು ಗುಂಡಿನ ದಾಳಿ ನಡೆಸಿದ್ದು, ಅವರ ನಡುವಿನ ಹೋರಾಟದಲ್ಲಿ ಇಬ್ಬರು ಹುತಾತ್ಮರಾಗಿರುವುದಾಗಿ ಸೇನೆ ತಿಳಿಸಿದೆ. ಗುಂಡಿನ ದಾಳಿಯಲ್ಲಿ ಈ ಇಬ್ಬರಿಗೂ ಗಂಭೀರ ಗಾಯಗಳಾಗಿದ್ದವು. ಆದರೆ ನಂತರ ಅವರು ಹುತಾತ್ಮರಾಗಿದ್ದಾರೆ.
ಈ ಘರ್ಷಣೆಯಲ್ಲಿ ಮೂವರು ಭಾರತೀಯ ಯೋಧರಿಗೆ ಗಂಭೀರ ಗಾಯಗಳಾಗಿವೆ. ಗಾಯಾಳುಗಳನ್ನು ಇಲ್ಲಿನ ಸೇನೆಯ 92 ಬೇಸ್ ಆಸ್ಪತ್ರೆಗೆ ರವಾನಿಸಲಾಗಿದೆ. ಮುಂದಿನ ಮಾಹಿತಿ ತಿಳಿದುಬರಬೇಕಾಗಿದೆ ಎಂದು ಅಧಿಕಾರಿ ಹೇಳಿದ್ದಾರೆ.
ಇದನ್ನೂ ಓದಿ:ರಾಷ್ಟ್ರ ರಾಜಧಾನಿಯಲ್ಲಿ ‘ಯುದ್ಧ’: ಆಯುಧವಾಯಿತು ‘ಗ್ರೀನ್​ ದೆಹಲಿ ಆ್ಯಪ್’!
110ನೇ ಬೆಟ್ಯಾಲಿಯನ್​ ಸಿಬ್ಬಂದಿ ಸಲಕರಣೆಗಳನ್ನು ಒಯ್ಯುತ್ತಿದ್ದ ಸಂದರ್ಭದಲ್ಲಿ ಭಯೋತ್ಪಾದಕರು ಏಕಾಏಕಿ ಗುಂಡಿನ ದಾಳಿ ನಡೆಸಿದ್ದಾರೆ. ಈ ಸಂದರ್ಭದಲ್ಲಿ ಐವರು ಯೋಧರಿಗೆ ಗಂಭೀರ ಗಾಯಗಳಾಗಿದ್ದವು. ಅ ಪೈಕಿ ಇಬ್ಬರು ಹುತಾತ್ಮರಾಗಿದ್ದಾರೆ ಎಂದು ಅಧಿಕಾರಿಗಳು ಮಾಹಿತಿ ನೀಡಿದ್ದಾರೆ.
ಏಕಾಏಕಿ ನಡೆದ ಈ ಗುಂಡಿನ ದಾಳಿಯ ನಂತರ ಜಮ್ಮು-ಕಾಶ್ಮೀರದ ನೌಗಾಮ್​ ಪ್ರದೇಶವನ್ನು ಸಂಪೂರ್ಣವಾಗಿ ಬಂದ್​ ಮಾಡಲಾಗಿದೆ.
ಚುನಾವಣಾಧಿಕಾರಿಯಾಗಿ ತೃತೀಯ ಲಿಂಗಿ: ಇತಿಹಾಸ ಸೃಷ್ಟಿಸಿದ ಬಿಹಾರ

ಮದ್ಯದ ದೊರೆಯ ವಿರುದ್ಧ ಲಂಡನ್​ನಲ್ಲಿ ನಡೀತಿದೆ ರಹಸ್ಯ ಕಾರ್ಯಾಚರಣೆ: ಸುಪ್ರೀಂಗೆ ಕೇಂದ್ರದ ಮಾಹಿತಿ

ಪಕದ್ಮನೆ ಯುವಕನ ಜತೆ ಮದ್ವೆಯಾದ ಪತ್ನಿ: ನೊಂದ ಪತಿಯಿಂದ ಲೈವ್​ ಸ್ಯೂಸೈಡ್​!

ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:3 × 4 =
Remember me
