ನವದೆಹಲಿ:ಯೂಕ್ರೇನ್‌- ರಷ್ಯಾ ಬಿಕ್ಕಟ್ಟು ವಿವಿಧ ರಾಷ್ಟ್ರಗಳ ಆರ್ಥಿಕತೆಯ ಮೇಲೆ ಭಾರಿ ತಲ್ಲಣ ಸೃಷ್ಟಿ ಮಾಡಿದೆ. ಷೇರುಮಾರುಕಟ್ಟೆಯಲ್ಲಿ ತಲ್ಲಣ ಸೃಷ್ಟಿಯಾಗಿದ್ದು, ಒಂದೇ ತಾಸಲ್ಲಿ 8 ಲಕ್ಷ ಕೋಟಿ ರೂಪಾಯಿಗೂ ಹೆಚ್ಚು ಕುಸಿತ ಕಂಡಿದೆ.
ಭಾರತದ ಮೇಲೆಯೂ ಸಾಕಷ್ಟು ಪರಿಣಾಮ ಬೀರಿದ್ದು, ಬಿಎಸ್​ಇ ಪಟ್ಟಿಯ ಕಂಪನಿಯ ಹೂಡಿಕೆದಾರರ ಸಂಪತ್ತು ಕೇವಲ ಒಂದು ಗಂಟೆ ಅವಧಿಯಲ್ಲಿ 8 ಲಕ್ಷ ಕೋಟಿ ರೂಪಾಯಿಗೂ ಹೆಚ್ಚು ಕುಸಿದಿದೆ ಎನ್ನಲಾಗಿದೆ. ಇದರಿಂದಾಗಿ ವಿವಿಧ ಕಂಪನಿಗಳ ಮೇಲೆ ಹೂಡಿಕೆ ಮಾಡುವ ಹೂಡಿಕೆಯದಾರಿಗೆ ಶಾಕ್​ ಆದಂತಾಗಿದೆ. ಅಮೆರಿಕ ಮಿತ್ರ ರಾಷ್ಟ್ರಗಳು ರಷ್ಯಾದ ಮೇಲೆ ನಿರ್ಬಂಧ ಹೇರಿರುವ ಕಾರಣದಿಂದಾಗಿ ಆರ್ಥಿಕತೆಗೆ ಮತ್ತಷ್ಟು ಹೊಡೆತ ಬೀಳಲಿದೆ.
ಮುಂಬೈ ಷೇರುಪೇಟೆಯ ಪಟ್ಟಿಯಲ್ಲಿರುವ ಕಂಪನಿಗಳ ಮಾರುಕಟ್ಟೆ ಬಂಡವಾಳವು ಬೆಳಗ್ಗೆ 10.15ರ ಸುಮಾರಿಗೆ 2,47,46,960.48 ಕೋಟಿ ರೂಪಾಯಿಗೆ ಕುಸಿದಿದೆ. ಮಾರುಕಟ್ಟೆ ಬಂಡವಾಳ ಎಂದರೆ ಒಂದು ಕಂಪನಿಯ ಒಟ್ಟು ಷೇರುಗಳ ಮೌಲ್ಯವಾಗಿದೆ. ಇದು 2.48 ಸಾವಿರ ಕೋಟಿ ರೂಪಾಯಿಗೆ ಕುಸಿದಿದೆ. ಬುಧವಾರದ ಮುಂಬೈ ಷೇರು ಮಾರುಕಟ್ಟೆಯಲ್ಲಿ ವಹಿವಾಟು ಮುಕ್ತಾಯವಾದಾಗ ವಹಿವಾಟಿನ ಮುಕ್ತಾಯಕ್ಕೆ ಮಾರುಕಟ್ಟೆ ಬಂಡವಾಳವು 2,55,68,668.33 ಕೋಟಿ ರೂಪಾಯಿ ಇತ್ತು. ಈಗ 8.2 ಲಕ್ಷ ಕೋಟಿ ರೂಪಾಯಿ ಕುಸಿತವನ್ನು ಕಂಡಿದೆ.
ದೇಶದ ಸೆನ್ಸೆಕ್ಸ್ ಮತ್ತು ನಿಫ್ಟಿ ಗುರುವಾರ ಮುಂಜಾನೆ ಶೇಕಡಾ 3ಕ್ಕಿಂತ ಹೆಚ್ಚು ಕುಸಿತ ಕಂಡಿವೆ. ಬಿಎಸ್​ಇ ಸೆನ್ಸೆಕ್ಸ್ 1,718.99 ಪಾಯಿಂಟ್‌ಗಳು ಅಥವಾ ಶೇಕಡಾ 3ರಷ್ಟು ಕುಸಿದು 55,513.07 ಪಾಯಿಂಟ್​ಗಳಿಗೆ ಇಳಿಕೆ ಕಂಡಿದೆ. ನಿಫ್ಟಿ 508.85 ಪಾಯಿಂಟ್ ಅಥವಾ ಶೇಕಡಾ 2.98ರಷ್ಟು ಕುಸಿದು 16,554.40 ಅಂಕಗಳಿಗೆ ತಲುಪಿದೆ.
ರಷ್ಯಾ-ಯೂಕ್ರೇನ್​ ಬಿಕ್ಕಟ್ಟು : ಭಾರತದ ವಿಮಾನಗಳು ವಾಪಸ್​- ಕೀವ್​ನಲ್ಲಿ ಸಂಕಷ್ಟಕ್ಕೆ ಸಿಲುಕಿರುವ ಭಾರತೀಯರು

ರಷ್ಯಾಗೆ ಭೇಟಿ ನೀಡಿದ ಪಾಕ್​ ಪ್ರಧಾನಿ: ರಷ್ಯಾ-ಯೂಕ್ರೇನ್​ ಯುದ್ಧವನ್ನು ರೋಮಾಂಚನಾಕಾರಿ ಎಂದ ಇಮ್ರಾನ್​ ಖಾನ್​

ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:5 × 3 =
Remember me
