ಟೆಹರಾನ್‌:ಹಿಜಾಬ್​ ಧರಿಸುವುದು, ಕೂದಲು ಕತ್ತರಿಸುವುದು ಸೇರಿದಂತೆ ಮುಸ್ಲಿಂ ಮಹಿಳೆಯರನ್ನು ಬಂಧಿಸಿಟ್ಟಿರುವ ಕಾನೂನಿನ ವಿರುದ್ಧ ಇರಾನ್​ನಲ್ಲಿ ಎರಡು ವಾರಗಳಿಂದ ಮಹಿಳೆಯರು ನಡೆಸುತ್ತಿರುವ ಪ್ರತಿಭಟನೆ ಸದ್ಯ ನಿಲ್ಲುವಂತೆ ಕಾಣಿಸುತ್ತಿಲ್ಲ. ಈ ಘಟನೆಯಲ್ಲಿ 70ಕ್ಕೂ ಅಧಿಕ ಮಂದಿ ಇದಾಗಲೇ ಜೀವ ಕಳೆದುಕೊಂಡಿದ್ದಾರೆ.
ಮಹಿಳೆಯರು ರಸ್ತೆಗಿಳಿದು ಹಿಜಾಬ್​ ಸುಡುವುದು, ಕೂದಲು ಕತ್ತರಿಸಿಕೊಳ್ಳುವ ಪ್ರಕ್ರಿಯೆಯನ್ನು ಮುಂದುವರೆಸಿದ್ದಾರೆ. ಸಾರ್ವಜನಿಕ ಸ್ಥಳದಲ್ಲಿ ಹಿಜಾಬ್ ಧರಿಸದ ಕಾರಣಕ್ಕಾಗಿ ಇರಾನ್​ನಲ್ಲಿ ಕುರ್ದಿಸ್ತಾನ್ ಪ್ರಾಂತ್ಯದ ಮಹ್ಸಾ ಆಮಿನಿ ಎಂಬ 22 ವರ್ಷದ ಯುವತಿಯನ್ನು ಪೊಲೀಸರು ಬಂಧಿಸಿ, ವ್ಯಾನ್​ನಲ್ಲಿ ಹಿಗ್ಗಾಮುಗ್ಗಾ ಥಳಿಸಿದ್ದರಿಂದ ಕೆಲ ದಿನಗಳ ಹಿಂದೆ ಯುವತಿಯೊಬ್ಬಳು ಮೃತಪಟ್ಟಿದ್ದಳು. ಈ ಘಟನೆಯ ನಂತರ ಇರಾನ್​ನಲ್ಲಿ ಮಹಿಳೆಯರು ಹಿಂದೆಂದೂ ಕಾಣದ ರೀತಿಯಲ್ಲಿ ಪ್ರತಿಭಟನೆ ನಡೆಸುತ್ತಿದ್ದಾರೆ.
ಈ ಇರಾನ್​ನ ಪ್ರತಿಭಟನೆಯ ಕಾವು ಮುಸ್ಲಿಮರೇ ಹೆಚ್ಚಾಗಿರುವ ಟರ್ಕಿಗೂ ಹರಡಿದೆ. ಸುಪ್ರಸಿದ್ಧ ಗಾಯಕಿ ಮಾಲೆಕ್‌ ಮೊಸ್ಸೋ ಎಂಬಾಕೆ ವೇದಿಕೆಯ ಮೇಲೆ ಕೂದಲು ಕತ್ತರಿಸಿಕೊಂಡು ತಾನು ಇರಾನ್​ ಮಹಿಳೆಯರಿಗೆ ಬೆಂಬಲ ಸೂಚಿಸುತ್ತಿರುವುದಾಗಿ ಹೇಳಿಕೊಂಡಿದ್ದಾರೆ.
ಮಾಲೆಕ್‌ ಮೊಸ್ಸೋ ಕಾರ್ಯಕ್ರಮವೊಂದರಲ್ಲಿ ಪಾಲ್ಗೊಂಡಿದ್ದರು. ಪ್ರದರ್ಶನದ ಸಮಯದಲ್ಲಿ ಪ್ರೇಕ್ಷಕರು ಗಾಯಕಿಯನ್ನು ಶ್ಲಾಘಿಸಿದಾಗ ಮೆಲೆಕ್ ಮೊಸ್ಸೊ ತಮ್ಮ ಕೂದಲನ್ನು ಕತ್ತರಿಸಿಕೊಂಡು ಇರಾನ್‌ ಮಹಿಳೆಯರ ಪ್ರತಿಭಟನೆಗೆ ಬೆಂಬಲವನ್ನು ವ್ಯಕ್ತಪಡಿಸಿದ್ದಾರೆ.
ಅಂದಹಾಗೆ ಈ ಗಾಯಕಿ, ಮಾಲೆಕ್‌ ಮೊಸ್ಸೋ ಮಹಿಳಾ ಹಕ್ಕುಗಳ ಬೆಂಬಲಕ್ಕಾಗಿ ಈಗಾಗಲೇ ಅನೇಕ ಬಾರಿ ಹೋರಾಡಿದ್ದಾರೆ. 2020ರಲ್ಲಿ ಟರ್ಕಿಯಲ್ಲಿ ಅತ್ಯಾಚಾರಿ ಪೊಲೀಸ್ ಅಧಿಕಾರಿಯ ಬಿಡುಗಡೆ ಕುರಿತು ಟೀಕಿಸಿದ್ದರು. ಈ ಹಿನ್ನೆಲೆಯಲ್ಲಿ ಗಾಯಕಿಯನ್ನು ವೇದಿಕೆಯಿಂದ ಕೆಳಗಿಳಿಸಲಾಗಿತ್ತು. ಇದೀಗ ಇರಾನಿ ಮಹಿಳೆಯರಿಗೆ ಈಕೆ ಬೆಂಬಲ ಸೂಚಿಸಿದ್ದಾರೆ. ಈಕೆಯ ಮಾತಿಗೆ ಅಸಂಖ್ಯ ಜನರು ಬೆಂಬಲ ಕೂಡ ಸೂಚಿಸಿದ್ದಾರೆ(ಏಜೆನ್ಸೀಸ್​)
ಇಲ್ಲಿದೆ ನೋಡಿ ವಿಡಿಯೋ:
Turkish singer@MelekMossocuts off her hair on stage in solidarity with the Iranian women. Thank you Melek!#MahsaAmini#مهسا_امینی#IranProtests2022pic.twitter.com/ZjISxjGkAL— Omid Memarian (@Omid_M)September 27, 2022
Turkish singer@MelekMossocuts off her hair on stage in solidarity with the Iranian women. Thank you Melek!#MahsaAmini#مهسا_امینی#IranProtests2022pic.twitter.com/ZjISxjGkAL
ಭಾರತದಲ್ಲಿ ಬೇಳೆಕಾಳುಗಳು ಜನರು ಬಹುಮುಖ್ಯ ಭಕ್ಷ್ಯವಾಗಿದೆ. ಬೇಳೆಕಾಳುಗಳನ್ನು ವಾರಕ್ಕೊಮ್ಮೆಯಾದರೂ ತಿನ್ನಲಾಗುತ್ತದೆ. ಈ ಬೇಳೆಕಾಳುಗಳು ಪೋಷಕಾಂಶಗಳ ಆಗರವಾಗಿದ್ದು,…
ಬೆಂಗಳೂರು:  ಪಾಲಕರು ಪ್ರತಿ ಮಗುವಿನ ಮೊದಲ ಶಿಕ್ಷಕರು, ಅವರ ರೋಲ್ ಮಾಡೆಲ್. ಮಕ್ಕಳ ನಡವಳಿಕೆಯ ಮೇಲೆ…
ಅನೇಕ ಜನರು ತಮ್ಮ ಭವಿಷ್ಯವನ್ನು ತಿಳಿದುಕೊಳ್ಳಲು ತುಂಬಾ ಆಸಕ್ತಿ ಹೊಂದಿರುತ್ತಾರೆ. ಮುಂದಿನ ದಿನಗಳಲ್ಲಿ ನಮ್ಮ ಜೀವನದಲ್ಲಿ…
Sign in to your account
Please enter an answer in digits:eight + four =
Remember me
