ನವದೆಹಲಿ:ದೇಶದಲ್ಲಿ ಕೋಮು ದಳ್ಳುರಿ ಹೆಚ್ಚುತ್ತಿದ್ದು, ಮತೀಯ ಚಟುವಟಿಕೆಗಳಲ್ಲಿ ತೊಡಗಿರುವ ಪಿಎಫ್​ಐ ಸಂಘಟನೆಯನ್ನು ನಿಷೇಧಿಸಬೇಕು ಎಂಬ ಗೊತ್ತುವಳಿಯನ್ನು ಅಖಿಲ ಭಾರತ ಸೂಫಿ ಸಜ್ಜದ್​ನಶೀನ್​ ಸಮಿತಿ (ಎಐಎಸ್‌ಎಸ್‌ಸಿ) ನೇತೃತ್ವದಲ್ಲಿ ನಡೆದ ಸರ್ವಧರ್ಮ ಸಮ್ಮೇಳನದಲ್ಲಿ ಅಂಗೀಕರಿಸಲಾಗಿದೆ.
ರಾಷ್ಟ್ರೀಯ ಭದ್ರತಾ ಸಲಹೆಗಾರ ಅಜಿತ್ ದೋವಲ್ ನೇತೃತ್ವದಲ್ಲಿ ದೆಹಲಿಯಲ್ಲಿ ನಡೆದ ಈ ಸಭೆಯಲ್ಲಿ ಎಲ್ಲ ಧಾರ್ಮಿಕ ಮುಖಂಡರು ಭಾಗವಹಿಸಿದ್ದರು. ಈ ಸಂದರ್ಭದಲ್ಲಿ ಕೆಲವೊಂದು ನಿರ್ಣಯ ಮಂಡಿಸಲಾಗಿದೆ. ಯಾವುದೇ ಆಮೂಲಾಗ್ರ ಸಂಘಟನೆಯಾಗಿರಲಿ, ಅವರ ವಿರುದ್ಧ ಪುರಾವೆಗಳಿದ್ದರೆ ಅವುಗಳನ್ನು ನಿಷೇಧಿಸಬೇಕು ಎಂಬ ನಿರ್ಣಯವನ್ನು ಸಭೆಯಲ್ಲಿ ತೆಗೆದುಕೊಳ್ಳಲಾಗಿದೆ.
ಯಾವುದೇ ಅಹಿತಕರ ಘಟನೆಗಳು ಸಂಭವಿಸಿದಾಗ ನಾವು ಅದನ್ನು ಖಂಡಿಸುತ್ತೇವೆ. ಆಮೂಲಾಗ್ರ ಸಂಘಟನೆಗಳನ್ನು ನಿಯಂತ್ರಿಸುವುದು ಮತ್ತು ನಿಷೇಧಿಸುವ ಸಮಯ ಸನ್ನಿಹಿತವಾಗಿದೆ. ಮತೀಯವಾದಿಗಳನ್ನು ಮಟ್ಟಹಾಕುವುದು ನಮ್ಮ ಆದ್ಯ ಕೆಲಸವಾಗಬೇಕು. ಧರ್ಮದ ಹೆಸರಿನಲ್ಲಿ ದ್ವೇಷವನ್ನು ಸೃಷ್ಟಿಸುವವರ ವಿರುದ್ಧ ಕ್ರಮವಾಗಬೇಕು. ಇದಕ್ಕಾಗಿ ನಾವೆಲ್ಲರೂ ಒಗ್ಗೂಡಿ ಹೋರಾಡೋಣ ಎಂದು ಅಜಿತ್​ ದೋವಲ್​ ಹೇಳಿದರು. ಕೆಲವು ವಿಚಾರಗಳ ಮೇಲೆ ಧರ್ಮ ಮತ್ತು ಸಿದ್ಧಾಂತದ ಹೆಸರಿನಲ್ಲಿ ದ್ವೇಷ ಸೃಷ್ಟಿಸಲಾಗುತ್ತಿದೆ. ಇದು ಇಡೀ ರಾಷ್ಟ್ರದ ಮೇಲೆ ಪ್ರತಿಕೂಲ ಪರಿಣಾಮ ಬೀರುತ್ತಿದೆ. ಇದನ್ನು ಎದುರಿಸಲು ಧಾರ್ಮಿಕ ಮುಖಂಡರು ಒಟ್ಟಾಗಿ ಕೆಲಸ ಮಾಡಬೇಕಿದೆ” ಎಂದು ನುಡಿದರು.
ದೇಶದ ಶಾಂತಿ ಸೌಹಾರ್ದತೆ ಕಾಪಾಡಲು ಪ್ರತಿ ರಾಜ್ಯದಲ್ಲೂ ಇಂತಹ ಕಾರ್ಯಕ್ರಮಗಳನ್ನು ಹಮ್ಮಿಕೊಳ್ಳುತ್ತೇವೆ ಎಂದು ಎಐಎಸ್‌ಎಸ್‌ಸಿ ಮುಖ್ಯಸ್ಥ ನಾಸಿರುದ್ದೀನ್ ಚಿಸ್ತಿ ಹೇಳಿದರು. ಕಳೆದ ಕೆಲವು ದಿನಗಳಿಂದ ಧರ್ಮದ ಬದಲು ಅಧರ್ಮ ನಡೆಯುತ್ತಿದೆ. ಇಂದು ನಮ್ಮ ದೇಶದಲ್ಲಿ ಯುವಕರು ಮೂಲಭೂತವಾದಿಗಳಾಗಿದ್ದಾರೆ. ಇಂತಹ ಮೂಲಭೂತ ಶಕ್ತಿಗಳಿಂದ ನಾವು ಧಾರ್ಮಿಕ ಮುಖಂಡರು ದೇಶವನ್ನು ಉಳಿಸಬೇಕಾಗಿದೆ ಎಂದು ಅವರು ತಿಳಿಸಿದರು.
ಯಾವುದೇ ಧರ್ಮದ ವಿರುದ್ಧ ದ್ವೇಷ ಬಿತ್ತಬಾರದು. ವಿಶೇಷವಾಗಿ ಯುವಕರನ್ನು ಜವಾಬ್ದಾರಿಯುತ ನಾಗರಿಕರನ್ನಾಗಿ ರೂಪಿಸಬೇಕು. ಇಸ್ಲಾಮ್, ಸೂಫಿ ಸೇರಿದಂತೆ ಎಲ್ಲ ಧರ್ಮಗಳು ಮೂಲಭೂತವಾಗಿ ಮಾನವರನ್ನು ಯಾವುದೇ ತಾರತಮ್ಯವಿಲ್ಲದೆ ಪ್ರೀತಿಸಲು ಕಲಿಸುತ್ತವೆ. ಧರ್ಮದ ವಿರುದ್ಧದ ಆಂದೋಲನಕ್ಕೆ ಅವಕಾಶವಿಲ್ಲ. ಸಂವಿಧಾನದ ಆದರ್ಶಗಳನ್ನು ಪಾಲಿಸಲು ಮತ್ತು ಅನುಸರಿಸಲು ಪ್ರೇರೇಪಿಸಬೇಕು. ದೇಶದಲ್ಲಿ ಸಾಮಾಜಿಕ ಮತ್ತು ಸಾಂಸ್ಕೃತಿಕ ಸಾಮರಸ್ಯ ಮತ್ತು ಸಹೋದರತ್ವದ ಸಂದೇಶವನ್ನು ಸಾರಲು ರಾಜ್ಯ ಮತ್ತು ಜಿಲ್ಲಾ ಮಟ್ಟದಲ್ಲಿ ವಿವಿಧ ಕಾರ್ಯಕ್ರಮಗಳನ್ನು ಆಯೋಜಿಸುವುದು, ಎಲ್ಲಾ ಧಾರ್ಮಿಕ ಮುಖಂಡರು ತಮ್ಮ ಸಮುದಾಯಕ್ಕೆ ಮಾರ್ಗದರ್ಶನ ನೀಡುವ ಜವಾಬ್ದಾರಿ ಹೊರುವುದು, ಇತ್ಯಾದಿ ಕುರಿತು ಸಭೆಯಲ್ಲಿ ತೀರ್ಮಾನಿಸಲಾಯಿತು. (ಏಜೆನ್ಸೀಸ್​)
ಚಿಕನ್ ಅಂಗಡಿ ತೆರೆದಿದ್ದೇ ಪ್ರಾಣಕ್ಕೆ ಮುಳುವು? ಪ್ರವೀಣ್​ಗೆ ಮೊದಲೇ ಸಿಕ್ಕಿತ್ತಾ ಸಾವಿನ ಸುಳಿವು? ಸಹೋದರ ನೀಡಿದರು ಸ್ಫೋಟಕ ಹೇಳಿಕೆ

VIDEO: ಬಿಜೆಪಿ ಮುಖಂಡ ಪ್ರವೀಣ್​ ಹತ್ಯೆಯ ಪ್ರಮುಖ ಆರೋಪಿ ಷಫೀಕ್​ ಪತ್ನಿ ಹೇಳಿದ್ದೇನು ಕೇಳಿ…

ಕಳ್ಳ-ಪೊಲೀಸ್​ ಆಡುತ್ತಾ ಗುಂಡು ಹಾರಿಸಿದ ಬಿಜೆಪಿ ಮುಖಂಡನ ಪುತ್ರ: ಪ್ರಾಣ ಬಿಟ್ಟ ನೆರೆಮನೆಯ ಬಾಲಕ!

ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:1 × 4 =
Remember me
