ನವದೆಹಲಿ:ರಾಜಸ್ಥಾನ ಕಾಂಗ್ರೆಸ್​ ಸಚಿವ ಮಹೇಶ್ ಜೋಶಿ ಅವರ ಮಗ ರೋಹಿತ್ ಜೋಶಿ ವಿರುದ್ಧ ಇತ್ತೀಚೆಗೆ ಯುವತಿಯ ಅತ್ಯಾಚಾರದ ಆರೋಪ ಹೊರಿಸಿದ್ದರು.
ಶನಿವಾರ ರಾತ್ರಿ ಯುವತಿ ತಾಯಿಯ ಜತೆಗೆ ನಡೆದುಕೊಂಡು ಹೋಗುತ್ತಿದ್ದಾಗ ಕೆಲವು ಯುವಕರು ಬಂದು ಮಸಿ ಬಳಿದು ಹೋಗಿದ್ದಾರೆ. ಈ ಬಗ್ಗೆ ಮಾಹಿತಿ ಸಿಕ್ಕ ಸ್ಥಳಕ್ಕೆ ತೆರಳಿ ಯುವತಿಯನ್ನು ತಕ್ಷಣವೇ ಏಮ್ಸ್​ ಆಸ್ಪತ್ರೆಯ ಟ್ರಾಮಾ ಸೆಂಟರ್‌ಗೆ ದಾಖಲು ಮಾಡಲಾಯಿತು. ನಂತರ ಆಕೆ ಮೇಲೆ ಎಸೆದಿರುವುದು ನೀಲಿ ಇಂಕ್​​ ಎಂದು ಪ್ರಾಥಮಿಕ ತನಿಖೆಯಲ್ಲಿ ತಿಳಿದು ಬಂದಿದೆ.
ಈ ಪ್ರಕರಣಕ್ಕೆ ಸಂಬಂಧಿಸಿದಂತೆ ದೆಹಲಿ ಮಹಿಳಾ ಆಯೋಗದ ಅಧ್ಯಕ್ಷೆ ಸ್ವಾತಿ ಮಲಿವಾಲ್ ದೆಹಲಿ ಪೊಲೀಸರಿಗೆ ನೋಟಿಸ್ ಜಾರಿ ಮಾಡಿದ್ದು ಸೂಕ್ತ ಕ್ರಮ ತೆಗೆದುಕೊಳ್ಳುವಂತೆ ಸೂಚಿಸಿದ್ದಾರೆ. ಈ ಪ್ರಕರಣ ಸಂಬಂಧ ದಾಖಲಾದ ಎಫ್ಐಆರ್​ ಪ್ರತಿ, ಆರೋಪಿಗಳ ಬಂಧನ ಕುರಿತ ಮಾಹಿತಿ ಹಾಗೂ ಸಂತ್ರಸ್ತೆ ಮತ್ತು ಕುಟುಂಬಕ್ಕೆ ಸುರಕ್ಷತೆ ಹಾಗೂ ರಕ್ಷಣೆ ಬಗ್ಗೆ ಪೊಲೀಸರು ತೆಗೆದುಕೊಂಡು ಕ್ರಮಗಳ ವಿವರಣೆ ಸಲ್ಲಿಸುವಂತೆ ಪೊಲೀಸರಿಗೆ ಮಹಿಳಾ ಆಯೋಗದ ಅಧ್ಯಕ್ಷರು ಸೂಚಿಸಿದ್ದಾರೆ.
ಏನಿದು ಘಟನೆ?ಯುವತಿ ಪೊಲೀಸರಿಗೆ ನೀಡಿರುವ ದೂರಿನಲ್ಲಿ ಇರುವುದು ಏನೆಂದರೆ: ಮಹೇಶ್‌ ಜೋಶಿ ಪುತ್ರ ರೋಹಿತ್‌ ಜೋಶಿ ನನಗೆ ಫೇಸ್‌ಬುಕ್‌ನಲ್ಲಿ ಪರಿಚಯ ಆಗಿದ್ದರು. ನಂತರ ಇಬ್ಬರೂ ಭೇಟಿಯಾಗಲು ನಿರ್ಧರಿಸಿದೆವು. ನಂತರ 2021ರ ಆರಂಭದಲ್ಲಿ ಆತ ನನ್ನನ್ನು ಜೈಪುರದ ಸವಾಯಿ ಮಾಧವ್ ಪುರಕ್ಕೆ ಬರುವಂತೆ ಹೇಳಿದ್ದ. ಅಲ್ಲಿಯ ಹೋಟೆಲ್‌ ಒಂದಕ್ಕೆ ಕರೆದುಕೊಂಡು ಹೋಗಿದ್ದ. ಅಲ್ಲಿ ನಮ್ಮಿಬ್ಬರನ್ನು ಗಂಡ-ಹೆಂಡತಿ ಎಂದು ನಮೂದು ಮಾಡಿದ್ದ ಆ ಸಂದರ್ಭದಲ್ಲಿ ನನಗೆ ಗೊತ್ತಿಲ್ಲದೇ ಮತ್ತು ಬರುವ ಪಾನೀಯ ಸೇವಿಸಲು ಕೊಟ್ಟಿದ್ದಾರೆ. ನನಗೆ ಎಚ್ಚರವಾದಾಗ ನಗ್ನವಾಗಿದ್ದೆ. ಇದನ್ನು ವಿಡಿಯೋ ಮಾಡಿಕೊಂಡಿದ್ದ ಆತ ಯಾರಿಗಾದರೂ ವಿಷಯ ಹೇಳಿದರೆ ಈ ವಿಡಿಯೋ ಲೀಕ್‌ ಮಾಡುವುದಾಗಿ ಹೇಳಿದ್ದ.
ಕಳೆದ ವರ್ಷದ ಆಗಸ್ಟ್‌ ತಿಂಗಳಿನಲ್ಲಿ ನಾನು ಗರ್ಭ ಧರಿಸಿದೆ. ಗರ್ಭಪಾತ ಮಾಡುವಂತೆ ಹೇಳಿದ. ಮಾತ್ರೆ ಕೊಟ್ಟಿದ್ದ. ಆದರೆ ಅದನ್ನು ನಾನು ಸೇವಿಸಿರಲಿಲ್ಲ. ಇಷ್ಟೇ ಅಲ್ಲದೇ, ಈತ ನನ್ನ ಮೇಲೆ ದೆಹಲಿ ಮತ್ತು ಜೈಪುರದಲ್ಲಿ ಅನೇಕ ಬಾರಿ ಅತ್ಯಾಚಾರ ಎಸಗಿದ್ದಾನೆ. ನಂತರ ಮದುವೆಯಾಗದೇ ಕೈಕೊಟ್ಟಿದ್ದಾನೆ ಎಂದು ಯುವತಿ ಹೇಳಿದ್ದಾರೆ. ಪೊಲೀಸರು ತನಿಖೆ ನಡೆಸುತ್ತಿದ್ದಾರೆ.
Delhi Commission for Women issues notice to Delhi Police in the matter of an attack on a 23-year-old girl who was allegedly raped by the son of a Rajasthan Minister in May; "some unidentified persons… threw a chemical over her face & threatened her to withdraw her rape case."https://t.co/dpSbAitnuspic.twitter.com/ZVc8CmQ4Hs
— ANI (@ANI)June 12, 2022

ಯುವಕನ ಜತೆ ಟೀಚರ್ ಕಾಮದಾಟಕ್ಕೆ ಬಲಿಯಾದ ಗಂಡ! ವಿಜಯಪುರದ ಕೊಲೆ ರಹಸ್ಯ ಭೇದಿಸಿದ ಪೊಲೀಸರು

ಗಂಡ-ಹೆಂಡ್ತಿ ಮಧ್ಯೆ ಜಗಳ ತಂದಿಟ್ಟ ಮ್ಯಾಗಿ! ಬಳ್ಳಾರಿ ಯುವಕನ ಕಷ್ಟ ನೋಡಲಾಗದೇ ಡಿವೋರ್ಸ್​ ಕೊಟ್ಟ ಕೋರ್ಟ್​

ವಯಾಗ್ರ ತಂದ ಆಪತ್ತು- ಅತಿಯಾಗಿ ಸೇವಿಸಿ ಜೀವನಪೂರ್ತಿ ಪೇಚಿಗೆ ಸಿಲುಕಿದ ನವವಿವಾಹಿತ: ವೈದ್ಯರ ಎಚ್ಚರಿಕೆ

ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:3 + 1 =
Remember me
